ಸಂಧಾನ ಮಾತುಕತೆ: ಹಾರ್ವರ್ಡ್ ವಿವಿಯಿಂದ 9,000 ಕೋಟಿ ರೂ. ಕೇಳಿದ ಟ್ರಂಪ್

Date:

ಇತ್ತೀಚೆಗೆ, ಹಾರ್ವರ್ಡ್ ವಿಶ್ವವಿದ್ಯಾಲಯವು ಅಮೆರಿಕ ಸರ್ಕಾರದೊಂದಿಗೆ ಸಂಧಾನ ಮಾತುಕತೆ ನಡೆದಿದೆ. ಕೆಲವು ರಿಯಾಯಿತಿಗಳನ್ನು ಪಡೆದುಕೊಂಡಿದೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ, ತಮ್ಮ ಆಡಳಿತವು ಹಾರ್ವರ್ಡ್‌ ವಿಶ್ವವಿದ್ಯಾಲಯದಿಂದ 100 ಕೋಟಿ ಡಾಲರ್ (9,000 ಕೋಟಿ ರೂ.) ಪರಿಹಾರವನ್ನು ಕೋರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

- Advertisement -

ತಮ್ಮ ಸೋಷಿಯಲ್ ಮೀಡಿಯಾ ವೇದಿಕೆ ‘ಟ್ರುತ್‌’ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ನಾವು ಈಗ ಒಂದು ಬಿಲಿಯನ್ ಡಾಲರ್ ಪರಿಹಾರವನ್ನು ಕೇಳುತ್ತೇವೆ. ಅಲ್ಲದೆ, ಭವಿಷ್ಯದಲ್ಲಿ ಹಾರ್ವರ್ಡ್ ವಿಶ್ವವಿದ್ಯಾಲಯದೊಂದಿಗೆ ಯಾವುದೇ ಸಂಬಂಧವನ್ನು ಹೊಂದಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳ ಸಮಯದಲ್ಲಿ ಯಹೂದಿ ವಿದ್ಯಾರ್ಥಿಗಳನ್ನು ರಕ್ಷಿಸುವಲ್ಲಿ ಹಾರ್ವರ್ಡ್ ಮತ್ತು ಇತರ ಕಾಲೇಜುಗಳು ವಿಫಲವಾಗಿವೆ. ಅವುಗಳು ‘ವೋಕ್’ (woke) ಸಿದ್ಧಾಂತವನ್ನು ಉತ್ತೇಜಿಸುತ್ತಿವೆ” ಎಂದು ಅಮೆರಿಕದ ಅಧಿಕಾರಿಗಳು ಆರೋಪಿಸಿದ್ದಾರೆ. ಇದೇ ಆರೋಪಗಳ ಮೇಲೆ ಕಾನೂನು ದೂರುಗಳನ್ನು ದಾಖಲಿಸಿರುವ ಅಮೆರಿಕ ಸರ್ಕಾರವು ಭಾರೀ ಮೊತ್ತದ ಪರಿಹಾರ ಪಾವತಿಗಾಗಿ ವಿಶ್ವವಿದ್ಯಾಲಯವನ್ನು ಒತ್ತಾಯಿಸಿತ್ತು. ಹಾರ್ವರ್ಡ್ ಜೊತೆ 500 ಮಿಲಿಯನ್ ಡಾಲರ್ (4,500 ಕೋಟಿ ರೂ.) ಮೊತ್ತದ ಪರಿಹಾರ ಬೇಡಿಕೆಯ ಸಂಧಾನಕ್ಕೆ ಮಾತುಕತೆಗಳು ನಡೆಯುತ್ತಿವೆ ಎಂದು 2025ರ ಸೆಪ್ಟೆಂಬರ್‌ನಲ್ಲಿ ಟ್ರಂಪ್ ಹೇಳಿದ್ದರು.

ವಿಮರ್ಶಕರು ಇದನ್ನು ಉದಾರವಾದಿ ವಿಶ್ವವಿದ್ಯಾಲಯಗಳ ಮೇಲೆ ಸರ್ಕಾರ ನಡೆಸುತ್ತಿರುವ ಒತ್ತಡದ ತಂತ್ರ ಎಂದು ಕರೆದಿದ್ದರು.

