ಮೆಕ್ಕಾ | ಕಾಬಾದ ಮಸೀದಿಯಲ್ಲಿ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ: ಜೀವದ ಹಂಗು ತೊರೆದು ರಕ್ಷಿಸಿದ ಭದ್ರತಾ ಸಿಬ್ಬಂದಿ

Date:

ಮುಸ್ಲಿಮರ ಪವಿತ್ರಾ ಮಸೀದಿಯಾಗಿರುವ ಮೆಕ್ಕಾದ ಮಸ್ಜಿದುಲ್ ಹರಂ(ಗ್ರ್ಯಾಂಡ್ ಮಸೀದಿ) ಮಸೀದಿಯಲ್ಲಿ ಯುವಕನೋರ್ವ ಮಹಡಿ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಇದೇ ವೇಳೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ತನ್ನ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಡಿ.25ರಂದು ವರದಿಯಾಗಿದೆ.

- Advertisement -

ಘಟನೆಯ ವೀಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಗಾಯಗೊಂಡಿರುವ ಭದ್ರತಾ ಸಿಬ್ಬಂದಿ ಹಾಗೂ ಆತ್ಮಹತ್ಯೆಗೆ ಯತ್ನಿಸಿದ ಯುವಕ ಇಬ್ಬರನ್ನೂ ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸೌದಿಯ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು ವ್ಯಕ್ತಿಯೋರ್ವ ಮಸೀದಿ ಕಟ್ಟಡದೆ ಮೇಲಿನ ಮಹಡಿಯಿಂದ ಜಿಗಿಯಲು ಮುಂದಾಗಿದ್ದಾನೆ. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ರಯಾನ್ ಬಿನ್ ಸಯೀದ್ ಅಲ್-ಅಸಿರಿ, ಯುವಕ ನೆಲಕ್ಕೆ ಬೀಳುವುದನ್ನು ತಪ್ಪಿಸಲು ಮುಂದಾಗಿದ್ದಾರೆ. ಈ ವೇಳೆ ಮೇಲಿನಿಂದ ಜಿಗಿದಿದ್ದ ವ್ಯಕ್ತಿ ಭದ್ರತಾ ಸಿಬ್ಬಂದಿಯ ಮೇಲೆಯೇ ಬಿದ್ದ ಪರಿಣಾಮ ಇಬ್ಬರೂ ಗಾಯಗೊಂಡಿದ್ದಾರೆ. ಕೂಡಲೇ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಭದ್ರತಾ ಅಧಿಕಾರಿ ರಯಾನ್ ಬಿನ್ ಸಯೀದ್ ಅಲ್-ಅಸಿರಿ ಗಾಯಗೊಂಡಿದ್ದು, ಮೂಳೆಗಳು ಮುರಿದಿರುವುದಾಗಿ ತಿಳಿದುಬಂದಿದೆ. ಸದ್ಯ ಇಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಕುರಿತು ಸೌದಿ ಅರೇಬಿಯಾದ ವಿಶೇಷ ಭದ್ರತಾ ಪಡೆ ತನಿಖೆ ಆರಂಭಿಸಿದ್ದು, ವ್ಯಕ್ತಿಯ ಗುರುತು ಮತ್ತು ಆತ್ಮಹತ್ಯೆ ಯತ್ನಕ್ಕೆ ಕಾರಣವೇನೆಂದು ಪತಿ ಹಚ್ಚಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಗ್ರ್ಯಾಂಡ್ ಮಸೀದಿಯ ಮುಖ್ಯ ಇಮಾಮ್ ಶೇಖ್ ಅಬ್ದುರ್ ರಹಮಾನ್ ಅಲ್-ಸುದೈಸಿ ಈ ಘಟನೆಯನ್ನು ಖಂಡಿಸಿದ್ದು, ಆತ್ಮಹತ್ಯೆ ಇಸ್ಲಾಂನಲ್ಲಿ ಕಟ್ಟುನಿಟ್ಟಾಗಿ ನಿಷಿದ್ಧವಾಗಿದೆ. ಮೆಕ್ಕಾವು ಮುಸ್ಲಿಮರ ಪವಿತ್ರ ಸ್ಥಳ. ಈ ಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಬೇಕು. ಯಾರೂ ಕೂಡ ಇಂತಹ ಯತ್ನಗಳನ್ನು ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ: ಕೇರಳ ಸಿಎಂಗೆ ಡಿ ಕೆ ಶಿವಕುಮಾರ್ ತಿರುಗೇಟು

ಮೆಕ್ಕಾದ ಮಸ್ಜಿದುಲ್ ಹರಂ ಮಸೀದಿಯಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿತ್ತಾದರೂ, ಇತ್ತೀಚಿನ ವರ್ಷಗಳಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಮಸೀದಿಯಲ್ಲಿ ಭದ್ರತಾ ಸಿಬ್ಬಂದಿಗಳ ಸಂಖ್ಯೆಯನ್ನೂ ಕೂಡ ಹೆಚ್ಚಿಸಿರುವುದಾಗಿ ಸೌದಿಯ ಮಾಧ್ಯಮಗಳು ವರದಿ ಮಾಡಿದೆ.

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್; ಭೇಟಿಯ ನಿರೀಕ್ಷೆ ಏನು?

ಚೀನಾದ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ 11 ವರ್ಷಗಳ ಬಳಿಕ ಅಮೆರಿಕಕ್ಕೆ ಅಧಿಕೃತ...