ಟ್ರಂಪ್ ಹತ್ಯೆಗೆ ಇರಾನ್ ಸಂಚು: ಅಮೆರಿಕದೊಂದಿಗೆ ಗುಪ್ತಚರ ಮಾಹಿತಿ ಹಂಚಿಕೊಂಡ ಇಸ್ರೇಲ್

Date:

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲು ಇರಾನ್ ಹೊಸದಾಗಿ ಭಾರಿ ಸಂಚು ರೂಪಿಸುತ್ತಿರುವ ಕುರಿತು ಇಸ್ರೇಲ್ ಅತ್ಯಂತ ಮಹತ್ವದ ಗುಪ್ತಚರ ಮಾಹಿತಿಯನ್ನು ಅಮೆರಿಕದೊಂದಿಗೆ ಹಂಚಿಕೊಂಡಿದೆ. ಈ ಆತಂಕಕಾರಿ ಮಾಹಿತಿಯನ್ನು ‘ದಿ ವಾಲ್ ಸ್ಟ್ರೀಟ್ ಜರ್ನಲ್’ ವರದಿ ಮಾಡಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸೇನಾ ಸಂಘರ್ಷ ಹಾಗೂ ಉದ್ವಿಗ್ನತೆಯ ನಡುವೆ ಈ ಬೆಳವಣಿಗೆಯು ಜಾಗತಿಕ ಮಟ್ಟದಲ್ಲಿ ತೀವ್ರ ಸಂಚಲನ ಮೂಡಿಸಿದೆ.

- Advertisement -

ಇಸ್ರೇಲ್ ಈ ವಾರ ನೀಡಿರುವ ಮುನ್ನೆಚ್ಚರಿಕೆಯು, ಅಮೆರಿಕದ ಗುಪ್ತಚರ ಸಂಸ್ಥೆಗಳು ಇತ್ತೀಚಿನ ವಾರಗಳಲ್ಲಿ ಕಲೆಹಾಕುತ್ತಿದ್ದ ಮಾಹಿತಿಗೆ ಹೆಚ್ಚು ಪೂರಕವಾಗಿದೆ. ಆದರೆ, ಇಸ್ರೇಲ್ ನೀಡಿರುವ ಮಾಹಿತಿಯು ಕೇವಲ ಸಾಮಾನ್ಯ ಬೆದರಿಕೆಯಾಗಿರದೆ, ಹತ್ಯೆಗೆ ರೂಪಿಸಲಾಗುತ್ತಿರುವ ಒಂದು ನಿರ್ದಿಷ್ಟ ಸಂಚಿನ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿದೆ ಎಂದು ಸಿಎನ್‌ಎನ್ ವರದಿ ಕೂಡ ತಿಳಿಸಿದೆ. 2020ರಲ್ಲಿ ಅಮೆರಿಕದ ಡ್ರೋನ್ ದಾಳಿಯಲ್ಲಿ ಮೃತಪಟ್ಟ ಇರಾನ್ ಕಮಾಂಡರ್ ಖಾಸಿಂ ಸುಲೈಮಾನಿ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಇರಾನ್ ಅನೇಕ ವರ್ಷಗಳಿಂದ ಪ್ರಯತ್ನಿಸುತ್ತಲೇ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಟರ್ಕಿಯ ಅಂಕಾರಾದಲ್ಲಿ ನ್ಯಾಟೋ ಶೃಂಗಸಭೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡೊನಾಲ್ಡ್ ಟ್ರಂಪ್, ತಮ್ಮ ಜೀವಕ್ಕೆ ಇರುವ ಬೆದರಿಕೆಯ ಬಗ್ಗೆ ಸ್ವತಃ ಪ್ರಸ್ತಾಪಿಸಿದ್ದರು. “ಅವರು ಅಮೆರಿಕದ ನಾಯಕನನ್ನು ಮುಗಿಸಲು ಬಯಸಿದ್ದಾರೆ. ಇರಾನ್‌ನ ಪ್ರತಿಯೊಂದು ‘ಹಿಟ್ ಲಿಸ್ಟ್’ನಲ್ಲೂ ನಾನಿದ್ದೇನೆ. ಈ ದಿನ ಮುಂಜಾನೆಯಷ್ಟೇ ಆ ಪಟ್ಟಿಗಳನ್ನು ನಾನು ನೋಡಿದ್ದೇನೆ. ಇಲ್ಲಿಯವರೆಗೆ ನನ್ನ ಅದೃಷ್ಟ ಚೆನ್ನಾಗಿತ್ತು, ಆದರೆ ಅದು ಬಹಳ ಕಾಲ ಹಾಗೆಯೇ ಉಳಿಯದಿರಬಹುದು” ಎಂದು ಟ್ರಂಪ್ ಕಳವಳ ವ್ಯಕ್ತಪಡಿಸಿದ್ದರು.

