ಮಧ್ಯಪ್ರಾಚ್ಯ ಬಿಕ್ಕಟ್ಟು : ಅಮೆರಿಕದ 2 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಇರಾನ್

Date:

ಫೆ.28ರಿಂದ ಆರಂಭವಾಗಿರುವ ಇರಾನ್-ಅಮೆರಿಕ ಸಂಘರ್ಷ ಸದ್ಯಕ್ಕಂತೂ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಶುಕ್ರವಾರ ಇರಾನ್ ಪಡೆಗಳು ಅಮೆರಿಕದ ಎರಡು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು,  ಘಟನೆಯಲ್ಲಿ ಇಬ್ಬರು ಪೈಲಟ್‌ಗಳನ್ನು ರಕ್ಷಿಸಲಾಗಿದ್ದು, ಓರ್ವ ಪೈಲಟ್ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಎಫ್-15ಇ ಮತ್ತು ಎ-10 ವಾರ್ತ್‌ಹಾಗ್ ಪತನ

- Advertisement -

ಅಮೆರಿಕದ ಅತ್ಯಾಧುನಿಕ ‘ಎಫ್-15ಇ ಸ್ಟ್ರೈಕ್ ಈಗಲ್’ ಯುದ್ಧ ವಿಮಾನ ಇರಾನ್ ಭೂಭಾಗದಲ್ಲಿ ಪತನಗೊಂಡಿದೆ. ಈ ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿಗಳ ಪೈಕಿ ಒಬ್ಬರನ್ನು ಅಮೆರಿಕದ ವಿಶೇಷ ಪಡೆಗಳು ರಕ್ಷಿಸಿವೆ. ಆದರೆ ಮತ್ತೋರ್ವ ಪೈಲಟ್ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇರಾನ್ ದಾಳಿಗೆ ತುತ್ತಾದ ಮತ್ತೊಂದು ‘ಎ-10 ವಾರ್ತ್‌ಹಾಗ್’ ಯುದ್ಧ ವಿಮಾನ ಕುವೈತ್ ಗಡಿಯ ಸಮೀಪ ಪತನಗೊಂಡಿದ್ದು, ಅದರ ಪೈಲಟ್ ಸುರಕ್ಷಿತವಾಗಿ ಎಜೆಕ್ಟ್ ಆಗುವ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಹೆಲಿಕಾಪ್ಟರ್‌ಗಳ ಮೇಲೆ ದಾಳಿ

ನಾಪತ್ತೆಯಾದ ಪೈಲಟ್‌ನ ಪತ್ತೆಗಾಗಿ ತೆರಳಿದ್ದ ಅಮೆರಿಕದ ಎರಡು ‘ಬ್ಲ್ಯಾಕ್ ಹಾಕ್’ ಹೆಲಿಕಾಪ್ಟರ್‌ಗಳ ಮೇಲೂ ಇರಾನ್ ಪಡೆಗಳು ದಾಳಿ ನಡೆಸಿವೆ. ಆದರೆ ಸಮಯಪ್ರಜ್ಞೆ ಮೆರೆದ ಹೆಲಿಕಾಪ್ಟರ್ ಸಿಬ್ಬಂದಿ ಕೂಡಲೆ ಇರಾನ್ ವಾಯುಪ್ರದೇಶದಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು, ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಇರಾನ್ ನಡೆಸಿದ ಡ್ರೋನ್ ದಾಳಿಯಲ್ಲಿ ‘ಸಿಹೆಚ್-47 ಚಿನೂಕ್’ ಹೆಲಿಕಾಪ್ಟರ್ ಜಖಂಗೊಂಡಿದೆ ಎಂದು ತಿಳಿದುಬಂದಿದೆ.

ಪೈಲಟನ್ನು ಹಿಡಿದುಕೊಟ್ಟವರಿಗೆ ಬಹುಮಾನದ ಘೋಷಣೆ

ನಾಪತ್ತೆಯಾಗಿರುವ ಅಮೆರಿಕದ ಪೈಲಟ್‌ನನ್ನು ಜೀವಂತವಾಗಿ ಸೆರೆಹಿಡಿದು ಒಪ್ಪಿಸುವವರಿಗೆ ದೊಡ್ಡ ಮೊತ್ತದ ಬಹುಮಾನ ನೀಡುವುದಾಗಿ ಇರಾನ್ ಸರ್ಕಾರ ಘೋಷಣೆ ಮಾಡಿದೆ. ಇರಾನ್‌ನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ನೈಋತ್ಯ ಇರಾನ್‌ನಲ್ಲಿ ಪೈಲಟ್‌ಗಾಗಿ ವ್ಯಾಪಕ ಶೋಧ ನಡೆಸುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿ ಅಮೆರಿಕ ಅಧ್ಯಕ್ಷ ಟ್ರಂಪ್ ಬಗ್ಗೆ ವ್ಯಂಗ್ಯವಾಡಿರುವ ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಕರ್ ಖಾಲಿಬಾಫ್, “ಆಡಳಿತ ಬದಲಾವಣೆಯ ಗುರಿ ಹೊತ್ತು ಬಂದವರು, ಈಗ ತಮ್ಮ ಪೈಲಟ್‌ಗಳಿಗಾಗಿ ಹುಡುಕಾಟ ನಡೆಸುವ ಸ್ಥಿತಿಗೆ ತಲುಪಿದ್ದಾರೆ” ಎಂದು ಎಕ್ಸ್ (ಟ್ವಿಟರ್) ಮೂಲಕ ಕಾಲೆಳೆದಿದ್ದಾರೆ.

ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಇದೊಂದು ಯುದ್ಧದ ಸನ್ನಿವೇಶ, ವಿಮಾನ ಪತನದ ಘಟನೆಯು ಇರಾನ್ ಜೊತೆಗಿನ ಮಾತುಕತೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AI ಗೆ ಸಂಪೂರ್ಣ ನಿಯಂತ್ರಣ ಬೇಡ, ಕೆಲ ಅಪಾಯಗಳನ್ನು ಸ್ವೀಕರಿಸೋಣ: ಸ್ಯಾಮ್ ಆಲ್ಟ್‌ಮನ್

AI ತಂತ್ರಜ್ಞಾನದಿಂದ ಉಂಟಾಗಬಹುದಾದ ಕೆಲವು ಅಪಾಯಗಳನ್ನು ಒಪ್ಪಿಕೊಂಡರೂ, ಅದರ ಮೂಲಕ ದೊರೆಯುವ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

ರಷ್ಯಾದಲ್ಲಿ ನ್ಯುಮೋನಿಕ್ ಪ್ಲೇಗ್ ಭೀತಿ: ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿ ಮೇಲೆ ನಿಗಾ

ರಷ್ಯಾದ ಇರ್ಕುಟ್ಸ್ಕ್ (Irkutsk) ಪ್ರದೇಶದಲ್ಲಿ ಶಂಕಿತ ನ್ಯುಮೋನಿಕ್ ಪ್ಲೇಗ್‌ಗೆ ಲ್ಯಾಬ್ ಉದ್ಯೋಗಿಯೊಬ್ಬರು...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...