ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

Date:

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು, ಕನಿಷ್ಠ 27 ಜನರು ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳು ವಸತಿಪ್ರದೇಶಗಳಲ್ಲಿ ಗುಂಡಿನ ಮಳೆಗಳೆದಿದ್ದು ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದಾರೆ.

- Advertisement -

ಬಂದೂಕುಧಾರಿಗಳು ಪಟ್ಟಣಗಳಲ್ಲಿರುವ ಮದ್ಯದ ಅಂಗಡಿಗಳು, ಸಾರ್ವಜನಿಕ ವಸತಿ ಪ್ರದೇಶಗಳು ಹಾಗೂ ನಿವಾಸಿಗಳು ನೆರೆದಿದ್ದ ಸ್ಥಳಗಳನ್ನು ಗುರಿಯಾಗಿಸಿಕೊಂಡು ಏಕಾಏಕಿ ದಾಳಿ ನಡೆಸಿದ್ದಾರೆ. ವಾಹನಗಳಲ್ಲಿ ಬಂದ ದುಷ್ಕರ್ಮಿಗಳು ಸಾರ್ವಜನಿಕರ ಗುಂಡು ಹಾಕಿರಿಸಿದ್ದು, ಘಟನಾ ಸ್ಥಳದಲ್ಲೇ ಹಲವರು ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಲವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಪರಿಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪ್ರಾಥಮಿಕ ತನಿಖೆಯ ಪ್ರಕಾರ, ಈ ಭೀಕರ ಹತ್ಯಾಕಾಂಡಗಳ ಹಿಂದೆ ಸ್ಥಳೀಯವಾಗಿ ಸಕ್ರಿಯವಾಗಿರುವ ರೌಡಿ ಗ್ಯಾಂಗ್‌ಗಳ ವೈಷಮ್ಯ ಮತ್ತು ಅಧಿಪತ್ಯದ ಕಾಳಗವೇ ಕಾರಣ ಎನ್ನಲಾಗಿದೆ. ಅನಧಿಕೃತ ಚಟುವಟಿಕೆಗಳು, ಪ್ರದೇಶದ ಮೇಲೆ ಹಿಡಿತ ಸಾಧಿಸುವ ಯತ್ನ ಹಾಗೂ ವ್ಯಾಪಾರಿಗಳಿಂದ ಹಪ್ತಾ ವಸೂಲಿ ಮಾಡಲು ಈ ಗ್ಯಾಂಗ್‌ಗಳ ನಡುವೆ ನಡೆಯುತ್ತಿರುವ ಸಂಘರ್ಷವೇ ಪ್ರಮಾದಕ್ಕೆ ಎಡೆಮಾಡಿಕೊಟ್ಟಿದೆ.

ಈ ಸರಣಿ ದಾಳಿಗಳ ಬೆನ್ನಲ್ಲೇ ದಕ್ಷಿಣ ಆಫ್ರಿಕಾದ ರಾಷ್ಟ್ರೀಯ ಪೊಲೀಸ್ ಪಡೆ ಹೈ-ಅಲರ್ಟ್ ಘೋಷಿಸಿದ್ದು, ಪರಾರಿಯಾಗಿರುವ ಬಂದೂಕುಧಾರಿಗಳ ಬಂಧನಕ್ಕೆ ಬೃಹತ್ ಕಾರ್ಯಾಚರಣೆ ಆರಂಭಿಸಿದೆ. ಪ್ರಮುಖ ಸ್ಥಳಗಳನ್ನು ಸುತ್ತುವರಿದಿರುವ ಭದ್ರತಾ ಪಡೆಗಳು ಶಂಕಿತ ನೆಲೆಗಳ ಮೇಲೆ ದಾಳಿ ನಡೆಸುತ್ತಿವೆ. ಪ್ರಪಂಚದಲ್ಲೇ ಅತ್ಯಧಿಕ ಕೊಲೆ ಮತ್ತು ಬಂದೂಕು ಅಪರಾಧಗಳಿಗೆ ಕುಖ್ಯಾತಿ ಪಡೆದಿರುವ ದಕ್ಷಿಣ ಆಫ್ರಿಕಾದಲ್ಲಿ ಇತ್ತೀಚಿನ ದಿನಗಳಲ್ಲಿ ಪಟ್ಟಣಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಇಂತಹ ಸರಣಿ ದಾಳಿಗಳು ಸರ್ಕಾರಕ್ಕೆ ಭಾರಿ ಸವಾಲಾಗಿ ಪರಿಣಮಿಸಿವೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...