ಕನ್ನಡಿಗರ ಕೂಟ ದುಬೈ-ಗಲ್ಫ್ ಕನ್ನಡ ಮೂವೀಸ್‌ನಿಂದ ಇಂದು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

Date:

ಕನ್ನಡಿಗರ ಕೂಟ ದುಬೈ ಯುಎಇ ಮತ್ತು ಗಲ್ಫ್ ಕನ್ನಡ ಮೂವೀಸ್ ಜಂಟಿಯಾಗಿ ‘ಕರ್ನಾಟಕ ರಾಜ್ಯೋತ್ಸವ -2025’ ಕಾರ್ಯಕ್ರಮವು ಇಂದು(ನವೆಂಬರ್ 8) ದುಬೈಯ ಕಿಸೀಸ್ ನ ಜೆಮ್ಸ್ ಕೇಂಬ್ರಿಜ್ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.

- Advertisement -

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ, ವಿಧಾನ ಪರಿಷತ್ ನೂತನ ಸದಸ್ಯೆಯಾಗಿ ಆಯ್ಕೆಗೊಂಡಿರುವ ಡಾ.ಆರತಿ ಕೃಷ್ಣ ಅವರು ಭಾಗವಹಿಸಲಿದ್ದು, ಇದು ಅವರ ಯುಎಇಯ ಮೊದಲ ಭೇಟಿಯಾಗಿದೆ. ಜೊತೆಗೆ ಡಾ.ಆರತಿ ಕೃಷ್ಣ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ವೇದಿಕೆ ಕೂಡ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಸಂಜೆ 4.30ರಿಂದ ರಾತ್ರಿಯ ವರೆಗೆ ಜರುಗುವ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಝೀ ಕನ್ನಡ ಕಾಮಿಡಿ ಕಿಲಾಡಿಗಳು ತಂಡದವರಿಂದ ಹಾಸ್ಯ ಮನೋರಂಜನೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ನಡೆಯಲಿವೆ.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಲಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಡಾ.ಶಿವರಾಜ್ ಕುಮಾರ್ ಅವರಿಗೆ ‘ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ-2025’, ಖ್ಯಾತ ಚಲನಚಿತ್ರ ನಟಿ ರಮ್ಯಾ ಅವರಿಗೆ ‘ಕನ್ನಡದ ಕಣ್ಮಣಿ ಪ್ರಶಸ್ತಿ -2025’ ಹಾಗು ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊರವರಿಗೆ ‘ಅಂತಾರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ -2025’ ಅನ್ನು ನೀಡಿ ಗೌರವಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಯುಎಇಯಲ್ಲಿ ಇರುವ ಎಲ್ಲ ಕನ್ನಡಿಗರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಸಂಘಟಕರು ಮಾಧ್ಯಮದ ಮೂಲಕ ವಿನಂತಿಸಿದ್ದಾರೆ.

koota
shivraj
arati
eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಎಇಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಪ್ರಮುಖ ನಗರಗಳಾದ ದುಬೈ, ಶಾರ್ಜಾ ಸೇರಿದಂತೆ ಯುಎಇಯಾದ್ಯಂತ...

ಅನಿವಾಸಿ ಉದ್ಯಮಿ ರೊನಾಲ್ಡ್ ಕೊಲಾಸೊ ಅವರಿಗೆ ಮಾತೃ ವಿಯೋಗ

ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಅವರ ತಾಯಿ ಆಲಿಸ್ ಕೊಲಾಸೊ...

ಸೌದಿ ಅರೇಬಿಯಾ | ನ.27ರಂದು ಜುಬೈಲ್‌ನಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಟೂರ್ನಮೆಂಟ್

ಸಮಾಜ ಸೇವೆಯ ಉದ್ದೇಶಕ್ಕಾಗಿ ನಝಾಫಾ ಸಂಸ್ಥೆಯ ವತಿಯಿಂದ ಸೂಪರ್ ಸಿಕ್ಸ್ ಕ್ರಿಕೆಟ್...

‘ದುಬೈ ರನ್’ನಲ್ಲಿ ಮಿಂಚಿದ ಬ್ಯಾರಿಗಳು: ಅತಿ ಉದ್ದನೆಯ ಯುಎಇ ಧ್ವಜದ ದೃಶ್ಯ ಹಂಚಿಕೊಂಡ ರಾಜಕುಮಾರ ಶೇಖ್ ಹಮ್ದಾನ್

ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾನುವಾರ ದುಬೈನ...