ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಬಚಾವ್; 9 ದಿನಗಳ ನಂತರ 170 ಮೀಟರ್ ಆಳದ ಸುರಂಗದಲ್ಲಿ ಇಬ್ಬರು ಜೀವಂತ ಪತ್ತೆ!

Date:

ನೇಪಾಳದಲ್ಲಿ ಸಂಭವಿಸಿದ ಮಹಾ ಪ್ರವಾಹ ಮತ್ತು ಸರಣಿ ಭೂಕುಸಿತದ ಭೀಕರತೆಯ ನಡುವೆಯೂ ಇಬ್ಬರು ಸಾವಿನ ದವಡೆಯಿಂದ ಬಚಾವ್ ಆಗಿದ್ದಾರೆ. ರಸುವಾ ಜಿಲ್ಲೆಯ ‘ತ್ರಿಶೂಲಿ-3A’ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಯಾಂತ್ರಿಕ ಎಂಜಿನಿಯರ್‌ಗಳನ್ನು ದುರಂತ ಸಂಭವಿಸಿದ ಒಂಬತ್ತು ದಿನಗಳ ಬಳಿಕ ಶುಕ್ರವಾರ ಬೆಳಿಗ್ಗೆ ಸೇನೆಯ ರಕ್ಷಣಾ ಪಡೆಗಳು ಜೀವಂತವಾಗಿ ಪತ್ತೆ ಹಚ್ಚಿದೆ.

- Advertisement -

ರಕ್ಷಿಸಲ್ಪಟ್ಟವರನ್ನು ಮೆಕ್ಯಾನಿಕಲ್ ಫೋರ್‌ಮ್ಯಾನ್ ಸಂಜಯ್ ಶಾ (30) ಮತ್ತು ಮೆಕ್ಯಾನಿಕಲ್ ಸೂಪರ್‌ವೈಸರ್ ಕಬೀರ್ ಮಹಾರ್ಜನ್ (45) ಎಂದು ಗುರುತಿಸಲಾಗಿದೆ. ಸುಮಾರು 170 ಮೀಟರ್‌ಗಳಷ್ಟು ಆಳದಲ್ಲಿ, ಕೆಸರು ಮತ್ತು ಕಲ್ಲುಗಳ ನಡುವೆ ಆಸರೆ ಪಡೆದಿದ್ದ ಈ ಇಬ್ಬರನ್ನು ರಕ್ಷಕರು ಯಶಸ್ವಿಯಾಗಿ ತಲುಪಿ ಸುರಕ್ಷಿತವಾಗಿ ಹೊರತಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇದನ್ನೂ ಓದಿ: ನೇಪಾಳ | ಎಲ್ಲವನ್ನೂ ಕೊಚ್ಚಿಕೊಂಡು ಹೋದ ಪ್ರವಾಹ ಇದೊಂದು ಮನೆಯನ್ನ ಬಿಟ್ಟದ್ದು ಹೇಗೆ?

ಆಗಸ್ಟ್ 26ರಂದು ಸಂಭವಿಸಿದ ಪ್ರಕೃತಿ ವಿಕೋಪದ ನಂತರ, ತ್ರಿಶೂಲಿ-3A ಯೋಜನೆಯ ಸುರಂಗದ ಬಾಗಿಲುಗಳು ದಪ್ಪನೆಯ ಕೆಸರಿನಿಂದ ಮುಚ್ಚಿಹೋಗಿದ್ದವು. ನೇಪಾಳ ಸೇನೆ ಮತ್ತು ಸಶಸ್ತ್ರ ಪೊಲೀಸ್ ಪಡೆಗಳು ನಿರಂತರವಾಗಿ ಕೆಸರು ತೆರವುಗೊಳಿಸುವ ಕಾರ್ಯದಲ್ಲಿದ್ದಾಗ, ಶುಕ್ರವಾರ ಮುಂಜಾನೆ ಸುರಂಗದ ಒಳಗಿನಿಂದ ಶಬ್ದಗಳು ಕೇಳಿಬಂದವು. ರಕ್ಷಣಾ ಸಿಬ್ಬಂದಿ ಧೈರ್ಯ ತುಂಬಿ ಮುಂದುವರಿದಾಗ, ಈ ಇಬ್ಬರು ಕಾರ್ಮಿಕರು ಪತ್ತೆಯಾಗಿದ್ದಾರೆ. ಹೊರಬಂದ ಇಬ್ಬರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆ ಮತ್ತು ವೈದ್ಯಕೀಯ ತಪಾಸಣೆಗಾಗಿ ಕಠ್ಮಂಡುವಿನ ಆಸ್ಪತ್ರೆಗೆ ವಿಮಾನದ ಮೂಲಕ ರವಾನಿಸಲಾಗಿದೆ.

ಈ ರಕ್ಷಣೆ ಕಾರ್ಯಾಚರಣೆಯು ಸುರಂಗದೊಳಗೆ ಇನ್ನೂ ಸಿಲುಕಿರುವ ಇತರ ಕಾರ್ಮಿಕರೂ ಜೀವಂತವಾಗಿರಬಹುದು ಎಂಬ ಭರವಸೆಯನ್ನು ಹುಟ್ಟುಹಾಕಿದೆ. ಸುರಂಗದೊಳಗೆ ಇನ್ನೂ ಕೆಲವರು ಜೀವಂತವಾಗಿದ್ದಾರೆ ಎಂದು ರಕ್ಷಿಸಲ್ಪಟ್ಟ ಎಂಜಿನಿಯರ್‌ಗಳೂ ಮಾಹಿತಿ ನೀಡಿದ್ದಾರೆ. ತ್ರಿಶೂಲಿ-3A ಯೋಜನೆಯ ಈ ಒಂದೇ ಸುರಂಗದಲ್ಲೇ ಇನ್ನೂ ಸುಮಾರು 115ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ಇದೆ. ಭಾರತ ಮತ್ತು ಚೀನಾದ ತಜ್ಞರ ತಂಡಗಳ ಸಹಯೋಗದೊಂದಿಗೆ ನೇಪಾಳ ಸೇನೆಯು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ಆಗಸ್ಟ್ 26ರಂದು ಸಂಭವಿಸಿದ ಈ ಪ್ರವಾಹದಲ್ಲಿ ಇದುವರೆಗೆ 1,250ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, 5,000ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...

CJP ನಾಯಕರ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರ ಮನವಿ; ಮ್ಯಾಜಿಸ್ಟ್ರೇಟ್ ಮುಂದೆ ಹಾಜರು

CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ...