ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ: ತಾಲಿಬಾನ್ ಸಚಿವರಿಗೆ ನೀಡಿದ ಸ್ವಾಗತಕ್ಕೆ ಜಾವೇದ್ ಅಖ್ತರ್ ಕಿಡಿ

Date:

2021ರಲ್ಲಿ ಅಫ್ಘನ್ ಸರ್ಕಾರವನ್ನು ಉರುಳಿಸಿ, ಅಧಿಕಾರವನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡ ಬಳಿಕ, ತಾಲಿಬಾನ್‌ನ ನಾಯಕರೊಬ್ಬರು ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಭಯೋತ್ಪಾದನೆ ವಿರುದ್ಧ ಇಡೀ ಜಗತ್ತಿಗೆ ಸಂದೇಶ ರವಾನಿಸಲು ನಿಯೋಗಗಳನ್ನು ಕಳಿಸಿದ್ದ ಭಾರತ ಸರ್ಕಾರವು, ತಾಲಿಬಾನ್ ಭಯೋತ್ಪಾದಕ ನಾಯಕರಿಗೆ ಸ್ವಾಗತ ಕೋರಿದ್ದನ್ನು ಖ್ಯಾತ ಗೀತರಚನೆಕಾರ ಜಾವೇದ್ ಅಖ್ತರ್ ಟೀಕಿಸಿದ್ದಾರೆ. ನನ್ನ ತಲೆ ನಾಚಿಕೆಯಿಂದ ತೂಗುತ್ತಿದೆ ಎಂದಿದ್ದಾರೆ.

- Advertisement -

ಅಫ್ಘನ್‌ನ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಭಾರತಕ್ಕೆ ಭೇಟಿ ನೀಡಿದ್ದು, ಆರು ದಿನಗಳ ಪ್ರವಾಸದಲ್ಲಿದ್ದರು. ಶುಕ್ರವಾರ, ದೆಹಲಿಯಲ್ಲಿ ನಡೆದ ಮುತ್ತಕಿ ಅವರ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರನ್ನು ಹೊರಗಿಡಲಾಗಿತ್ತು. ಇದು, ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಟೀಕಿ-ಆಕ್ರೋಶಕ್ಕೆ ಕಾರಣವೂ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದೀಗ, ಮುತ್ತಕಿಗೆ ಭಾರತ ಸರ್ಕಾರ ಸ್ವಾಗತ ಕೋರಿರುವ ಬಗ್ಗೆ ಮಾತನಾಡಿರುವ ಜಾವೇದ್ ಅಖ್ತರ್, “ಎಲ್ಲ ರೀತಿಯ ಭಯೋತ್ಪಾದಕರ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೇದಿಕೆ ಸಜ್ಜುಗೊಳಿಸ ಹೊರಟವರು, ವಿಶ್ವದ ಕೆಟ್ಟ ಭಯೋತ್ಪಾದಕ ಗುಂಪು ತಾಲಿಬಾನ್‌ನ ಪ್ರತಿನಿಧಿಗೆ ಗೌರವ ಮತ್ತು ಸ್ವಾಗತವನ್ನು ನೀಡಿದೆ. ಇದನ್ನು ನೋಡಿದಾಗ ನಾಚಿಕೆಯಿಂದ ನನ್ನ ತಲೆಯನ್ನು ನಾನೇ ನೇಣಿಗೇರಿಸಿಕೊಂಡಂತಾಗಿದೆ” ಎಂದು ಅಖ್ತರ್ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಮಚಾಡೊಗೆ ನೊಬೆಲ್ ಶಾಂತಿ ಪ್ರಶಸ್ತಿ; ತನ್ನ ಅರ್ಥವನ್ನೇ ಕಳೆದುಕೊಂಡ ‘ಶಾಂತಿ’

ಮುತ್ತಕಿ ಅವರನ್ನು ಆಹ್ವಾನಿಸಿದ್ದ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿರುವ ದಾರುಲ್ ಉಲೂಮ್ ದಿಯೋಬಂದ್ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಜಾವೇದ್, “ಹೆಣ್ಣು ಮಕ್ಕಳ ಶಿಕ್ಷಣವನ್ನು ಸಂಪೂರ್ಣವಾಗಿ ನಿಷೇಧಿಸಿದ ‘ಇಸ್ಲಾಮಿಕ್ ಮೂಲಭೂತವಾದಿ’ಗೆ ಇಷ್ಟೊಂದು ಗೌರವಯುತ ಸ್ವಾಗತ ನೀಡಿದ್ದಕ್ಕಾಗಿ ದಿಯೋಬಂದ್‌ಗೂ ನಾಚಿಕೆಯಾಗಬೇಕು. ನನ್ನ ಭಾರತೀಯ ಸಹೋದರ ಸಹೋದರಿಯರೇ ನಮಗೆ ಏನಾಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಮಕ್ಕಾ ಒಪ್ಪಂದದಡಿ ಸೌದಿ ಅರೇಬಿಯಾಗೆ ಸೇನಾ ಪಡೆಗಳನ್ನು ಕಳುಹಿಸಲು ಪಾಕಿಸ್ತಾನ, ಟರ್ಕಿ ಒಪ್ಪಿಗೆ

ರಿಯಾದ್‌ : ಮಕ್ಕಾ ಒಪ್ಪಂದದಡಿ ಟರ್ಕಿ, ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...