ಅನಿವಾಸಿ ಕನ್ನಡಿಗರಿಗೆ ‘ಪ್ರತ್ಯೇಕ ಸಚಿವಾಲಯ’ ಗ್ಯಾರಂಟಿ ಯಾವಾಗ? ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

Date:

ಅನಿವಾಸಿ ಕನ್ನಡಿಗರ ರಕ್ಷಣೆ, ಸಾಮಾಜಿಕ ಭದ್ರತೆ ದೃಷ್ಟಿಯಿಂದ ಕರ್ನಾಟಕ ರಾಜ್ಯ ಸರಕಾರ ಚುನಾವಣೆಯ ವೇಳೆ ಅನಿವಾಸಿ ಕನ್ನಡಿಗರಿಗಾಗಿ ಘೋಷಿಸಿದ್ದ ‘ಪ್ರತ್ಯೇಕ ಸಚಿವಾಲಯ’ ಗ್ಯಾರಂಟಿಯನ್ನು ಯಾವಾಗ ಆರಂಭಿಸುತ್ತೀರಿ ಎಂದು ರಾಜ್ಯ ಸರ್ಕಾರವನ್ನು ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಪ್ರಶ್ನಿಸಿದ್ದಾರೆ.

- Advertisement -

ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರು ವಿಧಾನ ಪರಿಷತ್‌ಗೆ ನೂತನ ಸದಸ್ಯೆಯಾಗಿ ಆಯ್ಕೆಗೊಂಡಿರುವ ಹಿನ್ನೆಲೆಯಲ್ಲಿ ಅವರಿಗಾಗಿ ಕೆಎನ್‌ಆರ್‌ಐ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಬಿಸಿಸಿಐ ಅಧ್ಯಕ್ಷ ಹಿದಾಯತ್ ಅಡ್ಡೂರು ಹಾಗು ಕರ್ನಾಟಕ ಸಂಘ ದುಬೈನ ಅಧ್ಯಕ್ಷ ಶಶಿಧರ್ ನಾಗರಾಜಪ್ಪರವರ ನೇತೃತ್ವದಲ್ಲಿ ಯುಎಇಯ ಸುಮಾರು 36ಕ್ಕೂ ಹೆಚ್ಚು ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ದುಬೈನ ಗ್ರ್ಯಾಂಡ್ ಹಯಾತ್ ಹೋಟೆಲಿನಲ್ಲಿ ಆಯೋಜಿಸಲಾಗಿದ್ದ ಅಭಿನಂದನೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೊಲಾಸೊ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ರಾಜ್ಯದಲ್ಲಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷವು ಅನಿವಾಸಿಗಳಿಗೆ ಪ್ರತ್ಯೇಕ ಸಚಿವಾಲಯದ ಗ್ಯಾರಂಟಿಯನ್ನು ತನ್ನ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿತ್ತು. ಆದರೆ, ಪಕ್ಷ ಅಧಿಕಾರಕ್ಕೆ ಬಂದು ಕೆಲವು ವರ್ಷಗಳೇ ಆದರೂ ಈ ಗ್ಯಾರಂಟಿಯನ್ನು ಇನ್ನೂ ಈಡೇರಿಸುವಲ್ಲಿ ಯಾಕೆ ವಿಳಂಬ ? ಇನ್ನಾದರೂ ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ವಿನಂತಿಸಿದರು.

WhatsApp Image 2025 11 08 at 5.04.57 PM

ರಾಜ್ಯದಲ್ಲಿ ಈಗಾಗಲೇ ಆರತಿ ಕೃಷ್ಣ ನೇತೃತ್ವದ ಅನಿವಾಸಿ ಭಾರತೀಯ ವೇದಿಕೆ ಇದೆ, ಇದು ಸೀಮಿತ ಅಧಿಕಾರವನ್ನು ಹೊಂದಿದೆ. ಜೊತೆಗೆ ಖರ್ಚು ಮಾಡಲು ಬೇಕಾದಷ್ಟು ಬಜೆಟ್ ಕೂಡ ಇಲ್ಲ. ಈ ಎಲ್ಲ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಮೂಲಕ ಕನ್ನಡಿಗರ ಸಂಕಷ್ಟಕ್ಕೆ ಪರಿಹಾರ ಒದಗಿಸಬೇಕು ಎಂದು ಡಾ.ರೊನಾಲ್ಡ್ ಕೊಲಾಸೊ ಆಗ್ರಹಿಸಿದರು.

