ಮ್ಯಾನ್ಮಾರ್‌ನಲ್ಲಿ ಭೂಕಂಪ: 150 ಮಂದಿ ಸಾವು

Date:

ನೆರೆಹೊರೆಯ ರಾಷ್ಟ್ರಗಳಾದ ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟುಗಳು ನಾಶಗೊಂಡಿವೆ. ಮ್ಯಾನ್ಮಾರ್‌ನಲ್ಲಿ ಕನಿಷ್ಠ 150 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -

ಭೂಕಂಪನ ಘಟನೆಯಲ್ಲಿ ಸುಮಾರು 732 ಜನರು ಗಾಯಗೊಂಡಿದ್ದಾರೆ. ಹಲವು ನಗರಗಳಲ್ಲಿ ಭಾರೀ ಹಾನಿಯಾಗಿದ್ದು, ದುರ್ಘಟನೆಯಲ್ಲಿನ‌ ಹಾನಿಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ದುರ್ಘಟನೆಯಲ್ಲಿ 150 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಪೈಟಾವ್‌ನಲ್ಲಿ 96 ಮಂದಿ, ಸಾಗೈಂಗ್‌ನಲ್ಲಿ 18 ಮಂದಿ ಮತ್ತು ಮಂಡಲೆಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಥಾಯ್ಲೆಂಡ್‌ನ ಬ್ಯಾಂಕಾಕ್ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡ ಕುಸಿದಿದ್ದು, ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ. ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಕಟ್ಟಡ ಕುಸಿದಿದ್ದು, ಅದರಡಿಯಲ್ಲಿ ಹಲವು ಕಾರ್ಮಿಕರು ಸಿಲುಕಿದ್ದಾರೆ ಎಂದು ಹೇಳಲಾಗಿದೆ.

ಹಾನಿಗೊಳಗಾದ ನಗರಗಳಲ್ಲಿ ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಪಡೆಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಟಾರ್ಕ್ಟಿಕದಲ್ಲಿ ಪೆಂಗ್ವಿನ್ ಎಣಿಸುವ ಅಪರೂಪದ ಉದ್ಯೋಗ: ಲಕ್ಷಗಳ ಸಂಭಾವನೆ, ಹೇಗಿರುತ್ತದೆ ಹಿಮದ ನಾಡಿನ ಬದುಕು?

ಜನಜಂಗುಳಿ, ಟ್ರಾಫಿಕ್ ಕಿರಿಕಿರಿ ಹಾಗೂ ದೈನಂದಿನ ಯಾಂತ್ರಿಕ ಬದುಕಿನಿಂದ ದೂರ ಸರಿದು,...

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ...