ಬಾಂಗ್ಲಾದೇಶ ಹಿಂಸಾಚಾರ | ಒಂದು ಸಾವಿರ ಭಾರತೀಯ ವಿದ್ಯಾರ್ಥಿಗಳು ತವರೂರಿಗೆ ವಾಪಸ್

Date:

ಬಾಂಗ್ಲಾದೇಶ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಬಾಂಗ್ಲಾದೇಶದಿಂದ ಸುಮಾರು ಒಂದು ಸಾವಿರ ಭಾರತೀಯ ವಿದ್ಯಾರ್ಥಿಗಳು ತವರೂರಿಗೆ ವಾಪಸ್ ಬಂದಿದ್ದಾರೆ. ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಭಾರತೀಯ ವಿದ್ಯಾರ್ಥಿಗಳಿಗೆ ಭಾರತ-ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬರಲು ಬೇಕಾದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

- Advertisement -

ಈವೆರೆಗೆ ಸುಮಾರು 778 ಭಾರತೀಯ ವಿದ್ಯಾರ್ಥಿಗಳು ವಿವಿಧ ಭೂ ಬಂದರುಗಳ ಮೂಲಕ ಯಶಸ್ವಿಯಾಗಿ ಭಾರತಕ್ಕೆ ಮರಳಿದ್ದಾರೆ. ಹೆಚ್ಚುವರಿಯಾಗಿ, ಸುಮಾರು 200 ವಿದ್ಯಾರ್ಥಿಗಳು ಢಾಕಾ ಮತ್ತು ಚಿತ್ತಗಾಂಗ್ ವಿಮಾನ ನಿಲ್ದಾಣಗಳ ಮೂಲಕ ಮನೆಗೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಬಾಂಗ್ಲಾದೇಶದಾದ್ಯಂತ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಇನ್ನೂ 4,000 ಕ್ಕೂ ಹೆಚ್ಚು ವಿದ್ಯಾರ್ಥಿಗಳೊಂದಿಗೆ ಹೈಕಮಿಷನ್ ನಿಯಮಿತ ಸಂಪರ್ಕದಲ್ಲಿದೆ. ಕೋರಿಕೆಯ ಮೇರೆಗೆ ನೇಪಾಳ ಮತ್ತು ಭೂತಾನ್‌ನ ವಿದ್ಯಾರ್ಥಿಗಳಿಗೆ ಭಾರತಕ್ಕೆ ದಾಟಲು ಸಹಾಯ ಮಾಡಲಾಗಿದೆ.

“ಹಲವು ವಿದ್ಯಾರ್ಥಿಗಳು ವಿಮಾನ ಟಿಕೆಟ್‌ಗಳನ್ನು ಕಾಯ್ದಿರಿಸಿದ್ದರು. ಆದರೆ ಸ್ಥಳದಲ್ಲಿ ಕರ್ಫ್ಯೂ ಇರುವುದರಿಂದ ಅವರು ವಿಮಾನ ನಿಲ್ದಾಣಕ್ಕೆ ಬರಲು ಸಾಧ್ಯವಾಗಲಿಲ್ಲ. ಹಲವಾರು ವಿಮಾನಗಳನ್ನು ಸಹ ರದ್ದುಗೊಳಿಸಲಾಗಿದೆ. ಇನ್ನೂ ಅನೇಕ ಭಾರತೀಯ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳ ಹಾಸ್ಟೆಲ್‌ಗಳಲ್ಲಿದ್ದಾರೆ, ಅಲ್ಲಿ ವಾತಾವರಣ ಇನ್ನೂ ಶಾಂತಿಯುತವಾಗಿದೆ” ಎಂದು ಎನ್‌ಡಿಟಿವಿಗೆ ಬಾಂಗ್ಲಾದೇಶದಿಂದ ಹಿಂದಿರುಗಿದ ಭಾರತೀಯ ವಿದ್ಯಾರ್ಥಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ?  ಬಾಂಗ್ಲಾದೇಶ | ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; 105 ಮಂದಿ ಸಾವು, ಕರ್ಫ್ಯೂ ಘೋಷಣೆ

ಕಳೆದ ತಿಂಗಳ ಕೊನೆಯಲ್ಲಿ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಪ್ರತಿಭಟನೆ ಆರಂಭವಾಗಿದ್ದು, ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 115 ಮಂದಿ ಸಾವನ್ನಪ್ಪಿದ್ದಾರೆ. ಈ ಬೆನ್ನಲ್ಲೇ ಬಾಂಗ್ಲಾದೇಶದ ಅಧಿಕಾರಿಗಳು ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿದ್ದಾರೆ.

1971ರ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಜನರ ಕುಟುಂಬಗಳಿಗೆ ಶೇಕಡ 30ರಷ್ಟು ಸರ್ಕಾರಿ ಉದ್ಯೋಗ ಮೀಸಲಾತಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವ್ಯವಸ್ಥೆಯು ತಾರತಮ್ಯದಿಂದ ಕೂಡಿದೆ ಮತ್ತು ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರಿಗೆ ಅಸಮಾನವಾಗಿ ಪ್ರಯೋಜನವನ್ನು ನೀಡುತ್ತದೆ ಎಂಬುದು ಪ್ರತಿಭಟನಾಕಾರರ ವಾದವಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...