ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಯುಎಇ ಅಧ್ಯಕ್ಷರಾಗಿ ಹಿದಾಯತ್‌ ಅಡ್ಡೂರು ಪುನರಾಯ್ಕೆ: ಪ್ರ. ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ

Date:

ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ. ತುಂಬೆ ಮೊಯಿದೀನ್ ಮುಖ್ಯ ಪೋಷಕರಾಗಿರುವ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (BCCI) ಇದರ ವಾರ್ಷಿಕ ಮಹಾಸಭೆಯು ದುಬೈಯ ಜುಮೈರಾದ ಕ್ರೌನ್ ಪ್ಲಾಝಾ ಹೊಟೇಲಿನಲ್ಲಿ ನಡೆಯಿತು.

- Advertisement -

ಈ ವಾರ್ಷಿಕ ಮಹಾಸಭೆಯಲ್ಲಿ 2026–2028ರ ಅವಧಿಗೆ ಹಿದಾಯತ್‌ ಅಡ್ಡೂರು ಅವರನ್ನು ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ ಮಾಡಲಾಯಿತು. ಅವರ ನೇತೃತ್ವದಲ್ಲಿ 2025ರ ಫೆಬ್ರವರಿಯಲ್ಲಿ ದುಬೈಯಲ್ಲಿ ನಡೆದ ‘ಬ್ಯಾರಿ ಸಮ್ಮೇಳನ’ವು ಯಶಸ್ವಿಯಾಗಿ ನಡೆದು, ಹೊಸ ಇತಿಹಾಸ ಸೃಷ್ಟಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಬಿಸಿಸಿಐ ಇದರ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ, ಖಜಾಂಚಿಯಾಗಿ ಹಂಝಾ ಎ. ಖಾದರ್, ಸಂಚಾಲಕರಾಗಿ ಅಶ್ರಫ್ ಶಾ ಮಾಂತೂರು ಅವರನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಬಶೀರ್ ಕಿನ್ನಿಂಗಾರ್ ಹಾಗೂ ಅಬ್ದುಲ್ ರೌಫ್ ಅಬುಧಾಬಿ,  ಕಾರ್ಯದರ್ಶಿಯಾಗಿ ಅನ್ಸಾಫ್ ಆಯ್ಕೆಯಾಗಿದ್ದಾರೆ.
ಮಾಧ್ಯಮ ಮತ್ತು ಸಂವಹನ ಕಾರ್ಯದರ್ಶಿಯಾಗಿ ಅಲ್ತಾಫ್ ಎಂ., ಸಲಹೆಗಾರರಾಗಿ ಮೊಹಮ್ಮದ್ ಅಲಿ ಉಚ್ಚಿಲ್ ಹಾಗೂ ಅಶ್ರಫ್ ಬಾಳೆಹೊನ್ನೂರು ಅವರನ್ನು ಆಯ್ಕೆ ಮಾಡಲಾಯಿತು.

ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(BCCI) ಯುಎಇ ಘಟಕದ ಕಾರ್ಯಕಾರಿಣಿ ಸಮಿತಿಗೆ ಅನ್ವರ್ ಹುಸೈನ್ ಅಡ್ಡೂರು, ಸಲೀಂ ಮೂಡಬಿದ್ರೆ, ಸೂಫಿ ಅನ್ವರ್ ಹಾಗೂ ಶೋಯೆಬ್ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯು ಅಶ್ರಫ್ ಅವರ ಕಿರಾಅತ್ ಪಠಣದೊಂದಿಗೆ ಆರಂಭಗೊಂಡಿತು. ಅಶ್ರಫ್ ಶಾ ಮಾಂತೂರು ಸಭೆಯಲ್ಲಿದ್ದವರೆನ್ನೆಲ್ಲಾ ಆತ್ಮೀಯವಾಗಿ ಸ್ವಾಗತಿಸಿದರು. ಅನ್ವರ್ ಹುಸೈನ್ ಅಡ್ಡೂರು ಅವರು ಸಭೆಯಲ್ಲಿ ವಾರ್ಷಿಕ ವರದಿಯನ್ನು ವಾಚಿಸಿದರು. ಹಂಝಾ ಎ. ಖಾದರ್ ಅವರು ಲೆಕ್ಕ ಪತ್ರ ಮಂಡನೆ ಮಾಡಿದರು.

ಬಿಸಿಸಿಐಯಿಂದ ಬ್ಯಾರಿ ಉದ್ಯಮಿಗಳ ನೋಂದಣಿಗೆ ಅವಕಾಶ

ಯುಎಇಎಯಲ್ಲಿ ಉದ್ಯಮ ನಡೆಸುತ್ತಿರುವ ಬ್ಯಾರಿ ಸಮುದಾಯದ ಉದ್ಯಮಿಗಳು ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(BCCI)ಯಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೊಸದಾಗಿ ಸೇರಲು ಬಯಸುವ ಉದ್ಯಮಿಗಳು BCCIಯನ್ನು ಸಂಪರ್ಕಿಸಬಹುದು.

