Indo – Pak ಸಂಘರ್ಷ ಕೊನೆಗೂಳಿಸಲು ಮಧ್ಯಸ್ಥಿಕೆ ವಹಿಸಿರುವುದಾಗಿ ಚೀನಾ ಹೇಳಿಕೆ: ಭಾರತ ತಿರಸ್ಕಾರ

Date:

ಮೇ ತಿಂಗಳಲ್ಲಿ ಭಾರತ–ಪಾಕಿಸ್ತಾನ ನಡುವೆ ಉಂಟಾದ ಮಿಲಿಟರಿ ಉದ್ವಿಗ್ನತೆಯನ್ನು ಶಮನಗೊಳಿಸಲು ಚೀನಾ ಮಧ್ಯಸ್ಥಿಕೆ ವಹಿಸಿದೆ ಎಂಬ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಅವರ ಹೇಳಿಕೆಯನ್ನು ಭಾರತ ದೃಢವಾಗಿ ತಿರಸ್ಕರಿಸಿದೆ. ಭಾರತ–ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ವಿಚಾರಗಳಲ್ಲಿ ತೃತೀಯ ಪಕ್ಷಕ್ಕೆ ಯಾವುದೇ ಪಾತ್ರವಿಲ್ಲ ಎಂಬ ತನ್ನ ನಿಲುವನ್ನು ಭಾರತವು ಮತ್ತೊಮ್ಮೆ ಪುನರುಚ್ಚರಿಸಿದೆ.

- Advertisement -

ಈ ಹಿಂದೆ ಹಲವು ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಜಾರಿಗೆ ತರಲು ನಾನು ಮಧ್ಯಸ್ಥಿಕೆ ವಹಿಸಿದ್ದೇನೆ ಎಂದು ಹೇಳಿದ್ದರು. ಈಗ ಅದೇ ವರಸೆಯನ್ನು ಚೀನಾವು ಪ್ರಾರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬೀಜಿಂಗ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪರಿಸ್ಥಿತಿ ಮತ್ತು ಚೀನಾದ ವಿದೇಶಾಂಗ ಸಂಬಂಧಗಳ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ವಾಂಗ್ ಯಿ, ಜಗತ್ತಿನಾದ್ಯಂತ ಸಂಘರ್ಷಗಳು ಹಾಗೂ ಅಸ್ಥಿರತೆ ತೀವ್ರವಾಗಿ ಹೆಚ್ಚಾಗಿವೆ ಎಂದು ಹೇಳಿದರು. ಭಾರತ–ಪಾಕಿಸ್ತಾನ ಉದ್ವಿಗ್ನತೆ ಸೇರಿದಂತೆ ಹಲವು ಜಾಗತಿಕ ಬಿಕ್ಕಟ್ಟುಗಳಲ್ಲಿ ಚೀನಾ “ವಸ್ತುನಿಷ್ಠ ಮತ್ತು ನ್ಯಾಯಯುತ ನಿಲುವಿನಿಂದ” ಮಧ್ಯಸ್ಥಿಕೆ ವಹಿಸಿದೆ ಎಂದು ಅವರು ಹೇಳಿಕೊಂಡರು. ಉತ್ತರ ಮ್ಯಾನ್ಮಾರ್, ಇರಾನ್‌ನ ಪರಮಾಣು ವಿಚಾರ, ಫ್ಯಾಲೆಸ್ತೀನ್–ಇಸ್ರೇಲ್ ಹಾಗೂ ಕಾಂಬೋಡಿಯಾ–ಥಾಯ್ಲೆಂಡ್ ನಡುವಿನ ಸಂಘರ್ಷಗಳನ್ನೂ ಅವರು ಉದಾಹರಣೆಯಾಗಿ ನೀಡದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇನ್ನಾದರೂ ಪ್ರೀತಿ ಬಿತ್ತೋಣ, ಮಾನವೀಯತೆ ಮೆರೆಯೋಣ…

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ, ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಮಿಲಿಟರಿ ಘರ್ಷಣೆ ಉಂಟಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ‘ಆಪರೇಷನ್ ಸಿಂಧೂರ್’ ಆರಂಭಿಸಿತ್ತು. ನಂತರ ಈ ಕಾರ್ಯಾಚರಣೆ ಮಿಲಿಟರಿ ನೆಲೆಗಳವರೆಗೆ ವಿಸ್ತರಿಸಿತ್ತು.

ಮೇ 10ರಂದು ಜಾರಿಯಾದ ಕದನ ವಿರಾಮವು ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒಗಳು) ನಡುವಿನ ನೇರ ಮಾತುಕತೆಯ ಫಲವಾಗಿದೆ ಎಂದು ಭಾರತ ಸ್ಪಷ್ಟಪಡಿಸಿದೆ. “ಭಾರತ–ಪಾಕಿಸ್ತಾನ ಕದನ ವಿರಾಮದ ನಿರ್ಧಾರದಲ್ಲಿ ಯಾವುದೇ ಮೂರನೇ ವ್ಯಕ್ತಿಯ ಪಾತ್ರವಿಲ್ಲ. ಈ ನಿಲುವನ್ನು ನಾವು ಈಗಾಗಲೇ ಹಲವಾರು ಬಾರಿ ಸ್ಪಷ್ಟಪಡಿಸಿದ್ದೇವೆ,” ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...