ನ್ಯೂಜಿಲೆಂಡ್‌ | ಮಸೂದೆಯ ಪ್ರತಿ ಹರಿದು, ನೃತ್ಯ ಮಾಡಿ ಸಂಸದೆ ವಿನೂತನ ಪ್ರತಿಭಟನೆ

Date:

ನ್ಯೂಜಿಲೆಂಡ್‌ನ ಅತ್ಯಂತ ಕಿರಿಯ ಸಂಸದೆ ಎಂದು ಸುದ್ದಿಯಾಗಿದ್ದ ಈ ಯುವತಿ ಈಗ ಮತ್ತೊಮ್ಮೆ ಜಾಗತಿಕಮಟ್ಟದಲ್ಲಿ ಸದ್ದು ಮಾಡಿದ್ದಾರೆ. ನ್ಯೂಜಿಲೆಂಡ್‌ ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಯೊಂದನ್ನು ವಿರೋಧಿಸಿ, ಅದರ ಪ್ರತಿಯನ್ನು ಹರಿದು ನೃತ್ಯ ಮಾಡುವ ಮೂಲಕ ಸಂಸದೆಯೊಬ್ಬರು ಪ್ರತಿಭಟನೆ ನಡೆಸಿದ್ದಾರೆ. ನ್ಯೂಜಿಲೆಂಡ್‌ನ ‘ಮೌರಿ’ ಸಂಪ್ರದಾಯದ ‘ಹಾಕಾ’ ನೃತ್ಯ ಮಾಡಿ, ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -

22 ವರ್ಷದ ಸಂಸದೆ ‘ಹಾನಾ ರಾಫಿಟಿ ಮೈಪಿ ಕ್ಲಾರ್ಕ್‌’ ಅವರು ನ್ಯೂಜಿಲೆಂಡ್‌ನ ಅತ್ಯಂತ ಕಿರಿಯ ಸಂಸದೆ ಎಂದು ಗುರುತಿಸಿಕೊಂಡಿದ್ದಾರೆ. ಅವರು ಒಪ್ಪಂದವೊಂದಕ್ಕೆ ಸಂಬಂಧಿಸಿದ ಮಸೂದೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಮಸೂದೆಯ ಪ್ರತಿಯನ್ನು ಹರಿದುಹಾಕಿದ್ದಾರೆ. ಬಳಿಕ, ‘ಹಾಕಾ’ ನೃತ್ಯ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಸೂದೆಯ ವಿರುದ್ಧ ಸಂಸದೆ ಹಾನಾ ಅವರು ಆಕ್ರೋಶ ವ್ಯಕ್ತಪಡಿಸಿದಾಗ, ಇತರ ಕೆಲ ಸಂಸದರೂ ಅವರಿಗೆ ಧ್ವನಿಗೂಡಿಸಿದ್ದಾರೆ. ಅಲ್ಲದೆ, ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಸಾರ್ವಜನಿಕರೂ ಕೂಡ ಎದ್ದು ನಿಂತು ‘ಹಾಕಾ’ ನೃತ್ಯದ ಹಾಡನ್ನು ಹಾಡಿದ್ದಾರೆ. ಈ ಘಟನೆಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಘಟನೆಯ ಬಳಿಕ, ಸಂಸದೆ ಹಾನಾ ಅವರನ್ನು ಸಂಸತ್ ಸಭಾಪತಿ ಅಮಾನತು ಮಾಡಿದ್ದಾರೆ. ಆದಾಗ್ಯೂ, ಮಸೂದೆಯ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಸಂಸತ್‌ನಲ್ಲಿ ನಿರ್ಧರಿಸಲಾಗಿದೆ.

ಮಂಡಿಸಲಾಗಿರುವ ನೂತನ ಮಸೂದೆಯು ನ್ಯೂಜಿಲೆಂಡ್‌ ಸಮಾಜವನ್ನು ಒಡೆದು ಇಬ್ಭಾಗ ಮಾಡುತ್ತದೆ. ಮೌರಿ ಸಮುದಾಯದ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...