ಮತ್ತೊಂದೆಡೆ, ಈ ಇರಾನ್ ವಿಚಾರವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಟ್ರಂಪ್ ನಡುವಿನ ಭಿನ್ನಾಭಿಪ್ರಾಯವೂ ಇತ್ತೀಚಿನ ವಾರಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಗಳನ್ನು ಮುಂದುವರಿಸುವ ಮೂಲಕ ಹೆಚ್ಚುವರಿ ಯುದ್ಧ ಗುರಿಗಳನ್ನು ಸಾಧಿಸಲು ನೆತನ್ಯಾಹು ಒತ್ತಾಯಿಸುತ್ತಿದ್ದಾರೆ. ಆದರೆ, ದೀರ್ಘಕಾಲದ ಯುದ್ಧದಿಂದ ಜಾಗತಿಕ ಆರ್ಥಿಕತೆಯ ಮೇಲಾಗುವ ದುಷ್ಪರಿಣಾಮಗಳ ಹಿನ್ನೆಲೆಯಲ್ಲಿ, ಸಂಘರ್ಷದಿಂದ ಹೊರಬರಲು ಟ್ರಂಪ್ ಒಲವು ತೋರುತ್ತಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗಷ್ಟೇ ಕಳೆದ ತಿಂಗಳು ಅಮೆರಿಕದ ಮಧ್ಯಸ್ಥಿಕೆಯಲ್ಲಿ ಇರಾನ್ ಜೊತೆಗೆ ಕದನ ವಿರಾಮ ಏರ್ಪಟ್ಟಿದ್ದರೂ, ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತೆಯೇ ಇದೆ. ಇದೇ ವೇಳೆ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಮಶ್ಹಾದ್‌ನಲ್ಲಿ ಸೇರಿದ್ದ ಅಪಾರ ಜನಸ್ತೋಮವು, ಟ್ರಂಪ್ ವಿರುದ್ಧ ಸೇಡು ತೀರಿಸಿಕೊಳ್ಳಲು ಘೋಷಣೆಗಳನ್ನು ಕೂಗಿದ್ದಲ್ಲದೆ, ‘ನಾವು ಟ್ರಂಪ್ ಅವರನ್ನು ಕೊಲ್ಲುತ್ತೇವೆ’ ಎಂಬ ಬ್ಯಾನರ್‌ಗಳನ್ನು ಬಹಿರಂಗವಾಗಿ ಪ್ರದರ್ಶಿಸಿದ್ದು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಸದ್ಯ ಗುರುವಾರ ರಾತ್ರಿ ಟ್ರಂಪ್ ಹಾಗೂ ನೆತನ್ಯಾಹು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಉಭಯ ದೇಶಗಳ ನಡುವಿನ ಸಮನ್ವಯವನ್ನು ನಿರಂತರವಾಗಿ ಮುಂದುವರಿಸಲು ಸಮ್ಮತಿಸಿದ್ದಾರೆ. ಇಸ್ರೇಲ್ ಈ ನಿರ್ದಿಷ್ಟ ಗುಪ್ತಚರ ಮಾಹಿತಿಯನ್ನು ಹಂಚಿಕೊಂಡಿರುವುದು, ಇರಾನ್ ವಿರುದ್ಧ ಅಮೆರಿಕದ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಟ್ರಂಪ್ ಅವರ ನಿರ್ಧಾರದ ಮೇಲೆ ಪ್ರಭಾವ ಬೀರುವ ಇಸ್ರೇಲ್‌ನ ಒಂದು ತಂತ್ರವೂ ಆಗಿರಬಹುದು ಎಂದು ಕೆಲವು ಅಮೆರಿಕದ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ...

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

ಶಿವಮೊಗ್ಗ | 67 ಕ್ವಿಂಟಾಲ್ ಪಡಿತರ ಅಕ್ಕಿ ಕೊರತೆ: ಪರಿಶೀಲನೆಗೆ ಆಗ್ರಹ

ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಸಂಬಂಧಪಟ್ಟ ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ...