ಅ.25 | ದುಬೈನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ‘ಗಡಿನಾಡ ಉತ್ಸವ -2025’ ಕಾರ್ಯಕ್ರಮ

Date:

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಯುಎಇ ಘಟಕ ದುಬೈ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಜಂಟಿ ಆಶ್ರಯದ 4ನೇ ವರ್ಷದ ದುಬೈ “ಗಡಿನಾಡ ಉತ್ಸವ -2025” ಕಾರ್ಯಕ್ರಮವು ದುಬೈಯ ಔದ್ ಮೇಥಾದ ಗ್ಲೆಂಡೇಲ್ ಅಂತಾರಾಷ್ಟ್ರೀಯ ಶಾಲೆಯ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಸಂಜೆ 4ರಿಂದ ರಾತ್ರಿ 11ರವರೆಗೆ ನಡೆಯಲಿದೆ.

- Advertisement -

ಸಂಜೆ 4 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಸಾಧಕರಿಗೆ ಗೌರವ ಸನ್ಮಾನ ನಂತರ ಯುಎಇಯ ಪ್ರಸಿದ್ಧ ನೃತ್ಯ ತಂಡದವರಿಂದ ನೃತ್ಯ ವೈಭವ,ಗಾಯಕ ಗಾಯಕಿಯರಿಂದ ಸಂಗೀತ ಸುಧೆ,ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ತಂಡದವರಿಂದ ಗಡಿನಾಡ ಯಕ್ಷ ಕವಿ ಪಾರ್ತಿಸುಬ್ಬ ವಿರಚಿತ ಶ್ರೀ ಕೃಷ್ಣ ಬಾಲಲೀಲೆ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...
571016635 122106272841045442 4247242694687236448 n

ರಾತ್ರಿ 8 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕರ್ನಾಟಕ ರಾಜ್ಯ ಹೆಲ್ತ್ ಕೌನ್ಸಿಲ್ ನ ಅಧ್ಯಕ್ಷರಾದ ಡಾ.ಯು.ಟಿ.ಇಫ್ತಿಕಾರ್ ಅಲಿ, ಕಾಸರಗೋಡಿನ ಶಾಸಕರಾದ ಎನ್.ಎ ನೆಲ್ಲಿಕುನ್ನು, ಮಂಜೇಶ್ವರದ ಶಾಸಕರಾದ ಎ.ಕೆ.ಎಂ.ಅಶ್ರಫ್ ಮತ್ತು ಊರಿನ ಹಾಗೂ ಯುಎಇಯ ಹಲವು ಉದ್ಯಮಿಗಳು ಉಪಸ್ಥಿತರಿರಲಿದ್ದಾರೆ.

Capture 26

ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ನಾಲ್ಕು ಮಂದಿ ಸಾಧಕರಾದ ಉದ್ಯಮಿ ಪ್ರಕಾಶ್ ಕುಂಪಲ, ಬಿ.ಎಂ ಗ್ರೂಪ್ ಮತ್ತು ರೇಡಿಯೋ ಜಿಲ್ಲಿನ ಆಡಳಿತ ನಿರ್ದೇಶಕರಾದ ಡಾ.ಕನಕರಾಜ್, ಹೋಟೆಲ್ ಉದ್ಯಮಿ ಸಂದೀಪ್ ಶೆಟ್ಟಿ,ಮ್ಯಾಕ್ಸ್ ಕ್ಯಾರ್ ಕ್ಲಿನಿಕ್ ದುಬೈ ಆಡಳಿತ ನಿರ್ದೇಶಕರಾದ ಬಶೀರ್ ಕಿನ್ನಿಂಗಾರ್ ಅವರಿಗೆ “ಗಡಿನಾಡ ರತ್ನ -2025” ಪ್ರಶಸ್ತಿ ಪ್ರದಾನ ನಡೆಯಲಿದೆ.

ಇದನ್ನು ಓದಿದ್ದೀರಾ? RSS ಸಮಾನತೆಯ ಶತ್ರು; ಯಾಕೆಂದರೆ…

ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬಂದಿರುವ ಮಂಗಳೂರಿನ ಉದ್ಯಮಿ ಕಟಪಾಡಿ ಸತ್ಯೆಂದ್ರ ಪೈ,ಕ್ರೀಯೆಟಿವ್ ಕ್ಯಾಟರ್ ಹಾಸ್ಪಿಟಲಿಟಿನ ಆಡಳಿತ ನಿರ್ದೇಶಕರಾದ ಮಂಜುನಾಥ ರಾಜನ್, ಕರ್ನಾಟಕ ಜಾನಪದ ಪರಿಷತ್ ಒಮಾನ್ ನ ಅಧ್ಯಕ್ಷರಾದ ಶಿವಾನಂದ ಕೋಟ್ಯಾನ್ ಕಟಪಾಡಿ ಅವರನ್ನು ಸನ್ಮಾನಿಸುವ ಕಾರ್ಯ ನಡೆಯಲಿದೆ. ಜೊತೆಗೆ, ದುಬೈನಲ್ಲಿ ಕಳೆದ ಹಲವಾರು ವರ್ಷಗಳಿಂದ ಕನ್ನಡದ ವಿದ್ಯಾರ್ಥಿಗಳಿಗೆ ಮಾತೃ ಭಾಷೆಯ ಕಲಿಕಾ ತರಗತಿಯನ್ನು ಉಚಿತವಾಗಿ ನೀಡುತ್ತಿರುವ “ಕನ್ನಡ ಪಾಠ ಶಾಲೆ ದುಬೈ” ಸಂಸ್ಥೆಯನ್ನು ಗೌರವಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

566284831 122106215937045442 4154623802358375883 n
eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಎಇಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಪ್ರಮುಖ ನಗರಗಳಾದ ದುಬೈ, ಶಾರ್ಜಾ ಸೇರಿದಂತೆ ಯುಎಇಯಾದ್ಯಂತ...

ಅನಿವಾಸಿ ಉದ್ಯಮಿ ರೊನಾಲ್ಡ್ ಕೊಲಾಸೊ ಅವರಿಗೆ ಮಾತೃ ವಿಯೋಗ

ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಅವರ ತಾಯಿ ಆಲಿಸ್ ಕೊಲಾಸೊ...

ಸೌದಿ ಅರೇಬಿಯಾ | ನ.27ರಂದು ಜುಬೈಲ್‌ನಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಟೂರ್ನಮೆಂಟ್

ಸಮಾಜ ಸೇವೆಯ ಉದ್ದೇಶಕ್ಕಾಗಿ ನಝಾಫಾ ಸಂಸ್ಥೆಯ ವತಿಯಿಂದ ಸೂಪರ್ ಸಿಕ್ಸ್ ಕ್ರಿಕೆಟ್...

‘ದುಬೈ ರನ್’ನಲ್ಲಿ ಮಿಂಚಿದ ಬ್ಯಾರಿಗಳು: ಅತಿ ಉದ್ದನೆಯ ಯುಎಇ ಧ್ವಜದ ದೃಶ್ಯ ಹಂಚಿಕೊಂಡ ರಾಜಕುಮಾರ ಶೇಖ್ ಹಮ್ದಾನ್

ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾನುವಾರ ದುಬೈನ...