ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

Date:

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಇರಾನ್ ಜೊತೆಗಿನ ಸಂಘರ್ಷದಲ್ಲಿ ಕಂಗಾಲಾಗಿರುವ ಟ್ರಂಪ್, ಕದನ ವಿರಾಮಕ್ಕೆ ಇರಾನ್‌ ಜೊತೆಗೆ ಖುದ್ದು ಮಾತುಕತೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಹಾಗಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ‘ಕದನ ವಿರಾಮ’ದ ಕುರಿತು ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ‘ಯುದ್ಧದ ಪರಿಹಾರಕ್ಕಾಗಿ ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವೆ ಅತ್ಯಂತ ಉತ್ತಮ ಮತ್ತು ಫಲಪ್ರದ ಮಾತುಕತೆಗಳು ಆರಂಭವಾಗಿವೆ’ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ಆದರೆ, ಅವರ ಹೇಳಿಕೆಯನ್ನು ಅಲ್ಲಗಳೆದಿರುವ ಇರಾನ್, ‘ಅಂತಹ ಯಾವುದೇ ಮಾತುಕತೆಗಳು ನಡೆದಿಲ್ಲ. ನಮ್ಮ ಪ್ರತಿಕಾರದ ದಾಳಿಗೆ ಹೆದರಿ ಅಮೆರಿಕ ಹಿಂದೆ ಸರಿದಿದೆ’ ಎಂದು ಟೀಕಿಸಿದೆ.

- Advertisement -

ಇತ್ತೀಚೆಗೆ, ತಮ್ಮ ‘ಟ್ರುತ್’ ಸೋಷಿಯಲ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಟ್ರಂಪ್, “ಕಳೆದ ಎರಡು ದಿನಗಳಿಂದ ಅಮೆರಿಕ ಮತ್ತು ಇರಾನ್ ನಡುವೆ ಮಧ್ಯಪ್ರಾಚ್ಯದ ಹಗೆತನದ ಸಂಪೂರ್ಣ ಪರಿಹಾರದ ಕುರಿತು ಅತ್ಯಂತ ಉತ್ತಮ ಮತ್ತು ಫಲಪ್ರದ ಮಾತುಕತೆಗಳು ನಡೆದಿವೆ. ಈ ವಾರವಿಡೀ ಮುಂದುವರಿಯಲಿರುವ ಗಂಭೀ ಮತ್ತು ರಚನಾತ್ಮಕ ಮಾತುಕತೆಗಳ ಸ್ವರೂಪವನ್ನು ಆಧರಿಸಿ, ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲಿನ ಎಲ್ಲ ಮಿಲಿಟರಿ ದಾಳಿಗಳನ್ನು ಐದು ದಿನಗಳ ಅವಧಿಗೆ ಮುಂದೂಡುವಂತೆ ನಾನು ರಕ್ಷಣಾ ಇಲಾಖೆಗೆ ಸೂಚಿಸಿದ್ದೇನೆ. ಇದು ಪ್ರಸ್ತುತ ನಡೆಯುತ್ತಿರುವ ಸಭೆ ಮತ್ತು ಚರ್ಚೆಗಳ ಯಶಸ್ಸಿಗೆ ಒಳಪಟ್ಟಿರುತ್ತದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇರಾನ್, “ಇರಾನ್‌ ಮೇಲಿನ ಎಲ್ಲ ನಿರ್ಬಂಧಗಳನ್ನು ತೆಗೆದುಹಾಕುವವರೆಗೆ ಮತ್ತು ಅಮೆರಿಕವು ಯುದ್ಧ ಹಾನಿದ ಪರಿಹಾರವನ್ನು ಪಾವತಿಸುವವರೆಗೆ ಯುದ್ಧ ಮುಂದುವರಿಯುತ್ತದೆ” ಎಂದು ಪ್ರತಿಪಾದಿಸಿದೆ.

ಹಾರ್ಮುಜ್ ಜಲಸಂಧಿಯನ್ನು ಕೂಡಲೇ ಮುಕ್ತಗೊಳಿಸಬೇಕು. ಇಲ್ಲವಾದಲ್ಲಿ, ಅಮೆರಿಕವು ಇರಾನ್‌ನ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿತ್ತು. ಇದಕ್ಕೆ ಪ್ರತಿಯಾಗಿ ಅಮೆರಿಕಗೆ ಬೆದರಿಕೆ ಹಾಕಿದ ಇರಾನ್, “ನಮ್ಮ ಭೂಪ್ರದೇಶದ ಮೇಲೆ ಮತ್ತೆ ದಾಳಿಯಾದರೆ, ಗಲ್ಫ್ ಪ್ರದೇಶದಲ್ಲಿ ಸಮುದ್ರದ ಆಳದಲ್ಲಿರುವ ಅಂತರ್ಜಾಲ ಕೇಬಲ್‌ಗಳು ಮತ್ತು ಕೊಲ್ಲಿ ರಾಷ್ಟ್ರಗಳ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡುತ್ತೇವೆ” ಎಂದು ಹೇಳಿತ್ತು. ಅಲ್ಲದೆ, ಇಸ್ರೇಲ್‌ನ ಎರಡು ದೊಡ್ಡ ವಿದ್ಯುತ್ ಸ್ಥಾವರಗಳು ಮತ್ತು ಸೌದಿ ಅರೇಬಿಯಾ, ಯುಎಇ, ಕತಾರ್ ಮತ್ತು ಕುವೈತ್‌ನಲ್ಲಿರುವ ಅಂತರ್ಜಾಲ ಮತ್ತು ವಿದ್ಯುತ್ ಸೌಲಭ್ಯಗಳನ್ನು ಒಳಗೊಂಡ ಸಂಭಾವ್ಯ ಗುರಿಗಳ ನಕ್ಷೆಯನ್ನು ಬಿಡುಗಡೆ ಮಾಡಿತ್ತು.

ಈ ಲೇಖನ ಓದಿದ್ದೀರಾ?: ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಈ ಬೆದರಿಕೆ ಬಂದ ಕೆಲವೇ ಗಂಟೆಗಳಲ್ಲಿ ಕದನ ವಿರಾಮ ಮತ್ತು ಇರಾನ್‌ನ ವಿದ್ಯುತ್ ಸ್ಥಾವರಗಳ ಮೇಲಿನ ದಾಳಿಯನ್ನು ತಡೆಯುವ ಕುರಿತು ಟ್ರಂಪ್ ಬರೆದುಕೊಂಡಿದ್ದಾರೆ.

ಟ್ರಂಪ್ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇರಾನ್ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳು, “ಇರಾನ್‌ನ ಪ್ರತಿಕಾರದ ದಾಳಿಗೆ ಹೆದರಿ ಅಮೆರಿಕ ಅಧ್ಯಕ್ಷರು ಹಿಂದೆ ಸರಿದಿದ್ದಾರೆ” ಎಂದು ಲೇವಡಿ ಮಾಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...