ಜಪಾನ್‌, ದಕ್ಷಿಣ ಕೊರಿಯಾ ಕಡೆ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ

Date:

Advertisements
  • ಭಾರತೀಯ ಕಾಲಮಾನ ಮುಂಜಾನೆ 3.53 ಕ್ಕೆ ಕ್ಷಿಪಣಿ ಉಡಾವಣೆ
  • ಉಡಾವಣೆ ನಂತರ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ನಡೆಸಿದ ಜಪಾನ್

ಉತ್ತರ ಕೊರಿಯಾ ಗುರುವಾರ (ಏಪ್ರಿಲ್ 13) ಮಧ್ಯಂತರ ಶ್ರೇಣಿ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯವುಳ್ಳ ಖಂಡಾಂತರ ಕ್ಷಿಪಣಿಯನ್ನು ಉಡಾಯಿಸಿದೆ ಎಂದು ದಕ್ಷಿಣ ಕೊರಿಯಾ ಮತ್ತು ಜಪಾನ್ ತಿಳಿಸಿವೆ.

ಕ್ಷಿಪಣಿ ಉಡಾಯಿಸಿರುವ ಹಿನ್ನೆಲೆಯಲ್ಲಿ ತನ್ನ ಉತ್ತರ ದ್ವೀಪವಾದ ಹೊಕ್ಕೈಡೋದಲ್ಲಿನ ನಿವಾಸಿಗಳಿಗೆ ರಕ್ಷಣೆ ಪಡೆಯಲು ಸುರಕ್ಷಿತ ತಾಣಗಳಲ್ಲಿ ಆಶ್ರಯ ಪಡೆಯುವಂತೆ ಜಪಾನ್ ಎಚ್ಚರಿಕೆ ನೀಡಿದೆ.

ಎಚ್ಚರಿಕೆ ನೀಡಿದ ಕೆಲ ಸಮಯದ ನಂತರ ಹೇಳಿಕೆ ನೀಡಿದ ಜಪಾನ್‌ ಅಧಿಕಾರಿಗಳು, ಉತ್ತರ ಕೊರಿಯಾ ಉಡಾವಣೆ ಮಾಡಿದ ಖಂಡಾಂತರ ಕ್ಷಿಪಣಿ ತನ್ನ ಪ್ರದೇಶದಲ್ಲಿ ಬಿದ್ದಿಲ್ಲ ಎಂದು ತಿಳಿಸಿದ್ದಾರೆ. ಬಳಿಕ ಹೊಕ್ಕೈ ಡೊ ಪ್ರದೇಶದ ನಾಗರಿಕರಿಗೆ ನೀಡಿದ್ದ ಸೂಚನೆಯನ್ನು ಹಿಂಪಡೆಯಲಾಯಿತು.

Advertisements

ಉಡಾವಣೆ ಕುರಿತು ತಮ್ಮ ಸರ್ಕಾರ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ನಡೆಸಲಿದೆ ಎಂದು ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ಹೇಳಿದ್ದಾರೆ.

ಕ್ಷಿಪಣಿಯನ್ನು ಬೆಳಿಗ್ಗೆ 7.23 ಕ್ಕೆ (ಭಾರತೀಯ ಕಾಲಮಾನ ಮುಂಜಾನೆ 3.53) ಪ್ಯೊಂಗ್ಯಾಂಗ್ ಬಳಿಯಿಂದ ಹಾರಿಸಲಾಗಿದೆ. ದಕ್ಷಿಣ ಕೊರಿಯಾದ ಮಿಲಿಟರಿ ಪಡೆ ಕಟ್ಟೆಚ್ಚರಿಕೆ ವಹಿಸಲಾಗುತ್ತಿದ್ದು, ಅಮೆರಿಕಾ ಸೇನೆಯೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂದು ದಕ್ಷಿಣ ಕೊರಿಯಾ ಸೇನೆಯ ಜಂಟಿ ಮುಖ್ಯಸ್ಥರು ತಿಳಿಸಿದ್ದಾರೆ.

ದಕ್ಷಿಣ ಕೊರಿಯಾದ ಪ್ಯೊಂಗ್ಯಾಂಗ್ ಪ್ರದೇಶದಲ್ಲಿ ಅಮೆರಿಕಾ ಜಂಟಿ ಮಿಲಿಟರಿ ಸಮರಾಭ್ಯಾಸ  ನಡೆಸುತ್ತಿರುವುದು ಎರಡೂ ದೇಶಗಳ ನಡುವೆ ಉದ್ವಿಗ್ನತೆ ಮತ್ತಷ್ಟು ಹೆಚ್ಚಿಸಿದೆ. ಎರಡೂ ರಾಷ್ಟ್ರಗಳ ನಡುವೆ ಹೆಚ್ಚುತ್ತಿರುವ ಮಿಲಿಟರಿ ಬಾಂಧವ್ಯ ಉತ್ತರ ಕೊರಿಯಾವನ್ನು ಕೆರಳುವಂತೆ ಮಾಡಿದೆ. ಆದ ಕಾರಣ ಇತ್ತೀಚಿನ ದಿನಗಳಲ್ಲಿ ತನ್ನ ಶಸ್ತ್ರಾಸ್ತ್ರ ಪರೀಕ್ಷೆಗಳನ್ನು ಹೆಚ್ಚಿಸುತ್ತಿದೆ.

ಈಗಾಗಲೇ ಉತ್ತರ ಕೊರಿಯಾ ಬಳಿ 40ಕ್ಕೂ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳಿವೆ. ಇಷ್ಟು ಸಾಲದು ಎಂಬಂತೆ ಪ್ರತಿವರ್ಷ ಸುಮಾರು 6 ರಿಂದ 7 ಪರಮಾಣು ಪರೀಕ್ಷೆಗಳನ್ನು ಉತ್ತರ ಕೊರಿಯಾ ನಡೆಸುತ್ತಲೇ ಬಂದಿದೆ. ಇದೀಗ ಅಮೆರಿಕದ ಮೇಲಿನ ಸಿಟ್ಟು ಮತ್ತು ದಕ್ಷಿಣ ಕೊರಿಯಾ ಮೇಲಿನ ಕೋಪಕ್ಕೆ ಮತ್ತಷ್ಟು ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆಗೆ ಉತ್ತರ ಕೊರಿಯಾ ಮುಂದಾಗಿದೆ.

2023ರ ಫೆಬ್ರವರಿಯಲ್ಲಿ ಅಮೆರಿಕ  ಮತ್ತು ದಕ್ಷಿಣ ಕೊರಿಯಾಗೆ ಎಚ್ಚರಿಕೆ ನೀಡುವ ಸಲುವಾಗಿ ಉತ್ತರ ಕೊರಿಯಾ ಪರೀಕ್ಷಿಸಿದ್ದ ಪರಮಾಣು ಸಿಡಿತಲೆ ಹೊತ್ತೊಯ್ಯುವ ಸಾಮರ್ಥ್ಯದ ಖಂಡಾಂತರ ಕ್ಷಿಪಣಿ ಜಪಾನ್ ಮೇಲೆ ಹಾರಿ ಹೋಗಿತ್ತು. ಕ್ಷಿಪಣಿ ಜಪಾನ್ ಸಮೀಪದಲ್ಲೇ ಪತನಗೊಂಡಿತ್ತು. ಇದೀಗ ಮತ್ತೆ ಅಂತಹದ್ದೇ ಸಾಹಸಕ್ಕೆ ಉತ್ತರ ಕೊರಿಯಾ ಕೈಹಾಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

Download Eedina App Android / iOS

X