ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ; ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ

Date:

ನೇಪಾಳ ಮಧ್ಯಂತರ ಪ್ರಧಾನಿಯಾಗಿ ನೇಪಾಳ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ನೇಪಾಳದ ಮೊದಲ ಮಹಿಳಾ ಪ್ರಧಾನಿಯೂ ಆಗಿದ್ದಾರೆ.

- Advertisement -

ಯುವಜನರ ಜೆನ್ ಝಡ್ ಬೃಹತ್ ಪ್ರತಿಭಟನೆಯಿಂದಾಗಿ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮಂಗಳವಾರ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೂತನ ಪ್ರಧಾನಿಯ ನೇಮಕಕ್ಕಾಗಿ ಯುವಜನರು ಮತ್ತು ಸೇನಾ ಮುಖ್ಯಸ್ಥರ ನಡುವೆ ಇತ್ತೀಚೆಗೆ ಸಭೆ ನಡೆದಿತ್ತು. ಇದೀಗ, ಸುಶೀಲಾ ಅವರನ್ನು ಮಧ್ಯಂತರ ಪ್ರಧಾನಿಯಾಗಿ ಆಯ್ಕೆ ಮಾಡಲಾಗಿದ್ದು, ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನೇಪಾಳದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ವಂಶರಾಜಕಾರಣ, ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಹಾಗೂ ಸಾಮಾಜಿಕ ಮಾಧ್ಯಮಗಳ ಮೇಲಿನ‌ ನಿರ್ಬಂಧವನ್ನು ವಿರೋಧಿಸಿ ಯುವಜನರು ಸೆಪ್ಟೆಂಬರ್ 8ರಂದು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರ ಮೇಲೆ ಸರ್ಕಾರವು ಪೊಲೀಸ್ ದಾಳಿ ನಡೆಸಿತ್ತು. ಪರಿಣಾಮವಾಗಿ ಸುಮಾರು 20 ಮಂದಿ ಯುವಕರು ಸಾವನ್ನಪ್ಪಿದ್ದರು. ಬಳಿಕ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಪ್ರಧಾನಿ ಓಲಿ ರಾಜೀನಾಮೆ ನೀಡಿದ್ದರು.

ಸದ್ಯ, ನೇಪಾಳ ಉದ್ವಿಗ್ನಗೊಂಡಿದೆ. ಇಂತಹ ಸಮಯದಲ್ಲಿ ಸುಶೀಲಾ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೇಪಾಳದ ಪರಿಸ್ಥಿತಿಯನ್ನು ನಿಭಾಯಿಸಿ, ಕಾನೂನು ಸುವ್ಯವಸ್ಥೆಯನ್ನು ಮರುಸ್ಥಾಪಿಸುವ ಸವಾಲು ಅವರ ಮುಂದಿದೆ.

ಸುಶೀಲಾ ಕರ್ಕಿ ಅವರು ಜುಲೈ 11, 2016 ರಿಂದ ಜೂನ್ 6, 2017 ರವರೆಗೆ ನೇಪಾಳದ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...