ಇರಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕದ ಸೇನಾ ಪಡೆಗಳಿಂದ ದಾಳಿ

Date:

ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಸಂಘರ್ಷಕ್ಕೆ ಅಮೆರಿಕವು ಅಧಿಕೃತವಾಗಿ ಪ್ರವೇಶ ಕೊಟ್ಟಿದೆ. ಇರಾನ್‌ ಪರಮಾಣು ನೆಲೆಗಳ ಮೇಲೆ ಅಮೆರಿಕವು ವೈಮಾನಿಕ ದಾಳಿ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

- Advertisement -

ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ಅಮೆರಿಕವು ಅತ್ಯಂತ ಯಶಸ್ವಿಯಾಗಿ ದಾಳಿಗಳನ್ನು ನಡೆಸಿದೆ. ಎಲ್ಲ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್‌ ಆರೋಪಗಳೂ, ಸರ್ಕಾರದ ನೈತಿಕತೆಯೂ

“ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಾವು ನಮ್ಮ ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ. ನಮ್ಮ ಎಲ್ಲ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಸುರಕ್ಷಿತವಾಗಿವೆ”, ಎಂದು ಟ್ರಂಪ್ ಅವರು ಟ್ರೂತ್ ಸೋಷಿಯಲ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ! ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ಅವರು ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರೆಜಿಲ್‌ ಚುನಾವಣೆ | ಬಲಪಂಥೀಯ ಬೊಲ್ಸೊನಾರೊ ಮುನ್ನಡೆ; ಲೂಲಾ ಜೊತೆ ಅ.25ರಂದು ರನ್‌ಆಫ್

ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯ ಮೊದಲ ಹಂತದಲ್ಲಿ ಬಲಪಂಥೀಯ ನಾಯಕ ಫ್ಲಾವಿಯೊ ಬೊಲ್ಸೊನಾರೊ...

ಮಕ್ಕಾ ಒಪ್ಪಂದದಡಿ ಸೌದಿ ಅರೇಬಿಯಾಗೆ ಸೇನಾ ಪಡೆಗಳನ್ನು ಕಳುಹಿಸಲು ಪಾಕಿಸ್ತಾನ, ಟರ್ಕಿ ಒಪ್ಪಿಗೆ

ರಿಯಾದ್‌ : ಮಕ್ಕಾ ಒಪ್ಪಂದದಡಿ ಟರ್ಕಿ, ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ...