ಅಮೆರಿಕದ ಸೇನಾ ಸ್ಫೋಟಕ ತಯಾರಿಕಾ ಘಟಕದಲ್ಲಿ ಸ್ಫೋಟ; 19 ಮಂದಿ ಸಾವಿನ ಶಂಕೆ

Date:

ಗ್ರಾಮೀಣ ಟೆನ್ನೀಸೀಯಲ್ಲಿರುವ ಅಮೆರಿಕ ಸೇನೆಯ ಸ್ಫೋಟಕ ಸಂಸ್ಕರಣಾ ಘಟಕದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಸ್ಫೋಟ ಘಟನೆಯಲ್ಲಿ 19 ಮಂದಿ ನಾಪತ್ತೆಯಾಗಿದ್ದು, ಎಲ್ಲರೂ ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ಅಕ್ಯುರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಕಂಪನಿಯ 1300 ಎಕರೆ ವಿಸ್ತಾರದ ಕ್ಯಾಂಪಸ್ ನಲ್ಲಿ ಸಂಭವಿಸಿದ ಸ್ಫೋಟ ಇಡೀ ಕಟ್ಟಡವನ್ನು ನಾಮಾವಶೇಷ ಮಾಡಿದ್ದು, ಹಲವು ಮೈಲಿಗಳ ದೂರದವರೆಗೆ ಕಂಪನದ ಅನುಭವವಾಗಿದೆ.

- Advertisement -

ಅವಶೇಷಗಳು ಹೊತ್ತಿ ಉರಿಯುತ್ತಿದ್ದ ಹಿನ್ನೆಲೆಯಲ್ಲಿ ಮತ್ತು ಪೂರಕ ಸ್ಫೋಟಗಳ ಭೀತಿಯಿಂದ ಪರಿಹಾರ ಮತ್ತು ರಕ್ಷಣಾ ತಂಡಗಳು ಹಲವು ಗಂಟೆಗಳ ಕಾಲ ಘಟನಾ ಸ್ಥಳದಿಂದ ದೂರ ಉಳಿಯಬೇಕಾಯಿತು. ಸ್ಥಳೀಯ ಸುದ್ದಿಜಾಲ ಡಬ್ಲ್ಯುಟಿವಿಎಫ್-ಟಿವಿ ಸೆರೆ ಹಿಡಿದ ವೈಮಾನಿಕ ದೃಶ್ಯಾವಳಿಯಲ್ಲಿ ದಟ್ಟವಾದ ಕಪ್ಪುಹೊಗೆ ಎಲ್ಲೆಡೆ ವ್ಯಾಪಿಸಿರುವುದು ಕಾಣಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಡಿಕಲ್‌ ಮಾಫಿಯಾಗೆ ಅಮಾಯಕ ಮಕ್ಕಳು ಬಲಿ; ಸರ್ಕಾರಗಳೇ ಜವಾಬ್ದಾರಿ

“ವಿವರಿಸಲು ಏನೂ ಉಳಿದಿಲ್ಲ; ಎಲ್ಲವೂ ಭಸ್ಮವಾಗಿವೆ” ಎಂದು ಹಂಫ್ರೈಸ್ ಕೌಂಟಿ ಶೆರೀಫ್ ಕ್ರಿಸ್ ಡೇವಿಸ್ ಹೇಳಿದ್ದಾರೆ. ಹಲವು ಮಂದಿ ಮೃತಪಟ್ಟಿರುವುದನ್ನು ಅಧಿಕಾರಿಗಳು ದೃಢಪಡಿಸಿದ್ದರೂ, ನಿಖರವಾದ ಸಂಖ್ಯೆಯನ್ನು ಪ್ರಕಟಿಸಿಲ್ಲ ಹಾಗೂ ಎಲ್ಲರೂ ನಾಪತ್ತೆಯಾಗಿದ್ದಾರೆ ಎಂದು ವಿವರಿಸಿದೆ. ಸಂತ್ರಸ್ತರ ಕುಟುಂಬಗಳು ಘಟಕದ ಬಳಿ ಮುಂದಿನ ಮಾಹಿತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ಸ್ಫೋಟದ ತೀವ್ರತೆಯಿಂದ ಅಕ್ಕಪಕ್ಕದ ಮನೆಗಳು ಕೂಡಾ ಕಂಪಿಸಿದ್ದು, ತುರ್ತುಸ್ಪಂದನೆ ಪಡೆ ತಕ್ಷಣ ಸ್ಪಂದಿಸಿ ಸ್ಥಳೀಯರ ನೆರವಿಗೆ ಧಾವಿಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ನ್ಯಾಷ್ವಿಲ್ಲೆಯಿಂದ 97 ಕಿಲೋಮೀಟರ್ ದೂರದ ಬಕ್ಸ್ನಾರ್ಟ್ ಎಂಬ ಪ್ರದೇಶದಲ್ಲಿ ಅಕ್ಯೂರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಘಟಕ ಕಾರ್ಯನಿರ್ವಹಿಸುತ್ತಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...