ಹೊಸದಾಗಿ BCCIಗೆ ಸೇರಲು ಬಯಸುವವರು ಇ-ಮೇಲ್ ಮೂಲಕ ನೋಂದಾವಣೆ ಮಾಡಿಕೊಳ್ಳಬಹುದು: [email protected]
ಹೊಸದಾಗಿ ಸೇರ್ಪಡೆಯಾಗುವ ಉದ್ಯಮಿಗಳ Business (ಉದ್ಯಮ) ಬೆಳವಣಿಗೆಗೆ ಬೇಕಾದ ಎಲ್ಲ ರೀತಿಯ ಶಕ್ತಿ ತುಂಬುವ, ಪ್ರೋತ್ಸಾಹ ನೀಡುವ ಕೆಲಸ ಕಾರ್ಯವನ್ನು  BCCI ಮಾಡಲಿದೆ.

Business Empowerment(ವ್ಯಾಪಾರ ಸಬಲೀಕರಣ), ಅದಕ್ಕೆ ಸಂಬಂಧಿಸಿದ ಈವೆಂಟ್ಸ್, ಸೆಮಿನಾರ್ಸ್, Business Promote (ವ್ಯವಹಾರ ಪ್ರೋತ್ಸಾಹ, ಪ್ರಚಾರ), ಹೊಸ ಉದ್ಯಮ(New Start-up) ಆರಂಭಿಸಲು ಬೇಕಾದ ಕಾರ್ಯ ತಂತ್ರವನ್ನು ಕೂಡ ಹೊಸದಾಗಿ ನೋಂದಣಿ ಮಾಡಿಕೊಳ್ಳುವ ಬ್ಯಾರಿ ಸಮುದಾಯದ ಉದ್ಯಮಿಗಳಿಗೆ ನೀಡಲು BCCI ಮುಂದಾಗಿದೆ.

AI (ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಹಾರ)ಆಧಾರಿತ ಎಲ್ಲ ರೀತಿಯ ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಉದ್ಯಮಿದಾರರ ಉದ್ಯಮವನ್ನು ಬೆಳೆಸಲು ಬೇಕಾದ ಕಾರ್ಯತಂತ್ರವನ್ನು ಅಳವಡಿಸಲು BCCI ಯೋಜನೆಯನ್ನು ರೂಪಿಸಿಕೊಂಡಿದೆ. ಜೊತೆಗೆ ಪ್ರಸಕ್ತ ವ್ಯವಹಾರ ಕ್ಷೇತ್ರದಲ್ಲಿ ಎದುರಿಸುತ್ತಿರುವ ಸವಾಲು(Business Challenges Scenario)ಗಳನ್ನು ಯಾವ ರೀತಿ ಎದುರಿಸಬೇಕು, ಉದ್ಯಮಿಗಳಿಗೆ ಆಗುತ್ತಿರುವ ಬೇರೆ ಬೇರೆ ರೀತಿಯ ಸಮಸ್ಯೆ, ತೊಂದರೆ  ಎಂಬಿತ್ಯಾದಿ ವಿಷಯಗಳ ಕುರಿತು ಕೂಡ ಉದ್ಯಮದಾರರಿಗೆ ಸಲಹೆ, ಸೂಚನೆಯನ್ನು ಬಿಸಿಸಿಐ ನೀಡಲಿದೆ.

ಈ ಹಿನ್ನೆಲೆಯಲ್ಲಿ ಯುಎಇಯಲ್ಲಿರುವ ಬ್ಯಾರಿ ಸಮುದಾಯದ ಎಲ್ಲ ಉದ್ಯಮಿಗಳು ಸಹಾಯ, ಸಹಕಾರ ನೀಡುವಂತೆ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಪ್ರಕಟಣೆಯಲ್ಲಿ ತಿಳಿಸಿದೆ.

1404974
eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನಿವಾಸಿ ಉದ್ಯಮಿ ರೊನಾಲ್ಡ್ ಕೊಲಾಸೊ ಅವರಿಗೆ ಮಾತೃ ವಿಯೋಗ

ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಅವರ ತಾಯಿ ಆಲಿಸ್ ಕೊಲಾಸೊ...

ಸೌದಿ ಅರೇಬಿಯಾ | ನ.27ರಂದು ಜುಬೈಲ್‌ನಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಟೂರ್ನಮೆಂಟ್

ಸಮಾಜ ಸೇವೆಯ ಉದ್ದೇಶಕ್ಕಾಗಿ ನಝಾಫಾ ಸಂಸ್ಥೆಯ ವತಿಯಿಂದ ಸೂಪರ್ ಸಿಕ್ಸ್ ಕ್ರಿಕೆಟ್...

‘ದುಬೈ ರನ್’ನಲ್ಲಿ ಮಿಂಚಿದ ಬ್ಯಾರಿಗಳು: ಅತಿ ಉದ್ದನೆಯ ಯುಎಇ ಧ್ವಜದ ದೃಶ್ಯ ಹಂಚಿಕೊಂಡ ರಾಜಕುಮಾರ ಶೇಖ್ ಹಮ್ದಾನ್

ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾನುವಾರ ದುಬೈನ...

ಸೌದಿ ಅರೇಬಿಯಾ | ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪೂರ್ಣಗೊಳಿಸಲು ಆರೋಗ್ಯ ಸಚಿವಾಲಯ ಸೂಚನೆ

ಕೋವಿಡ್-19 ನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಎಲ್ಲ ವಯಸ್ಸಿನ ನಿವಾಸಿಗಳು ಮತ್ತು ವಲಸಿಗರು...