ಒಬಾಮಾ ದಂಪತಿ ಫೋಟೋ ತಿರುಚಿ ಜನಾಂಗೀಯ ನಿಂದನೆ; ಟ್ರಂಪ್ ವಿರುದ್ಧ ವ್ಯಾಪಕ ಆಕ್ರೋಶ!

Date:

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿಯ ಮಾರ್ಪಡಿಸಿದ ಚಿತ್ರವನ್ನು ಹಂಚಿಕೊಂಡಿರುವ ಹಾಲಿ ಅಧ್ಯಕ್ಷ ಟ್ರಂಪ್ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಒಬಾಮ ದಂಪತಿ ವಿರುದ್ಧ ಟ್ರಂಪ್ ಜನಾಂಗೀಯ ನಿಂದನೆ ಮಾಡಿದ್ದಾರೆಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಕುರಿತಾಗಿಯೂ ಟ್ರಂಪ್ ಲೇವಡಿ ಮಾಡಿದ್ದು, ಅದಕ್ಕೂ ತೀವ್ರ ಖಂಡನೆ ವ್ಯಕ್ತವಾಗಿದೆ.

- Advertisement -

ತಮ್ಮ ಟ್ರುತ್ ಸೋಷಿಯಲ್‌ನಲ್ಲಿ ಚಿತ್ರವೊಂದನ್ನ ಟ್ರಂಪ್ ಹಂಚಿಕೊಂಡಿದ್ದಾರೆ. ಆ ಎಡಿಟ್ ಮಾಡಲಾದ ಚಿತ್ರದಲ್ಲಿ; ಬರಾಕ್ ಮತ್ತು ಅವರ ಪತ್ನಿ ಮಿಶೆಲ್ ಒಬಾಮಾ ಅವರು ನಗುತ್ತಾ ಏರ್ ಫೋರ್ಸ್ ಒನ್ ವಿಮಾನವನ್ನು ಏರುತ್ತಿರುವುದು ಕಂಡುಬಂದಿದೆ. ಆದರೆ, ಆ ವಿಮಾನದ ಮೇಲೆ ‘Yes We Can’, ‘Obama’, ‘BLM’ (Black Lives Matter) ಎಂಬ ಬರಹಗಳ ಜೊತೆಗೆ ಅರೇಬಿಕ್ ಭಾಷೆಯಲ್ಲಿ “ಅಲ್‌ಹಮ್ದುಲಿಲ್ಲಾಹ್” (ದೇವರಿಗೆ ಧನ್ಯವಾದಗಳು) ಎಂಬ ಪದವನ್ನು ಬರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಪೋಸ್ಟ್ ಅಮೆರಿಕದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ರಾಜಕೀಯ ವಿಶ್ಲೇಷಕರು ಮತ್ತು ನಾಗರಿಕ ಹಕ್ಕುಗಳ ಹೋರಾಟಗಾರರು ಇದನ್ನು ಕಪ್ಪು ವರ್ಣೀಯರ ವಿರುದ್ಧದ ‘ಜನಾಂಗೀಯ ದ್ವೇಷ’ದ ಪ್ರಚಾರ ಎಂದು ಖಂಡಿಸಿದ್ದಾರೆ.

ಈ ಹಿಂದೆ ಫೆಬ್ರವರಿಯಲ್ಲೂ ಒಬಾಮಾ ದಂಪತಿಯನ್ನು ಮಂಗಗಳಿಗೆ ಹೋಲಿಸುವ ಪೋಸ್ಟ್ ಹಾಕಿ ಟ್ರಂಪ್ ವಿರೋಧ ಎದುರಿಸಿದ್ದರು. ಅಲ್ಲದೆ, ಚಿಕಾಗೋದ ಒಬಾಮಾ ಗ್ರಂಥಾಲಯದ ಚಿತ್ರವನ್ನು ಕಸದ ರಾಶಿಯಂತೆ ಬಿಂಬಿಸಿ, “ಇದು ಅಮೆರಿಕ ದ್ವೇಷಿಗಳ ಮೆಕ್ಕಾ ಆಗಲಿದೆ” ಎಂದು ಟ್ರಂಪ್ ಟ್ವೀಟ್ ಮಾಡಿದ್ದರು.

ಇಟಲಿ ಪ್ರಧಾನಿ ಮೆಲೋನಿಗೂ ಅಪಮಾನ!

ಒಬಾಮಾ ದಂಪತಿ ಮಾತ್ರವಲ್ಲದೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಹಳೆಯ ಫೋಟೋ ಒಂದನ್ನು ಹಂಚಿಕೊಂಡಿರುವ ಟ್ರಂಪ್, ಅದರ ಮೇಲೆ “RESTRAINING ORDER NEEDED” (ನಿರ್ಬಂಧಕಾಜ್ಞೆಯ ಅಗತ್ಯವಿದೆ) ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಹೊಸ ರಾಜತಾಂತ್ರಿಕ ಸಂಘರ್ಷಕ್ಕೆ ನಾಂದಿ ಹಾಡುವ ಸಾಧ್ಯತೆ ದಟ್ಟವಾಗಿದೆ.

ಹಿಂದಿನ ಜಿ-7 ಶೃಂಗಸಭೆಯಲ್ಲಿ ಮೆಲೋನಿ ತಮ್ಮೊಂದಿಗೆ ಫೋಟೋ ತೆಗೆಸಿಕೊಳ್ಳಲು ಬೇಡಿಕೊಂಡಿದ್ದರು ಎಂದು ಟ್ರಂಪ್ ಆರೋಪಿಸಿದ್ದರು. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ಮೆಲೋನಿ, “ನಾನು ಅಥವಾ ಇಟಲಿ ಯಾರ ಮುಂದೆಯೂ ಬೇಡುವುದಿಲ್ಲ, ಅದು ಶುದ್ಧ ಸುಳ್ಳು” ಎಂದು ಛೀಮಾರಿ ಹಾಕಿದ್ದರು.

ಈ ವಿವಾದದ ಬೆನ್ನಲ್ಲೇ ಇಟಲಿಯ ವಿದೇಶಾಂಗ ಸಚಿವರು ತಮ್ಮ ಅಮೆರಿಕ ಪ್ರವಾಸವನ್ನೂ ರದ್ದುಗೊಳಿಸಿದ್ದರು.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಟ್ರಂಪ್ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ, ಈ ಕುರಿತು ಶ್ವೇತಭವನವಾಗಲಿ ಅಥವಾ ಬರಾಕ್ ಒಬಾಮಾ ಅವರ ಕಚೇರಿಯಾಗಲಿ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...