ಒಮಾನ್‌ | ಭೀಕರ ಅಪಘಾತ: ಮಕ್ಕಳು ಸೇರಿದಂತೆ 9 ಭಾರತೀಯರಿಗೆ ಗಂಭೀರ ಗಾಯ; ಮಹಿಳೆ ಸಾವು

Date:

ಒಮಾನ್‌ನ ಹೈಮಾ ವಿಲಾಯತ್ ಪ್ರದೇಶದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಒಬ್ಬ ಭಾರತೀಯ ಮಹಿಳೆ ಮೃತಪಟ್ಟು, ಮಕ್ಕಳು ಸೇರಿದಂತೆ ಒಂಬತ್ತು ಭಾರತೀಯರು ಗಾಯಗೊಂಡಿದ್ದಾರೆ.

- Advertisement -

ಸುಲ್ತಾನ್ ಸಯೀದ್ ಬಿನ್ ತೈಮೂರ್ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಯುಎಇಯಿಂದ ಪ್ರಯಾಣಿಸುತ್ತಿದ್ದ ಕೇರಳದ ಕುಟುಂಬಗಳು ಪ್ರಯಾಣಿಸುತ್ತಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗುರುಳಿ ಪಲ್ಟಿಯಾಗಿದೆ. ಮೃತರನ್ನು ಕೇರಳದ ಕೊಲ್ಲಂ ಜಿಲ್ಲೆಯ ಕುಂದರ ಮೂಲದ ಸುಲೇಹಾ ಶಹೀನ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನೂ ಓದಿ: ಸೌದಿ ಅರೇಬಿಯಾ | ಭೀಕರ ರಸ್ತೆ ಅಪಘಾತ; ಒಂಬತ್ತು ಮಂದಿ ಭಾರತೀಯರ ಸಾವು

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಯಲ್ ಒಮಾನ್ ಪೊಲೀಸ್ (ROP) ಮತ್ತು ತುರ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ರಾಯಲ್ ಒಮಾನ್ ಪೊಲೀಸ್ ಏವಿಯೇಷನ್ ಹೆಲಿಕಾಪ್ಟರ್ ಮೂಲಕ ತಕ್ಷಣವೇ ನಿಜಾವಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಅದೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೆ ನಿಖರ ಕಾರಣ ಏನೆಂಬುದರ ಕುರಿತು ರಾಯಲ್ ಒಮಾನ್ ಪೊಲೀಸ್ ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...