ಆದಾಗ್ಯೂ, ಅಂದಿನಿಂದ ನಡೆದ ಸುದೀರ್ಘ ಮಾತುಕತೆಗಳ ನಂತರ ಹಾರ್ವರ್ಡ್‌ ವಿವಿಯು ಪರಿಹಾರ ಪಾವತಿಸಬೇಕೆಂಬ ತಮ್ಮ ಬೇಡಿಕೆಯನ್ನು ಟ್ರಂಪ್ ಆಡಳಿತವು ಕೈಬಿಟ್ಟಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಸೋಮವಾರ ವರದಿ ಮಾಡಿತ್ತು. ಆದರೆ, ಇದೀಗ, ಮತ್ತೆ ಪರಿಹಾರ ಕೋರುವ ಚರ್ಚೆ ಮುಂದುರೆಯುತ್ತದೆ ಎಂದು ಟ್ರಂಪ್ ಹೇಳಿದ್ದಾರೆ.

“ಹಾರ್ವರ್ಡ್‌ ವಿಶ್ವವಿದ್ಯಾಲಯವು ಉದ್ಯೋಗ ತರಬೇತಿಯ ಜಟಿಲ ಪರಿಕಲ್ಪನೆಯನ್ನು ತರಲು ಬಯಸಿದೆ. ಆದರೆ ಅದು ಸಂಪೂರ್ಣವಾಗಿ ಅಸಮರ್ಪಕವಾಗಿದ್ದು, ಯಶಸ್ವಿಯಾಗುವುದಿಲ್ಲವೆಂದು ನಮಗೆ ಅನ್ನಿಸಿದ್ದರಿಂದ ಅದನ್ನು ತಿರಸ್ಕರಿಸಿದ್ದೇವೆ. 500 ಮಿಲಿಯನ್ ಡಾಲರ್‌ಗಿಂತ ಹೆಚ್ಚಿನ ನಗದು ಪಾವತಿಯಿಂದ ತಪ್ಪಿಸಿಕೊಳ್ಳಲು ಹಾರ್ವರ್ಡ್ ಹೂಡಿದ ತಂತ್ರವಿದು. ಅವರು ಮಾಡಿರುವ ಗಂಭೀರ ಮತ್ತು ಹೇಯ ಕಾನೂನುಬಾಹಿರ ಕೃತ್ಯಗಳಿಗಾಗಿ ಈ ಮೊತ್ತವು ಇನ್ನೂ ಹೆಚ್ಚಿರಬೇಕಿತ್ತು” ಎಂದು ಟ್ರಂಪ್ ಹೇಳೀದ್ದಾರೆ. ಆದರೆ, ಹಾರ್ವರ್ಡ್ ಯಾವ ಕಾನೂನುಗಳನ್ನು ಉಲ್ಲಂಘಿಸಿದೆ ಎಂಬುದನ್ನು ಟ್ರಂಪ್ ನಿರ್ದಿಷ್ಟವಾಗಿ ತಿಳಿಸಿಲ್ಲ.

ಕಳೆದ ವರ್ಷ, ಮತ್ತೊಂದು ಪ್ರತಿಷ್ಠಿತ ಸಂಸ್ಥೆಯಾದ ಕೊಲಂಬಿಯಾ ವಿಶ್ವವಿದ್ಯಾಲಯದಿಂದಲೂ 200 ಮಿಲಿಯನ್ ಡಾಲರ್ (1,800 ಕೋಟಿ ರೂ.) ಪಾವತಿಸಬೇಕೆಂದು ಟ್ರಂಪ್ ಆಡಳಿತ ಒತ್ತಾಯಿಸಿತ್ತು. ಟ್ರಂಪ್ ಆಡಳಿತದ ಒತ್ತಡಕ್ಕೆ ಮಣಿದ ವಿಶ್ವವಿದ್ಯಾಲಯವು ಆ ಮಪತ್ತವನ್ನು ಪಾವತಿಸುವುದಾಗಿ ಒಪ್ಪಿಕೊಂಡಿತ್ತು. ಅಲ್ಲದೆ, ಪ್ರವೇಶಾತಿ ಅಥವಾ ನೇಮಕಾತಿಯಲ್ಲಿ ಜನಾಂಗವನ್ನು ಪರಿಗಣಿಸುವುದನ್ನು ನಿಷೇಧಿಸುವ ನಿಯಮಗಳನ್ನು ಪಾಲಿಸುವುದಾಗಿ ಭರವಸೆ ನೀಡಿತ್ತು.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...