ಪ್ರಸಕ್ತ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆ, ಕಷ್ಟ, ಕಾರ್ಪಣ್ಯಗಳಿಗೆ ಸ್ಪಂದಿಸಲು, ಸಹಾಯಹಸ್ತವನ್ನು ನೀಡಲು ಪ್ರತ್ಯೇಕ ಸಚಿವಾಲಯದ ಅಗತ್ಯವಿದೆ. ಹಲವಾರು ವರ್ಷಗಳಿಂದ ಈ ಬಗ್ಗೆ ಒತ್ತಾಯ, ಒತ್ತಡವನ್ನು ಏರುತ್ತಿದ್ದರೂ ಇನ್ನೂ ಸಚಿವಾಲಯದ ಕನಸು ಈಡೇರಿಲ್ಲ. ರಾಜ್ಯ ಸರ್ಕಾರ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪನೆಯ ಭರವಸೆ ಮಾತ್ರ ಸಿಗುತ್ತಿದೆ. ಇನ್ನು ನಾವು ಈ ಬಗ್ಗೆ ಸುಮ್ಮನೆ ಕೂರದೆ ಒಗ್ಗಟ್ಟಿನಿಂದ ಒತ್ತಾಯವನ್ನು ಮಾಡಬೇಕು. ರಾಜ್ಯ ಸರಕಾರ ಕೇರಳದ ಮಾದರಿಯಲ್ಲಿ ಕನ್ನಡಿಗರಿಗೂ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸುವ ಮೂಲಕ ಕನ್ನಡಿಗರ ಕಷ್ಟ, ಸಮಸ್ಯೆಗಳಿಗೆ ಪರಿಹಾರ ಒದಗಿಸಲು ವೇದಿಕೆಯನ್ನು ಕಲ್ಪಿಸುವಂತೆ ಕೊಲಾಸೊ ಒತ್ತಾಯಿಸಿದರು.

WhatsApp Image 2025 11 08 at 5.04.59 PM

ಈ ಕುರಿತು ಶೀಘ್ರವೇ ಒಂದು ನಿಯೋಗ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಭೇಟಿಯಾಗಿ ಪ್ರತ್ಯೇಕ ಸಚಿವಾಲಯವನ್ನು ಕೂಡಲೇ ಸ್ಥಾಪಿಸುವಂತೆ ಒತ್ತಾಯವನ್ನು ಮಾಡೋಣ, ಈ ನಿಯೋಗದೊಂದಿಗೆ ನಾನು ಕೂಡ ಕೈಜೋಡಿಸುತ್ತೇನೆ ಎಂದು ಅವರು ಭರವಸೆ ನೀಡಿದರು.

ಮುಂಬರುವ ದಿನಗಳಲ್ಲಿ ಇಲ್ಲಿರುವ ಎಲ್ಲ ಕನ್ನಡಪರ ಸಂಘಟನೆಗಳು ಒಂದುಗೂಡಿ ಮುನ್ನಡೆಯಬೇಕು. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವದಂಥ ರಾಷ್ಟ್ರೀಯ ಹಬ್ಬ, ಕನ್ನಡ ರಾಜ್ಯೋತ್ಸವವನ್ನು ಎಲ್ಲ ಸಂಘಟನೆಗಳು ಒಂದೆಡೆ ಸೇರಿ ಜೊತೆಯಾಗಿ ಆಚರಿಸಬೇಕು. ಇದು ನಮ್ಮ ಒಗ್ಗಟ್ಟನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಮತ್ತು ನಮ್ಮ ಮಧ್ಯೆ ಸ್ನೇಹ, ಪ್ರೀತಿ-ವಿಶ್ವಾಸ, ಸಂಬಂಧವನ್ನು ಇಮ್ಮಡಿಗೊಳಿಸುತ್ತದೆ ಎಂದರು.

WhatsApp Image 2025 11 08 at 5.04.54 PM

ಯುಎಇಯಲ್ಲಿ ಕನ್ನಡ ಭವನ; 5 ಕೋಟಿ ರೂ. ದೇಣಿಗೆ ಘೋಷಿಸಿದ ಕೊಲಾಸೊ

ಯುಎಇಯಲ್ಲಿ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಲು ಕನ್ನಡ ಭವನದ ಅಗತ್ಯತೆ ಇದ್ದು, ಈ ಬಗ್ಗೆ ರಾಜ್ಯ ಸರಕಾರ ನಮಗೆ ಸಹಾಯ-ಸಹಕಾರವನ್ನು ನೀಡಬೇಕು. ಕನ್ನಡ ಭವನ ನಿರ್ಮಿಸಲು ತಾನು 5 ಕೋಟಿ ರೂಪಾಯಿ ದೇಣಿಗೆ ನೀಡುತ್ತೇನೆ ಎಂದು ಕೊಲಾಸೊ ಘೋಷಿಸಿದರು. ಇದೇ ವೇಳೆ ಪ್ರವೀಣ್ ಕುಮಾರ್ ಶೆಟ್ಟಿ ಅವರು ಕೂಡ 2.5 ಕೋಟಿ ರೂಪಾಯಿ ನೀಡುವುದಾಗಿ ಘೋಷಣೆಯನ್ನು ಮಾಡಿದರು.

