ಭಾರತ-ಅಮೆರಿಕ ಸ್ನೇಹ ಮುಂದುವರಿಕೆ ಬಗ್ಗೆ ಪ್ರಸ್ತಾಪ ಮುಂದಿಟ್ಟ ಮೋದಿ-ಟ್ರಂಪ್

Date:

Advertisements

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಅಮೆರಿಕ ನಡುವಿನ ಸ್ನೇಹವನ್ನು ಹಿಂದಿನಂತೆ ಮುಂದುವರಿಸುವ ಬಗ್ಗೆ ಇಬ್ಬರು ನಾಯಕರು ಪರಸ್ಪರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಭಾರತ ಮತ್ತು ಅಮೆರಿಕ ದೇಶಗಳು ವ್ಯಾಪಾರ ಮಾತುಕತೆ ಕುರಿತು ಶೀಘ್ರವಾಗಿ ಅಂತಿಮ ತೀರ್ಮಾನಕ್ಕೆ ಬರಲಿವೆ. ಮುಂಬರುವ ವಾರಗಳಲ್ಲಿ ಉತ್ತಮ ಸ್ನೇಹಿತರಾಗಿರುವ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸಲು ಎದುರು ನೋಡುತ್ತಿದ್ದೇನೆ” ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಟ್ರಂಪ್‌ ಹೇಳಿಕೆ ಉಲ್ಲೇಖಿಸಿ ಪ್ರಧಾನಿ ಮೋದಿ ಸಹ ಟ್ವೀಟ್‌ ಮಾಡಿ, “ಭಾರತ-ಅಮೇರಿಕಾ ಆಪ್ತ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಿಮ್ಮೊಂದಿಗೆ ಮಾತನಾಡಲು ನಾನೂ ಉತ್ಸುಕನಾಗಿದ್ದೇನೆ” ಎಂದಿದ್ದಾರೆ.

ಟ್ರಂಪ್‌ ಹೇಳಿದ್ದೇನು?

ಟ್ರುತ್ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿರುವ ಟ್ರಂಪ್, “ನಮ್ಮ ಎರಡೂ ರಾಷ್ಟ್ರಗಳ ನಡುವಿನ ವ್ಯಾಪಾರ ಅಡೆತಡೆಗಳನ್ನು ಪರಿಹರಿಸಲು ಭಾರತ ಮತ್ತು ಅಮೆರಿಕ ಮಾತುಕತೆಗಳನ್ನು ಮುಂದುವರಿಸುತ್ತಿವೆ ಎಂದು ಘೋಷಿಸಲು ಸಂತೋಷವಾಗಿದೆ. ಮುಂಬರುವ ವಾರಗಳಲ್ಲಿ ನನ್ನ ಆತ್ಮೀಯ ಸ್ನೇಹಿತ ಪ್ರಧಾನಿ ಮೋದಿಯವರೊಂದಿಗೆ ಮಾತನಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ಮೋದಿ ಪ್ರತ್ಯುತ್ತರ ಏನು?

“ಭಾರತ-ಅಮೇರಿಕಾ ಆಪ್ತ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಮ್ಮ ವ್ಯಾಪಾರ ಮಾತುಕತೆಗಳು ಭಾರತ-ಅಮೆರಿಕ ಪಾಲುದಾರಿಕೆಯ ಅಪರಿಮಿತ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚು ಮಾಡಲು ದಾರಿ ಮಾಡಿಕೊಡುತ್ತವೆ ಎಂಬ ವಿಶ್ವಾಸ ನನಗಿದೆ. ಈ ಚರ್ಚೆಗಳನ್ನು ಆದಷ್ಟು ಬೇಗ ಮುಗಿಸಲು ನಮ್ಮ ತಂಡಗಳು ಕೆಲಸ ಮಾಡುತ್ತಿವೆ. ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಲು ನಾನೂ ಉತ್ಸುಕನಾಗಿದ್ದೇನೆ. ಉಭಯ ರಾಷ್ಟ್ರಗಳ ಜನರಿಗೆ ಉಜ್ವಲ, ಸಮೃದ್ಧ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ತಮ್ಮ ಪೋಸ್ಟ್‌ ಅನ್ನು ಡೊನಾಲ್ಡ್ ಟ್ರಂಪ್ ಮತ್ತು POTUS (ಯುಎಸ್ ಅಧ್ಯಕ್ಷ)ಗೆ ಟ್ಯಾಗ್ ಮಾಡಿದ್ದಾರೆ.

ರಷ್ಯಾದಿಂದ ತೈಲ ಖರೀದಿ ಮತ್ತು ಶೇ.50ರಷ್ಟು ತೆರಿಗೆ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಭಾರತದ ನಡುವಿನ 20 ವರ್ಷಗಳ ಆತ್ಮೀಯ ಸಂಬಂಧ ಬಹುತೇಕ ಹದಗೆಟ್ಟಿದೆ. ಆ ಬಳಿಕ ಭಾರತವು ಚೀನಾ ಜತೆಗಿನ ವಿವಾದ ಪರಿಹಾರಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಅಲ್ಲದೆ, ಅಮೆರಿಕ ಬೆದರಿಕೆ ಹೊರತಾಗಿಯೂ ರಷ್ಯಾ ಜತೆಗಿನ ಸಂಬಂಧ ಕಡಿದುಕೊಳ್ಳದೇ ಇರಲು ನಿರ್ಧರಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X