ಇರಾನ್‌ನ ಬಂದರ್ ಅಬ್ಬಾಸ್ ಪಟ್ಟಣದ ಸಮೀಪವಿರುವ ಶಾಹಿದ್ ರಾಜೈ ಬಂದರಿನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸ್ಫೋಟಕ್ಕೆ ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇಸ್ಲಾಮಿಕ್ ರಿಪಬ್ಲಿಕ್ ನ್ಯೂಸ್ ಏಜೆನ್ಸಿ ಫೋಟೋವೊಂದನ್ನು ಪ್ರಸಾರ ಮಾಡಿದ್ದು, ಅದರಲ್ಲಿ, ವಾಹನಗಳು ರಸ್ತೆಯ ಮೂಲಕ ಹಾದು ಹೋಗುವಾಗ ಆಕಾಶದಲ್ಲಿ ಕಪ್ಪು ಹೊಗೆ ಏರುತ್ತಿರುವುದು ಕಂಡುಬಂದಿದೆ.
ಶಾಹಿದ್ ರಾಜೈ ಬಂದರಿನಲ್ಲಿ ಹಲವಾರು ಕಂಟೇನರ್‌ಗಳು ಸ್ಫೋಟಗೊಂಡಿವೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.