ಮ್ಯಾಚ್ ಫಿಕ್ಸಿಂಗ್ ಆರೋಪ; ಮೂವರು ಮಾಜಿ ಕ್ರಿಕೆಟಿಗರ ಬಂಧನ

Date:

2015-16ರಲ್ಲಿ ನಡೆದಿದ್ದ ಟಿ20 ‘ರಾಮ್ ಸ್ಲಾಮ್ ಚಾಲೆಂಜ್‌’ ಕ್ರಿಕೆಟ್‌ ಪಂದ್ಯಾವಳಿ ವೇಳೆ ಮ್ಯಾಚ್‌ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಆಫ್ರಿಕಾದ ಮೂವರು ಮಾಜಿ ಕ್ರಿಕೆಟಿಗರಾದ ಥಾಮಿ ತ್ಸೊಲೆಕಿಲೆ, ಲೋನ್‌ವಾಬೊ ತ್ಸೊಟ್ಸೊಬೆ ಮತ್ತು ಎಥಿ ಎಂಬಾಲಾಟಿ ಅವರನ್ನು ಬಂಧಿಸಲಾಗಿದೆ.

- Advertisement -

ಹಗರಣದ ಬಗ್ಗೆ ತನಿಖೆ ನಡೆಸಲಾಗಿದ್ದು, ಇತ್ತೀಚಗೆ ತನಿಖಾ ವರದಿ ಬಂದಿದೆ. ಈ ಬೆನ್ನಲ್ಲೇ, ಮೂವರು ಮಾಜಿ ಕ್ರಿಕೆಟಿಗರ ವಿರುದ್ಧವೂ ದಕ್ಷಿಣ ಆಫ್ರಿಕಾದ ‘ಭ್ರಷ್ಟ ಚಟುವಟಿಕೆಗಳ ತಡೆ ಮತ್ತು ಹೋರಾಟ ಕಾಯ್ದೆ-2004’ರ ಸೆಕ್ಷನ್ 15ರ ಅಡಿಯಲ್ಲಿ ಐದು ಭ್ರಷ್ಟಾಚಾರ ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

2016ರಲ್ಲಿ ಮಾಜಿ ಆಟಗಾರ ಗುಲಾಮ್ ಬೋಡಿಗೆ ಸಂಬಂಧಿಸಿದಂತೆ ಕೆಲವು ಅನುಮಾನಾಸ್ಪದ ಚಟುವಟಿಕೆಗಳ ವರದಿಗಳು ಪ್ರಕಟವಾಗಿದ್ದವು. ಆ ಬಗ್ಗೆ ಗಮನಿಸಿದ್ದ ‘ಕ್ರಿಕೆಟ್ ದಕ್ಷಿಣ ಆಫ್ರಿಕಾ’ದ (CSA) ಭ್ರಷ್ಟಾಚಾರ-ವಿರೋಧಿ ಘಟಕವು ತನಿಖೆ ಆರಂಭಿಸಿತ್ತು. ಮೂರು ಸ್ಥಳೀಯ T20 ಪಂದ್ಯಗಳಿಗೆ ಸಂಬಂಧಿಸಂತೆ ಫಿಕ್ಸಿಂಗ್‌ ಮಾಡಲು ಅವರು ಹಲವು ಆಟಗಾರರನ್ನು ಸಂಪರ್ಕಿಸಿದ್ದಾರೆ ಎಂದು ತನಿಖೆಯಲ್ಲಿ ಬಹಿರಂಗವಾಗಿತ್ತು.

ಹಗರಣದಲ್ಲಿ ಬೋಡಿ ಅವರೊಂದಿಗೆ ಆರೋಪಿತ ಮೂವರು ಆಟಗಾರರು ಮ್ಯಾಚ್‌ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಅದಕ್ಕಾಗಿ, ಉಡುಗೊರೆಯನ್ನೂ ಪಡೆದಿದ್ದಾರೆ. ತ್ಸೊಲೆಕಿಲ್ ಮತ್ತು ತ್ಸೊಟ್ಸೊಬೆ ವಿರುದ್ಧ ಐದು ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಲಾಗಿದೆ. ಅವರಿಬ್ಬರೂ ಶನಿವಾರ ಪ್ರಿಟೋರಿಯಾದ ವಿಶೇಷ ವಾಣಿಜ್ಯ ಅಪರಾಧಗಳ ನ್ಯಾಯಾಲಯದ ಎದುರು ಹಾಜರಾಗಿದ್ದಾರೆ. ಇನ್ನು, ಎಥಿ ಎಂಬಾಲಾಟಿ ಅವರು ಈ ಹಿಂದೆಯೇ ನ್ಯಾಯಾಲಯದ ಎದುರು ಹಾಜರಾಗಿದ್ದರು. ಸದ್ಯ, ಮೂವರನ್ನೂ ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಂತರ ಚುನಾವಣೆ ಮುಗಿದ ತಕ್ಷಣ ಇರಾನ್ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್

ಇರಾನ್ ಹಾಗೂ ಅಮೆರಿಕ ನಡುವಿನ ಯುದ್ಧವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ,...

AI ಔಷಧಿ ವಯಸ್ಸಾಗುವಿಕೆಯನ್ನು ನಿಧಾನಗೊಳಿಸಬಲ್ಲದು: ಅಧ್ಯಯನ ವರದಿ

AI ನೆರವಿನಿಂದ ಅಭಿವೃದ್ಧಿಪಡಿಸಲಾದ ಔಷಧವೊಂದು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ...

160 ವರ್ಷ ಹಳೆಯ ಚರ್ಚ್‌ಗೆ ಮರುಜೀವ; ಎರಡು ತೆರವು ಆದೇಶ ಎದುರಿಸಿದ್ದ ಕಟ್ಟಡದ ಪುನಶ್ಚೇತನಕ್ಕೆ ಕೋರ್ಟ್‌ ಅನುಮತಿ

ಅಮೆರಿಕದ ಸೇಂಟ್‌ ಲೂಯಿಸ್‌ನ ಐತಿಹಾಸಿಕ ಸೋಲಾರ್ಡ್‌ ಪ್ರದೇಶದಲ್ಲಿರುವ 160 ವರ್ಷ ಹಳೆಯ...

ಗುಜರಾತ್ ಗಲಭೆಯಲ್ಲಿ ಮೋದಿ ದೋಷಮುಕ್ತರಾದ ಬಗ್ಗೆ ರಶ್ದಿ ಪ್ರಶ್ನೆ; ಅಮೆರಿಕದಲ್ಲಿ ಆರ್.ಎಸ್.ಎಸ್ ಪ್ರಭಾವಕ್ಕೆ ಕಳವಳ

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ...