ಆಂಧ್ರದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಓಂಗೋಲ್ ತಳಿಯ ಹಸು ವಿಶ್ವ ದಾಖಲೆಯೊಂದಿಗೆ 41 ಕೋಟಿ ರೂಪಾಯಿಗೆ ಮಾರಾಟ

Date:

ಓಂಗೋಲ್ ತಳಿಯ ಹಸು 4.82 ದಶಲಕ್ಷ ಡಾಲರ್ (ಸುಮಾರು 41 ಕೋಟಿ ರೂಪಾಯಿ) ಬೆಲೆಗೆ ಬ್ರೆಜಿಲ್‌ನಲ್ಲಿ ಹರಾಜಾಗಿದ್ದು, ವಿಶ್ವದ ಅತ್ಯಂತ ದುಬಾರಿ ಹಸು ಎಂಬ ದಾಖಲೆ ಸೃಷ್ಟಿಸಿದೆ. ಈ ತಳಿಯನ್ನು ಬ್ರೆಜಿಲ್‌ನಲ್ಲಿ ವಯಾಟಿನ-19 ತಳಿ ಎಂದು ಕರೆಯಲಾಗುತ್ತದೆ.

- Advertisement -

ಕುತೂಹಲ ವಿಷಯವೆಂದರೆ ನಮ್ಮ ದೇಶದ ಆಂಧ್ರಪ್ರದೇಶದಲ್ಲಿ ಓಂಗೋಲ್ ತಳಿಯ ಹಸುಗಳು ಇತ್ತೀಚಿನ ವರ್ಷಗಳಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಸುಮಾರು 41 ಕೋಟಿ ರೂಪಾಯಿಗೆ ಮಾರಾಟವಾಗುವ ಮೂಲಕ ಜಪಾನ್‌ನ ಪ್ರಖ್ಯಾತ ವಗ್ಯೂ ಮತ್ತು ಭಾರತದ ಬ್ರಹ್ಮನ್ ತಳಿಗಳ ದಾಖಲೆಯನ್ನು ಮುರಿದಿದೆ. ಸೂಕ್ತ ಕಾಳಜಿ ಮತ್ತು ವೈಜ್ಞಾನಿಕ ಸಂತಾನೋತ್ಪತ್ತಿ ವಿಧಾನದ ಮೂಲಕ ಅಭಿವೃದ್ಧಿಪಡಿಸಿದರೆ ಈ ತಳಿ ಎಷ್ಟು ಮೌಲ್ಯ ಎನ್ನುವುದನ್ನು ಇದು ಸಾಬೀತುಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಟ್ರೋ ದರ ಏರಿಕೆ- ‘ಸತ್ತಂತೆಯೂ ಅತ್ತಂತೆಯೂ’ ಆಡುತ್ತಿರುವ ಈ ನಾಟಕ ನಿಲ್ಲಲಿ

ಈ ತಳಿಯ ಹಸುಗಳನ್ನು ನಿಯತವಾಗಿ ಹರಾಜು ಮಾಡಲಾಗುತ್ತಿದ್ದು, 2023ರಲ್ಲಿ ಬ್ರೆಜಿಲ್‌ನ ಅರಂಡು ಎಂಬಲ್ಲಿ ಕಳೆದ ವರ್ಷ ವಯಾಟಿನ-19 ತಳಿಯ ಹಸು 4.3 ದಶಲಕ್ಷ ಡಾಲರ್ ಗೆ ಹರಾಜಾಗಿತ್ತು. ಕಳೆದ ವರ್ಷ 4.8 ದಶಲಕ್ಷ ಡಾಲರ್‌ಗೆ ಹರಾಜಾಗಿತ್ತು.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮೂಲದ ಓಂಗೋಲ್ ತಳಿ ವಿಶಿಷ್ಟ ವಂಶವಾಹಿ ಗುಣಲಕ್ಷಣಗಳಿಗೆ ಹೆಸರುವಾಸಿ. ಇದರ ವಿಶೇಷ ದೈಹಿಕ ಸಾಮರ್ಥ್ಯ, ಉಷ್ಣ ಸಹಿಷ್ಣುತೆ, ಉತ್ಕೃಷ್ಟ ಸ್ನಾಯು ಸಂರಚನೆಗೆ ವಿಶೇಷ ಮಹತ್ವವಿದೆ.

ಈ ಗುಣಗಳು ಹೈನುಗಾರಿಕೆಗೆ ಅತ್ಯುತ್ತಮ ಅಪೇಕ್ಷಿತ ತಳಿಯಾಗಿ ಪರಿಗಣಿಸಲಾಗುತ್ತದೆ. ಭಾರತದಲ್ಲಿ ಈ ತಳಿಯ ಬಗ್ಗೆ ಹೆಚ್ಚಿನ ಗಮನ ಕೊಡದೇ ಇದರ ಸಂರಕ್ಷಣೆಯನ್ನು ನಿರ್ಲಕ್ಷಿಸಲಾಗುತ್ತಿದ್ದು, ಬ್ರೆಜಿಲ್‌ನಂಥ ದೇಶಗಳು ಇದರ ಸಂಪೂರ್ಣ ಸಾಮರ್ಥ್ಯದ ಪ್ರಯೋಜನ ಪಡೆದುಕೊಂಡು ಅನುವಂಶಿಕ ಸಂಪನ್ಮೂಲಗಳ ಮೂಲಕ ಅಪಾರ ಸಂಪತ್ತು ಸೃಷ್ಟಿಸುತ್ತಿವೆ.

ವಯಾಟಿನಾ-19 ತಳಿ ವಿಶ್ವ ಕೌ ಚಾಂಪಿಯನ್‌ಶಿಪ್ ನಲ್ಲಿ ‘ಮಿಸ್ ಸೌತ್ ಅಮೆರಿಕ’ ಎಂಬ ಖ್ಯಾತಿಗೂ ಪಾತ್ರವಾಗಿದೆ. ಇದೀಗ ವಿಶ್ವದಲ್ಲೇ ಅತಿಹೆಚ್ಚು ಬೆಲೆಗೆ ಮಾರಾಟವಾದ ಹಸು ಎಂಬ ದಾಖಲೆ ಸೃಷ್ಟಿಸಿದೆ. 2023ರಲ್ಲಿ ಇದು ಗಿನಿಸ್ ದಾಖಲೆಗೆ ಸೇರ್ಪಡೆಯಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...