ಡಾ.ಆರತಿ ಕೃಷ್ಣ ಅವರನ್ನು ಅಭಿನಂದಿಸಿದ ಕೊಲಾಸೊ, ಕನ್ನಡಿಗರ ಕಷ್ಟಗಳಿಗೆ, ಸಮಸ್ಯೆಗಳಿಗೆ ಸದಾ ಧ್ವನಿಯಾಗುತ್ತಿರುವ ಆರತಿ ಅವರ ಕಾರ್ಯ ವೈಖರಿ ನಿಜವಾಗಿಯೂ ಪ್ರಶಂಸನೀಯ, ಶ್ಲಾಘನೀಯ. ಅವರ ಸೇವೆ ಇನ್ನು ಇದೇ ರೀತಿ ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಆರತಿ ಕೃಷ್ಣ, ಅಭಿನಂದನೆ ಹಾಗೂ ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರಲ್ಲದೆ, ಅನಿವಾಸಿ ಕನ್ನಡಿಗರ ಕಷ್ಟ, ಸಮಸ್ಯೆ, ಸಂಕಷ್ಟಗಳಿಗೆ ಮುಂದಕ್ಕೂ ತಾನು ಧ್ವನಿಯಾಗಲಿದ್ದೇನೆ. ಸರಕಾರದ ಮಟ್ಟದ ಎಲ್ಲ ರೀತಿಯ ಸಹಾಯ, ಸಹಕಾರವನ್ನು ಇನ್ನಷ್ಟು ಹೆಚ್ಚು ತಲುಪಿಸುವಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

WhatsApp Image 2025 11 08 at 5.04.57 PM 1

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ.ಯು.ಟಿ.ಇಫ್ತಿಕಾರ್ ಅಲಿ, ಕನ್ನಡ ಭವನ ನಿರ್ಮಾಣಕ್ಕೆ ಬೇಕಾದ ಸಹಾಯ-ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರಲ್ಲದೆ, ಎಲ್ಲ ಜಾತಿ-ಧರ್ಮದವರನ್ನು ಜೊತೆಗೂಡಿಸಿಕೊಂಡು ಯುಎಇಯಲ್ಲಿ ಸೌಹಾರ್ದತೆಯ ಕೊಂಡಿಯಾಗಿರುವ ಅಮರ್-ಅಕ್ಬರ್-ಅಂತೋನಿ ಎಂದೇ ಗುರುತಿಸಲಾಗುವ ಪ್ರವೀಣ್ ಕುಮಾರ್ ಶೆಟ್ಟಿ, ತುಂಬೆ ಮೊಯಿದಿನ್ ಹಾಗೂ ರೊನಾಲ್ಡ್ ಕೊಲಾಸೊ ಅವರ ನೇತೃತ್ವದಲ್ಲಿಯೇ ಈ ಕನ್ನಡ ಭವನ ನಿರ್ಮಾಣ ಆಗಲಿ ಎಂದು ಶುಭ ಹಾರೈಸಿದರು.

ದುಬೈ ಬಿಸಿಎಫ್‌ ಅಧ್ಯಕ್ಷ ಡಾ.ಬಿ.ಕೆ.ಯೂಸುಫ್ ಅವರು ಡಾ.ಆರತಿ ಕೃಷ್ಣ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಈ ವೇಳೆ ವಿವಿಧ ಕನ್ನಡಪರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು. ಹಿದಾಯತ್ ಅಡ್ಡೂರು ಎಲ್ಲರನ್ನು ಸ್ವಾಗತಿಸಿದರು. ಶಶಿಧರ್ ನಾಗರಾಜಪ್ಪ ಕಾರ್ಯಕ್ರಮ ನಿರೂಪಿಸಿದರು.

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಎಇಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಪ್ರಮುಖ ನಗರಗಳಾದ ದುಬೈ, ಶಾರ್ಜಾ ಸೇರಿದಂತೆ ಯುಎಇಯಾದ್ಯಂತ...

ಅನಿವಾಸಿ ಉದ್ಯಮಿ ರೊನಾಲ್ಡ್ ಕೊಲಾಸೊ ಅವರಿಗೆ ಮಾತೃ ವಿಯೋಗ

ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಅವರ ತಾಯಿ ಆಲಿಸ್ ಕೊಲಾಸೊ...

ಸೌದಿ ಅರೇಬಿಯಾ | ನ.27ರಂದು ಜುಬೈಲ್‌ನಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಟೂರ್ನಮೆಂಟ್

ಸಮಾಜ ಸೇವೆಯ ಉದ್ದೇಶಕ್ಕಾಗಿ ನಝಾಫಾ ಸಂಸ್ಥೆಯ ವತಿಯಿಂದ ಸೂಪರ್ ಸಿಕ್ಸ್ ಕ್ರಿಕೆಟ್...

‘ದುಬೈ ರನ್’ನಲ್ಲಿ ಮಿಂಚಿದ ಬ್ಯಾರಿಗಳು: ಅತಿ ಉದ್ದನೆಯ ಯುಎಇ ಧ್ವಜದ ದೃಶ್ಯ ಹಂಚಿಕೊಂಡ ರಾಜಕುಮಾರ ಶೇಖ್ ಹಮ್ದಾನ್

ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾನುವಾರ ದುಬೈನ...