ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ರದ್ದುಗೊಂಡ ಸುದ್ದಿ ಸುಳ್ಳು

Date:

ಯೆಮೆನ್‌ನಲ್ಲಿ ಜೈಲಿನಲ್ಲಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ಮಂಗಳವಾರ ರದ್ದುಗೊಂಡಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ. ಇದು ಸುಳ್ಳು ಸುದ್ದಿ, ಮರಣದಂಡನೆ ರದ್ದುಗೊಂಡಿಲ್ಲ ಎಂದು ಅವರ ಸಹೋದರ ಹೇಳಿದ್ದಾರೆ.

- Advertisement -

ಪ್ರಿಯಾ ಅವರ ಶಿಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಚೇರಿ ಹೇಳಿಕೊಂಡಿತ್ತು ಎಂದು ಎಎನ್‌ಐ ವರದಿ ಮಾಡಿದೆ. ಅದಾದ ಬಳಿಕ ಮತ್ತೆ ಈ ಸುದ್ದಿ ಸುಳ್ಳು ಎಂದು ಎಎನ್‌ಐ ಮತ್ತೆ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಜು.16ರಂದು ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ: ಏನಿದು ಪ್ರಕರಣ?

ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯು “ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು” ನಿರ್ಧರಿಸಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ, ಕಾಂತಪುರಂ ಎ ಪಿ ಅಬುಬಕ್ಕರ್ ಮುಸ್ಲೈಯರ್ ಅವರ ಕಚೇರಿ ತಿಳಿಸಿದೆ ಎಂದು ವರದಿಯಾಗಿತ್ತು.

ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹ್ದಿ ಕೊಲೆ ಪ್ರಕರಣದಲ್ಲಿ ನಿಮಷಾ ದೋಷಿ ಎಂದು ನ್ಯಾಯಾಲಯ ಘೋಷಿಸಿದೆ. ಯೆಮೆನ್ ಪ್ರಜೆ ತಲಾಲ್ ಹತ್ಯೆ ಪ್ರಕರಣದಲ್ಲಿ 38 ವರ್ಷದ ನಿಮಿಷಾಗೆ 2020ರಲ್ಲಿ ಯೆಮೆನ್ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು.

ನಂತರ ಈ ತೀರ್ಪನ್ನು ದೇಶದ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ನವೆಂಬರ್ 2023ರಲ್ಲಿ ಎತ್ತಿಹಿಡಿದಿದ್ದು, ಜುಲೈ 16ರಂದು ಯೆಮೆನ್‌ನಲ್ಲಿ ಗಲ್ಲು ಶಿಕ್ಷೆ ನಿಗದಿಯಾಗಿತ್ತು. ಆದರೆ ಸದ್ಯ ನಿಮಿಷಾ ಪ್ರಿಯಾಳ ಮರಣದಂಡನೆ ಮುಂದೂಡಿಕೆ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊಹ್ರಾಬುದ್ದೀನ್ ಪ್ರಕರಣ: ಅಮಿತ್ ಶಾ ಬಿಡುಗಡೆ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ತೀವ್ರ ಕುತೂಹಲ ಕೆರಳಿಸಿರುವ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...