ಗಾಜಾ ಮೇಲೆ ಇಸ್ರೇಲ್ ದಾಳಿಯನ್ನು ಜನಾಂಗೀಯ ಹತ್ಯೆ ಎಂದು ಖಂಡಿಸಿದ ಅಮೆರಿಕದ ಮುಸ್ಲಿಂ ನರ್ಸ್ ಕೆಲಸದಿಂದ ವಜಾ

Date:

ಗಾಜಾದಲ್ಲಿ ಇಸ್ರೇಲ್‌ನ ದಾಳಿಯನ್ನು “ಜನಾಂಗೀಯ ಹತ್ಯೆ” ಎಂದು ಖಂಡಿಸಿದ ಮುಸ್ಲಿಂ ಸಮುದಾಯದ ನರ್ಸ್‌ ಒಬ್ಬರನ್ನು ಕೆಲಸದಿಂದ ವಜಾ ಮಾಡಿದ ಘಟನೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದಿದೆ.

- Advertisement -

ಹಸನ್‌ ಜಬರ್‌ ಎಂಬ ನರ್ಸ್‌ಗೆ ಈ ತಿಂಗಳ ಆರಂಭದಲ್ಲಿ, ನ್ಯೂಯಾರ್ಕ್‌ನಲ್ಲಿನ ಎನ್‌ವೈಯು ಲ್ಯಾಂಗೋನ್ ಹೆಲ್ತ್ ಎಂಬ ಆಸ್ಪತ್ರೆಯಲ್ಲಿ ಶಿಶುಗಳನ್ನು ಕಳೆದುಕೊಂಡ ತಾಯಂದಿಯರಿಗೆ ಸಹಾನುಭೂತಿಯ ಆರೈಕೆಯನ್ನು ಒದಗಿಸುವುದಕ್ಕಾಗಿ ಪ್ರಶಸ್ತಿಯನ್ನು ನೀಡಿತ್ತು. ಈ ಪ್ರಶಸ್ತಿಯನ್ನು ಸ್ವೀಕರಿಸುವ ಸಂದರ್ಭದಲ್ಲಿ ಗಾಜಾದಲ್ಲಿ ಇಸ್ರೇಲ್‌ನ ದಾಳಿಯನ್ನು “ಜನಾಂಗೀಯ ಹತ್ಯೆ” ಎಂದು ಖಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಭಾಷಣ ಮಾಡಿದ ನಂತರ ಹಸನ್‌ ಜಬರ್‌ ಅವರನ್ನು ಎನ್‌ವೈಯು ಲ್ಯಾಂಗೋನ್ ಹೆಲ್ತ್ ಆಸ್ಪತ್ರೆ ಮಂಡಳಿ ಕೆಲಸದಿಂದ ವಜಾ ಮಾಡಿದೆ. ತಾವು ವಜಾಗೊಂಡಿರುವ ಬಗ್ಗೆ ಹಸನ್‌ ಜಬರ್‌ ಅವರು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಪ್ರಸ್ತುತ ಗಾಜಾದಲ್ಲಿ ನಡೆಯುತ್ತಿರುವ ನರಮೇಧದ ಸಮಯದಲ್ಲಿ ನನ್ನ ದೇಶದ ಮಹಿಳೆಯರು ಊಹಿಸಲಾಗದ ನಷ್ಟವನ್ನು ಅನುಭವಿಸುತ್ತಿರುವುದನ್ನು ನೋಡುವುದು ನನಗೆ ನೋವುಂಟುಮಾಡುತ್ತದೆ” ಎಂದು ಜಬರ್ ಅವರು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ತಮ್ಮ ಭಾಷಣದ ವಿಡಿಯೊದಲ್ಲಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ಗಾಜಾದ ಮೇಲೆ ಇಸ್ರೇಲ್‌ ದಾಳಿಯನ್ನು ಖಂಡಿಸಿದ್ದಕ್ಕಾಗಿ ಇದೇ ಅಸ್ಪತ್ರೆಯ ಕ್ಯಾನ್ಸರ್ ಸಂಶೋಧಕರೊಬ್ಬರನ್ನು ಕೆಲಸದಿಂದ ವಜಾ ಮಾಡಲಾಗಿತ್ತು. ಈ ಸಂಶೋಧಕರು ಹಮಾಸ್ ವಿರೋಧಿ ರಾಜಕೀಯ ಕಾರ್ಟೂನ್‌ಗಳನ್ನು ಪೋಸ್ಟ್ ಮಾಡಿದ ನಂತರ ಕೆಲಸದಿಂದ ತೆಗೆದುಹಾಕಲಾಗಿತ್ತು. ವ್ಯಂಗ್ಯಚಿತ್ರವು ಕೆಲವು ಅರಬ್ ಜನರ ಆಕ್ಷೇಪಾರ್ಹ ಚಿತ್ರಗಳನ್ನು ಒಳಗೊಂಡಿತ್ತು.

ಆಸ್ಪತ್ರೆಯ ವಕ್ತಾರರು ಇಮೇಲ್‌ನಲ್ಲಿ ಹಸನ್‌ ಜಬರ್‌ ಅವರಿಗೆ ಡಿಸೆಂಬರ್‌ನಲ್ಲಿ ಎಚ್ಚರಿಕೆ ನೀಡಿದ್ದರು. ಹಿಂದಿನ ಘಟನೆಯನ್ನು ಅನುಸರಿಸಿ, ನಿಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಕೆಲಸದ ಸ್ಥಳಕ್ಕೆ ತರಬೇಡಿ ಎಂದು ತಿಳಿಸಲಾಗಿತ್ತು. ಪುನಃ ಭಾಷಣ ಮಾಡಿದ್ದಕ್ಕಾಗಿ ಕೆಲಸದಿಂದ ವಜಾ ಮಾಡಲಾಗಿದೆ ಎಂದು ಆಸ್ಪತ್ರೆ ಮಂಡಳಿ ತಿಳಿಸಿದೆ.

ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯಿಂದ ಕಳೆದ ಎಂಟು ತಿಂಗಳಲ್ಲಿ 36,000 ಕ್ಕೂ ಹೆಚ್ಚು ಅಮಾಯಕರು ಮೃತರಾಗಿದ್ದಾರೆ ಎಂದು ಸ್ಥಳೀಯ ಆರೋಗ್ಯ ಸಚಿವಾಲಯ ಹೇಳಿದೆ. ದಾಳಿಯಿಂದ 20 ಲಕ್ಷಕ್ಕೂ ಹೆಚ್ಚು ಮಂದಿ ತಮ್ಮ ನೆಲೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...