ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ

Date:

ದಕ್ಷಿಣ ಫಿಲಿಪೈನ್ಸ್‌ನ ಕರಾವಳಿ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.6ರಷ್ಟು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಸಮೀಪದ ಕರಾವಳಿ ಪ್ರದೇಶಗಳಿಗೆ ಸುನಾಮಿ ಅಪ್ಪಳಿಸುವ ಸಾಧ್ಯತೆ ಇದ್ದು, ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

- Advertisement -

ಫಿಲಿಪೈನ್ಸ್‌ನ ಜ್ವಾಲಾಮುಖಿ ಮತ್ತು ಭೂಕಂಪಶಾಸ್ತ್ರ ಸಂಸ್ಥೆಯ ಪ್ರಕಾರ, ದಾವೊ ಓರಿಯಂಟಲ್ ಪ್ರಾಂತ್ಯದ ಮನಯ್ ಪಟ್ಟಣದಿಂದ ಆಗ್ನೇಯಕ್ಕೆ ಸುಮಾರು 62 ಕಿಲೋಮೀಟರ್ ದೂರದಲ್ಲಿ ಈ ಭೂಕಂಪದ ಕೇಂದ್ರಬಿಂದು ದಾಖಲಾಗಿದೆ. ಇದು ಸಮುದ್ರದ ಅಡಿಯಲ್ಲಿ 10 ಕಿಲೋಮೀಟರ್ ಆಳದಲ್ಲಿ ಇತ್ತು ಎಂದು ಸಂಸ್ಥೆ ವಿವರ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಭೂಕಂಪದಿಂದಾಗಿ ಹಾನಿ ಮತ್ತು ನಂತರದ ಕಂಪನಗಳಾಗುವ ನಿರೀಕ್ಷೆ ಇದೆ ಎಂದು ಜ್ವಾಲಾಮುಖಿ ಮತ್ತು ಭೂಕಂಪಶಾಸ್ತ್ರ ಸಂಸ್ಥೆ ಎಚ್ಚರಿಕೆ ನೀಡಿದೆ.

ಕಂಪನದ ಬೆನ್ನಲ್ಲೇ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು, ಭೂಕಂಪದ ಕೇಂದ್ರ ಬಿಂದುವಿನಿಂದ 300 ಕಿಲೋಮೀಟರ್ ವ್ಯಾಪ್ತಿಯಲ್ಲಿ ಅಪಾಯಕಾರಿ ಅಲೆಗಳು ಏಳುವ ಸಾಧ್ಯತೆಯಿದೆ ಎಂದು ಹೇಳಿದೆ. ಭೂಕಂಪದ ಕೇಂದ್ರಕ್ಕೆ ಸಮೀಪವಿರುವ ಕೆಲವು ಫಿಲಿಪ್ಪೀನ್ಸ್ ಕರಾವಳಿಗಳಲ್ಲಿ ಸಾಮಾನ್ಯ ಉಬ್ಬರವಿಳಿತಗಳಿಗಿಂತ 3 ಮೀಟರ್ (10 ಅಡಿ) ಎತ್ತರದ ಅಲೆಗಳು ಅಪ್ಪಳಿಸಬಹುದು.

ಇದನ್ನು ಓದಿದ್ದೀರಾ? ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ: 69 ಸಾವು, 140ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಗೂ ಇಂಡೋನೇಷ್ಯಾ ಮತ್ತು ಪಲಾವ್‌ನಲ್ಲೂ ಸಣ್ಣ ಅಲೆಗಳು ಉಂಟಾಗಬಹುದು ಎಂದು ಸುನಾಮಿ ಎಚ್ಚರಿಕೆ ಕೇಂದ್ರ ಸಂದೇಶವನ್ನು ರವಾನಿಸಿದೆ.

ಕೆಲವೇ ದಿನಗಳ ಹಿಂದೆ, ಅಂದರೆ ಸೆಪ್ಟೆಂಬರ್ 30ರಂದು ಸೆಬು ಪ್ರಾಂತ್ಯದಲ್ಲಿ ಇದೇ ರೀತಿಯ 6.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಈ ದುರಂತದಲ್ಲಿ ಕನಿಷ್ಠ 74 ಜನರು ಸಾವಿಗೀಡಾಗಿ, ಸಾವಿರಾರು ಮಂದಿ ನಿರಾಶ್ರಿತರಾಗಿದ್ದರು. ಈ ಘಟನೆಯಿಂದ ದೇಶ ಚೇತರಿಸಿಕೊಳ್ಳುತ್ತಿರುವಾಗಲೇ ಫಿಲಿಪೈನ್ಸ್‌ಗೆ ಮತ್ತೊಂದು ಭೂಕಂಪದ ಆಘಾತ ಎದುರಾಗಿದೆ.

ಫಿಲಿಪೈನ್ಸ್‌ ದೇಶವು ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’ ಮೇಲೆ ನೆಲೆಗೊಂಡಿದೆ. ಈ ಪ್ರದೇಶವು ವಿಶ್ವದಲ್ಲೇ ಅತಿ ಹೆಚ್ಚು ವಿಪತ್ತು ಪೀಡಿತ ಪ್ರದೇಶವಾಗಿದ್ದು, ಈ ಭಾಗದಲ್ಲಿ ಬರುವ ದೇಶಗಳಿಗೆ ಗಂಡಾಂತರ ತಪ್ಪಿದ್ದಲ್ಲ. ಈ ಕಾರಣದಿಂದಾಗಿ ಇಲ್ಲಿ ಆಗಾಗ್ಗೆ ಭೂಕಂಪಗಳು ಹಾಗೂ ಜ್ವಾಲಾಮುಖಿ ಸ್ಫೋಟಗಳು ಸಂಭವಿಸುತ್ತಲೇ ಇರುತ್ತವೆ. ಇದರ ಜೊತೆಗೆ, ಪ್ರತಿ ವರ್ಷ ಸುಮಾರು 20 ಚಂಡಮಾರುತಗಳು ಮತ್ತು ಬಿರುಗಾಳಿಗಳು ಈ ದ್ವೀಪ ಸಮೂಹಕ್ಕೆ ಅಪ್ಪಳಿಸುವುದು ವಾಡಿಕೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...