ನೇಪಾಳ ಭೀಕರ ಪ್ರವಾಹ: 734 ಮೃತದೇಹಗಳು ಪತ್ತೆ; ಇನ್ನೂ 275 ಭಾರತೀಯರು ಸೇರಿ 2,498 ಜನರು ನಾಪತ್ತೆ

Date:

ನೇಪಾಳ–ಟಿಬೆಟ್ ಗಡಿಯ ಹಿಮಾಲಯ ಪ್ರದೇಶದಲ್ಲಿ ಸಂಭವಿಸಿದ ಭಾರೀ ಹಿಮ ಕುಸಿತ ಮತ್ತು ಭೋಟೆಕೊಶಿ, ತ್ರಿಶೂಲಿ ನದಿಗಳಲ್ಲಿ ಎದ್ದ ಹಠಾತ್ ಪ್ರವಾಹ ನೇಪಾಳವನ್ನು ತೀವ್ರ ಮಾನವೀಯ ದುರಂತಕ್ಕೆ ತಳ್ಳಿದೆ. ಭಾನುವಾರ ಬೆಳಗಿನ ವೇಳೆಗೆ ಬರೋಬ್ಬರಿ 734 ಮೃತದೇಹಗಳು ಪತ್ತೆಯಾಗಿವೆ. ಇನ್ನೂ 2,498ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಅವರಲ್ಲಿ 275 ಮಂದಿ ಭಾರತೀಯರಿದ್ದಾರೆ ಎಂದು ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ (NDRRMA) ತಿಳಿಸಿದೆ.

- Advertisement -

ಚೀನಾ ಭಾಗದಲ್ಲಿ 900ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತರಾಗಿದ್ದು, ಕಳೆದ ಎರಡು ದಿನಗಳಲ್ಲಿ 598 ಭಾರತೀಯರು ಟಿಬೆಟ್ ಮಾರ್ಗವಾಗಿ ನೇಪಾಳದ ಸುರಕ್ಷಿತ ಜಾಗಕ್ಕೆ ತಲುಪಿದ್ದಾರೆ. ಈವರೆಗೆ 108 ಭಾರತೀಯರನ್ನು ಭಾರತಕ್ಕೆ ಕರೆತರಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಹಿಮ ಕುಸಿತದ ಪರಿಣಾಮವಾಗಿ ಭೋಟೆಕೊಶಿ ನದಿ ಉಕ್ಕಿ ಹರಿದಿದ್ದು ರಸ್ತೆಗಳು, ಸೇತುವೆಗಳು, ವಿದ್ಯುತ್ ಯೋಜನೆಗಳು ಮತ್ತು ಇಡೀ ಗ್ರಾಮಗಳನ್ನೇ ಕೊಚ್ಚಿಕೊಂಡು ಹೋಗಿದೆ. ಟಿಬೆಟ್‌ನ ಗ್ಯಿರೋಂಗ್‌ನಲ್ಲೂ 16 ಮಂದಿ ಮೃತಪಟ್ಟಿದ್ದು, 546 ಮಂದಿ ನಾಪತ್ತೆಯಾಗಿದ್ದಾರೆ. ಟಿಬೆಟ್ ಮತ್ತು ನೇಪಾಳ – ಎರಡೂ ದೇಶಗಳು ಸೇರಿ ಮೃತರ ಸಂಖ್ಯೆ 750 ದಾಟಿದ್ದು, ನಾಪತ್ತೆಯಾದವರ ಸಂಖ್ಯೆ 3,000ರ ಸಮೀಪದಲ್ಲಿದೆ.

ವಿವಿಧ ಪ್ರದೇಶಗಳಿಂದ ಈವರೆಗೆ 8,186 ಜನರನ್ನು ರಕ್ಷಿಸಲಾಗಿದೆ. ತ್ರಿಶೂಲಿ 3A ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ನೂರಾರು ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು, ಅವರಿಗೆ ಗಾಳಿ ತಲುಪಿಸಲು ಪೈಪ್ ಅಳವಡಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ನದಿತೀರಗಳಲ್ಲಿ ಹಲವು ಅಡಿ ಕೆಸರು ತುಂಬಿರುವುದರಿಂದ ಮತ್ತು ಸೇತುವೆಗಳು ಕೊಚ್ಚಿಹೋಗಿರುವುದರಿಂದ ಹೆಲಿಕಾಪ್ಟರ್‌ಗಳ ಮೂಲಕವೇ ಕಾರ್ಯಾಚರಣೆ ನಡೆಸಲಾಗುತ್ತಿದೆ.

ನದಿಯ ಮೇಲ್ಭಾಗದಲ್ಲಿ ಮತ್ತೆ ನೀರಿನ ಮಟ್ಟ ಏರುತ್ತಿದ್ದು, ಚೀನಾ ನೀಡಿದ ಎಚ್ಚರಿಕೆಯ ಬೆನ್ನಲ್ಲೇ ನೇಪಾಳ ಸರ್ಕಾರ ನದಿತೀರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದೆ. ಭೂಕುಸಿತದಿಂದಾಗಿ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ತಾತ್ಕಾಲಿಕ ಕಟ್ಟೆಗಳು ಒಡೆದರೆ ಮತ್ತೊಂದು ಭೀಕರ ಪ್ರವಾಹ ಸಂಭವಿಸುವ ಆತಂಕ ಎದುರಾಗಿದೆ.

ಅಂತರರಾಷ್ಟ್ರೀಯ ರೆಡ್ ಕ್ರಾಸ್ ಪ್ರಕಾರ 93,000ಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೀಡಾಗಿದ್ದಾರೆ. ಯುನಿಸೆಫ್ ಪ್ರಕಾರ 17,000 ಮಕ್ಕಳಿಗೆ ತುರ್ತು ನೆರವಿನ ಅಗತ್ಯವಿದ್ದು, ತುರ್ತು ಪರಿಹಾರಕ್ಕಾಗಿ 17.2 ಮಿಲಿಯನ್ ಡಾಲರ್ ನೆರವು ಕೋರಿದೆ.

ಹಿಮಾಲಯ ಭಾಗದಲ್ಲಿ ತಾಪಮಾನ ಏರಿಕೆಯಿಂದ ಹಿಮನದಿಗಳು ಕರಗುತ್ತಿರುವುದೇ ಇಂತಹ ದುರಂತಗಳಿಗೆ ಕಾರಣ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಮೃತದೇಹಗಳು ನೂರಾರು ಕಿಲೋಮೀಟರ್ ಕೊಚ್ಚಿಹೋಗಿ ಭಾರತದ ಗಡಿಯನ್ನೂ ತಲುಪುತ್ತಿದ್ದು, ಡಿಎನ್‌ಎ ಪರೀಕ್ಷೆಗೆ ಭಾರತ ಸರ್ಕಾರ ಸಂಪೂರ್ಣ ನೆರವು ನೀಡುವುದಾಗಿ ಭರವಸೆ ನೀಡಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರುವ ಭೀತಿಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...