ಅಮೆರಿಕ | ವಾಲ್‌ಮಾರ್ಟ್ ಮಳಿಗೆಯಲ್ಲಿ ಸಾಮೂಹಿಕ ಚಾಕು ಇರಿತ; 11 ಮಂದಿಗೆ ಗಾಯ

Date:

ಅಮೆರಿಕದ ಉತ್ತರ ಮಿಚಿಗನ್‌ನ ಟ್ರಾವರ್ಸ್ ಸಿಟಿಯ ವಾಲ್‌ಮಾರ್ಟ್ ಮಳಿಗೆಯಲ್ಲಿ ಶನಿವಾರ ಸಂಜೆ ಆಗಂತುಕನೊಬ್ಬ 11 ಮಂದಿಗೆ ಚಾಕು ಇರಿದ ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಸಾರ್ವಜನಿಕರಲ್ಲಿ ಭೀತಿ ಮೂಡಿದ್ದು, ಸ್ಥಳೀಯ ಆಡಳಿತ ತುರ್ತಾಗಿ ಸ್ಪಂದಿಸಿದೆ.

- Advertisement -

ಗ್ರ್ಯಾಂಡ್ ಟ್ರಾವರ್ಸ್ ಕೌಂಟಿ ಶೆರಿಫ್ ಕಚೇರಿಯು ತನಿಖೆಯನ್ನು ನಡೆಸುತ್ತಿದ್ದು, 42 ವರ್ಷದ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಿಚಿಗನ್ ರಾಜ್ಯ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಿಚಿಗನ್ ರಾಜ್ಯ ಪೊಲೀಸರು ವಾಲ್‌ಮಾರ್ಟ್ ಮಳಿಗೆಯಲ್ಲಿ ಘಟನೆ ನಡೆದಿರುವುದನ್ನು ದೃಢಪಡಿಸಿದ್ದಾರೆ. ಶಂಕಿತನು ಮಿಚಿಗನ್ ನಿವಾಸಿಯಾಗಿದ್ದು, ಯಾವುದೇ ಉದ್ದೇಶವಿಲ್ಲದೆ ಈ ದಾಳಿಯನ್ನು ನಡೆಸಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ?: ಕೊಡಗಿನ ಗೌರಮ್ಮ ಅವರ ಕತೆ | ವಾಣಿಯ ಸಮಸ್ಯೆ

ತನಿಖೆ ನಡೆಯುತ್ತಿರುವುದರಿಂದ ಈ ಪ್ರದೇಶದಲ್ಲಿ ತೆರಳದಂತೆ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಟ್ರಾವರ್ಸ್ ಸಿಟಿಯ ಮನ್ಸನ್ ಮೆಡಿಕಲ್ ಸೆಂಟರ್‌ನಲ್ಲಿ 11 ಮಂದಿ ಸಂತ್ರಸ್ತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮನ್ಸನ್ ಹೆಲ್ತ್‌ ಕೇರ್‌ನ ಮುಖ್ಯ ಸಂವಹನಾಧಿಕಾರಿ ಮೇಗನ್ ಬ್ರೌನ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಅವರಿಗೆ ಆದ ಗಾಯಗಳ ಗಂಭೀರತೆ ಅಂದಾಜಿಸಲಾಗುತ್ತಿದ್ದು, ನಿರ್ದಿಷ್ಟ ವಿವರಗಳನ್ನು ನೀಡುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಸ್ಪತ್ರೆ ಕೂಡ 11 ಮಂದಿ ಘಟನೆಯಲ್ಲಿ ಗಾಯಗೊಂಡಿರುವುದನ್ನು ಸ್ಪಷ್ಟಪಡಿಸಿದ್ದು, ಸೂಕ್ತ ಸಮಯದಲ್ಲಿ ಹೆಚ್ಚಿನ ವಿವರ ನೀಡುವುದಾಗಿ ಹೇಳಿದೆ. ಕಾನೂನು ಜಾರಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಾಲ್‌ಮಾರ್ಟ್ ವಕ್ತಾರ ಜೋ ಪೆನ್ನಿಂಗ್ಟನ್ ಹೇಳಿದ್ದಾರೆ.

ತನಿಖೆಗಾಗಿ ವಾಲ್‌ಮಾರ್ಟ್ ಮಳಿಗೆಯನ್ನು ಮುಚ್ಚಲಾಗಿದೆ. ಮಿಚಿಗನ್ ರಾಜ್ಯ ಪೊಲೀಸ್ ಕ್ರೈಂ ಲ್ಯಾಬ್ ತಂಡವು ಘಟನಾ ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹಕ್ಕೆ ತೆರಳಿದೆ. ಎಫ್‌ಬಿಐ ಕೂಡ ಗ್ರ್ಯಾಂಡ್ ಟ್ರಾವರ್ಸ್ ಕೌಂಟಿ ಶೆರಿಫ್ ಕಚೇರಿಗೆ ಸಹಕಾರ ನೀಡುತ್ತಿದೆ ಎಂದು ಎಫ್‌ಬಿಐ ಉಪ ನಿರ್ದೇಶಕ ಡಾನ್ ಬೊಂಗಿನೊ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...