ಸಂಬಂಧಿಯನ್ನು ಕಚ್ಚಿದ ನಾಯಿಯನ್ನೇ ಕೊಂದು ತಿಂದ ವ್ಯಕ್ತಿ; ಬಂಧನ

Date:

ತನ್ನ ಸಂಬಂಧಿ 7 ವರ್ಷದ ಬಾಲಕನನ್ನು ಕಚ್ಚಿದ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ತಾನು ಸಾಕಿದ್ದ ನಾಯಿಯನ್ನೇ ಕೊಂದು, ತಿಂದಿರುವ ಘಟನೆ ಥೈಲ್ಯಾಂಡ್‌ನ ಚಿಯಾಂಗ್ ಮಾಯ್‌ನಲ್ಲಿ ನಡೆದಿದೆ. ಘಟನೆಯ ದೃಶ್ಯಗಳು ಸಿಟಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

- Advertisement -

ಮೇ 1 ರಂದು ವಾಚ್‌ಡಾಗ್ ಥೈಲ್ಯಾಂಡ್ ಫೌಂಡೇಶನ್ (ಡಬ್ಲ್ಯುಡಿಟಿ) ನೀಡಿದ ದೂರಿನ ಆಧಾರದ ಮೇಲೆ ಸಾಂಗ್‌ವುಟ್ ಚುಥಾಂಗ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತನ ತಾನು ಸಾಕಿದ್ದ 10 ವರ್ಷದ ನಾಯಿಯನ್ನು ಏಪ್ರಿಲ್ 29ರಂದು ಕೊಂದಿದ್ದಾನೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸಿಸಿಟಿವಿ ವೀಡಿಯೋದಲ್ಲಿ, ಆರೋಪಿ ಸಾಂಗ್‌ವುಟ್, ತನ್ನ ನಾಯಿಯ ಕುತ್ತಿಗೆಗೆ ಹಗ್ಗವನ್ನು ಕಟ್ಟಿ ಎಳೆದೊಯ್ದು, ಮರಕ್ಕೆ ನೇತುಹಾಕಿದ್ದಾನೆ. ನಾಯಿ ಸತ್ತ ಬಳಿಕ, ಅದನ್ನು ಗೋಣಿಚೀಲದಲ್ಲಿ ಹಾಕಿಕೊಂಡು ಸ್ಥಳದಿಂದ ತೆರಳಿದ್ದಾರೆ.

“ಸಾಂಗ್‌ವುಟ್‌ನನ್ನು ಬುಧವಾರ ಮಧ್ಯಾಹ್ನ ಬಂಧಿಸಲಾಗಿದೆ. ವಿಚಾರಣೆ ವೇಳೆ, ನಾಯಿಯನ್ನು ಕೊಂದಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ಆದರೆ, ನಾಯಿಯ ಮೃತದೇಹವನ್ನು ಆತ ಏನು ಮಾಡಿದನೆಂದು ಹೇಳಲು ಆತ ನಿರಾಕರಿಸಿದ್ದ” ಎಂದು ಡಬ್ಲ್ಯುಡಿಟಿ ಸಂಕಂಪೇಂಗ್ ಪೊಲೀಸರು ತಿಳಿಸಿದ್ದಾರೆ.

“ಆತನನ್ನು ಹೆಚ್ಚಿನ ವಿಚಾರಣೆ ಒಳಪಡಿಸಲಾಗಿದ್ದು, ಆತನ ನಾಯಿಯ ಮಾಂಸವನ್ನು ತಿಂದಿದ್ದಾನೆ. ಅಲ್ಲದೆ, ತನ್ನ ಸ್ನೇಹಿತನಿಗೂ ಕೊಟ್ಟಿದ್ದಾನೆ. ಆತನ ಮನೆಯಲ್ಲಿ ಶೋಧ ನಡೆಸಿದಾಗ ಫ್ರಿಡ್ಜ್‌ನಲ್ಲಿ ಉಳಿದಿದ್ದ ನಾಯಿಯ ಮಾಂಸ ಪತ್ತೆಯಾಗಿದೆ” ಎಂದು ವರದಿಯಾಗಿದೆ.

ತಾನೇ ಸಾಕಿದ್ದ ನಾಯಿಯನ್ನು ಕೊಂದಿದ್ದಕ್ಕಾಗಿ ತನ್ನ ವಿರುದ್ಧ ಪ್ರಾಣಿಹಿಂಸೆ ಆರೋಪ ಅಥವಾ ಪ್ರಕರಣ ದಾಖಲಾಗುವುದಿಲ್ಲ ಎಂದು ಆತ ಭಾವಿಸಿದ್ದಾಗಿ ವರದಿಯಾಗಿದೆ.

ಥಾಯ್ಲೆಂಡ್ ಪೊಲೀಸರು ಸಾಂಗ್‌ವುಟ್‌ನ ಸ್ನೇಹಿತ ರೋಜ್‌ನನ್ನು ಕೂಡ ಬಂಧಿಸಿದ್ದಾರೆ. ಅವರಿಬ್ಬರ ವಿರುದ್ಧ ಥಾಯ್ಲೆಂಡ್‌ನ ಕ್ರಿಮಿನಲ್ ಕಾನೂನಿನ ಸೆಕ್ಷನ್ 340 (ಅಪರಾಧಕ್ಕೆ ಸಹಾಯ ಮಾಡಲು ವಾಹನ ಬಳಕೆ) ಮತ್ತು ಸೆಕ್ಷನ್ 296 (ಸಾರ್ವಜನಿಕ ಸ್ಥಳದಲ್ಲಿ ಪ್ರಾಣಿಗಳ ಶವ ವಿಲೇವಾರಿ) ಜೊತೆಗೆ, ಪ್ರಾಣಿ ಹಿಂಸೆ ತಡೆಗಟ್ಟುವಿಕೆ ಮತ್ತು ಪ್ರಾಣಿ ಕಲ್ಯಾಣ ಕಾಯಿದೆಯ ಸೆಕ್ಷನ್ 20 (ಪ್ರಾಣಿಗಳ ಮೇಲೆ ಕ್ರೌರ್ಯ ಅಥವಾ ಅವುಗಳನ್ನು ಕೊಲ್ಲುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...