ನಿಮಿಷಾ ಪ್ರಿಯಾ ಮರಣದಂಡನೆ ರದ್ದು: ಡಾ. ಕೆ.ಎ. ಪೌಲ್ ಹೇಳಿಕೆ

Date:

ಭಾರತ ಹಾಗೂ ಯೆಮೆನ್‌ ದೇಶಗಳ ಅಧಿಕಾರಿಗಳ ಪ್ರಯತ್ನದ ಫಲವಾಗಿ ಕೇರಳದ ಶುಶ್ರೂಷಕಿ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಯೆಮೆನ್ ಸರ್ಕಾರ ರದ್ದುಗೊಳಿಸಿದೆ ಎಂದು ಗ್ಲೋಬಲ್‌ ಪೀಸ್‌ ಇನ್‌ಷಿಯೇಟಿವ್‌ ಸಂಸ್ಥಾಪಕ ಮತ್ತು ಧಾರ್ಮಿಕ ಗುರು ಡಾ. ಕೆ ಎ ಪೌಲ್‌ ಹೇಳಿದ್ದಾರೆ. ಜುಲೈ 16ರಂದು ಮರಣದಂಡನೆಗೆ ನಿಗದಿಯಾಗಿದ್ದ ದಿನಾಂಕವನ್ನು ಯೆಮೆನ್‌ ಮುಂದೂಡಿತ್ತು. ಆದರೆ ಈ ಕುರಿತು ಭಾರತ ಸರ್ಕಾರ, ಯೆಮೆನ್‌ ಹಾಗೂ ನಿಮಿಷಾ ಪ್ರಿಯಾ ಕುಟುಂಬಸ್ಥರಿಂದ ಯಾವುದೇ ಅಧಿಕೃತ ಹೇಳಿಕೆಗಳು ಇದುವರೆಗೂ ಹೊರ ಬಂದಿಲ್ಲ.

- Advertisement -

ಈ ಸಂಬಂಧ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಅವರು, ಯೆಮೆನ್‌ ನಾಯಕರ ಪರಿಣಾಮಕಾರಿ ಮತ್ತು ಪ್ರಾರ್ಥನಾ ಪೂರ್ವಕ ಪ್ರಯತ್ನದಿಂದ ಇದು ಸಾಧ್ಯವಾಗಿದೆ. ನಿಮಿಷ ಪ್ರಿಯಾ ಅವರ ಪ್ರಾಣ ಉಳಿಸಲು ಕಳೆದ ಹತ್ತು ದಿನಗಳಲ್ಲಿ ನಾಯಕರು ಅಪಾರ ಶ್ರಮ ಪಟ್ಟಿದ್ದಾರೆ. ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲ ನಾಯಕರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದರಲ್ಲಿ ಭಾರತದ ಪ್ರಯತ್ನವೂ ಇದೆ. ದೇವರ ದಯೆಯಿಂದ ಪ್ರಿಯ ಬಿಡುಗಡೆಯಾಗಲಿದ್ದಾರೆ. ನಿಮಿಷ ಅವರನ್ನು ಕಾನೂನುಬದ್ಧವಾಗಿ ಮತ್ತು ಸುರಕ್ಷಿತವಾಗಿ ಕರೆದುಕೊಂಡು ಹೋಗಬಹುದಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರತಿಭಟಿಸಿದರೆ ಸಾಕು ಜೈಲು ಶಿಕ್ಷೆ; ಇದು ಬಿಜೆಪಿಯ ಅಸಲಿ ಮುಖವೇ?

ಸನಾ ಜೈಲಿನಲ್ಲಿರುವ ನಿಮಿಷ ಅವರನ್ನು ಒಮಾನ್‌, ಜೆಡ್ಡಾ, ಈಜಿಪ್ಟ್‌, ಇರಾನ್ ಅಥವಾ ಟರ್ಕಿಗೆ ಕರೆದೊಯ್ಯಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಿರುವ ಭಾರತಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಿಯಾ ಅವರ ಪರವಾಗಿ ಯೆಮೆನ್‌ನಲ್ಲಿ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ವಕೀಲರನ್ನು ನೇಮಕ ಮಾಡಲಾಗಿದೆ. ಷರಿಯಾ ಕಾನೂನಿನಲ್ಲಿ ಕ್ಷಮೆಗೆ ಇರುವ ಮಾರ್ಗಗಳನ್ನು ಇವರು ಪರಿಶೀಲಿಸಲಿದ್ದಾರೆ. ಇದೊಂದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಎಲ್ಲ ಆಯಾಮಗಳಿಂದ ಲಭ್ಯವಿರುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಭಾರತ ಸರ್ಕಾರದ ವಕ್ತಾರ ರಣಧೀರ ಜೈಸ್ವಾಲ್ ಹೇಳಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...