ಭಾರತವು ಅಮೆರಿಕದ ಪ್ರಮುಖ ಮಿತ್ರರಾಷ್ಟ್ರವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಬಂಧ ಗಟ್ಟಿಯಾಗಿದೆ. ಎರಡೂ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ. ಶೀಘ್ರವೇ ವ್ಯಾಪಾರ ಒಪ್ಪಂದವನ್ನು ಪ್ರಕಟಿಸಲಾಗುತ್ತದೆ ಎಂದು ಅಮೆರಿಕದ ಶ್ವೇತಭವನ ತಿಳಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕರೋಲಿನ್ ಲೆವಿಟ್, “ಅಮೆರಿಕ-ಭಾರತ ನಡುವಿನ ಒಪ್ಪಂದಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ವಾಣಿಜ್ಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿದ್ದೇವೆ. ಅವರು ಒಪ್ಪಂದವನ್ನು ಅಂತಿಮಗೊಳಿಸಿದ ಬಳಿಕ, ಒಪ್ಪಂದವನ್ನು ಪ್ರಕಟಿಸಲಾಗುತ್ತದೆ” ಎಂದು ಹೇಳಿದ್ದಾರೆ.
ಏಷ್ಯಾದ ಇಂಡೋ-ಫೆಸಿಫಿಕ್ ಪ್ರದೇಶದಲ್ಲಿ ಭಾರತ ನಮ್ಮ ಪ್ರಮುಖ ಮಿತ್ರರಾಷ್ಟ್ರ. ಎರಡೂ ರಾಷ್ಟ್ರಗಳ ನಡುವಿನ ಸಂಬಂಧ ಹೀಗೆಯೇ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.