ಓಪನ್‌ಎಐ ಬಗ್ಗೆ ಗಂಭೀರ ಆರೋಪ ಮಾಡಿದ್ದ ಸಂಶೋಧಕ ಸುಚಿರ್ ಬಾಲಾಜಿ ಶವವಾಗಿ ಪತ್ತೆ

Date:

ಓಪನ್‌ಎಐ ಬಗ್ಗೆ ಗಂಭೀರ ಆರೋಪ ಮಾಡಿದ್ದ ಭಾರತೀಯ ಮೂಲದ ಸಂಶೋಧಕ ಸುಚಿರ್ ಬಾಲಾಜಿ ಶವವಾಗಿ ಪತ್ತೆಯಾಗಿದ್ದಾರೆ. 26 ವರ್ಷದ ಸುಚಿರ್ ಯುಎಸ್‌ನ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನವೆಂಬರ್ 26ರಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ಸರಿಸುಮಾರು ಮಧ್ಯಾಹ್ನ 1 ಗಂಟೆಗೆ ಸುಚಿರ್ ಅಪಾರ್ಟ್‌ಮೆಂಟ್ ಪರಿಶೀಲಿಸುವಂತೆ ಕರೆಯೊಂದು ಬಂದಿದೆ. ಅದೇ ದಿನ ಬಾಲಾಜಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ಇತರೆ ಯಾವುದೇ ಅನುಮಾನಾಸ್ಪದ ಪುರಾವೆಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಬೆಂಗಳೂರು | ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗ ಪತ್ತೆಗೆ ಕೃತಕ ಬುದ್ಧಿಮತ್ತೆ ಬಳಕೆ

ಜನಪ್ರಿಯ ಕೃತಕ ಬುದ್ಧಿಮತ್ತೆ ಸಂಸ್ಥೆಯಾದ ಓಪನ್‌ಎಐ (OpenAI) ಬಗ್ಗೆ ಸುಚಿರ್ ಗಂಭೀರ ಆರೋಪಗಳನ್ನು ಮಾಡಿದ ಕೆಲವೇ ತಿಂಗಳುಗಳ ನಂತರ ಈ ದುರಂತ ಸಂಭವಿಸಿದೆ.

ಓಪನ್‌ಎಐ ಸಂಸ್ಥೆಯ ಮಾಜಿ ಸಂಶೋಧಕರಾಗಿದ್ದ ಬಾಲಾಜಿ ಅವರು ಈ ಹಿಂದೆ ನ್ಯೂಯಾರ್ಕ್ ಟೈಮ್ಸ್‌ಗೆ ಲೇಖನವೊಂದನ್ನು ಬರೆದಿದ್ದರು. “ಚಾಟ್‌ಜಿಪಿಟಿಗೆ ತರಬೇತಿ ನೀಡಲು ಓಪನ್‌ಎಐ ಹಕ್ಕುಸ್ವಾಮ್ಯದ ವಸ್ತುಗಳನ್ನು ಬಳಸುತ್ತಿದೆ” ಎಂದು ತಾನಿದ್ದ ಸಂಸ್ಥೆಯ ವಿರುದ್ಧವೇ ಆರೋಪಿಸಿದ್ದರು.

ಓಪನ್‌ಎಐ ಸಂಸ್ಥೆ ಅಮೆರಿಕದ ಹಕ್ಕುಸ್ವಾಮ್ಯ ನಿಯಮಗಳನ್ನು ಉಲ್ಲಂಘಿಸುತ್ತದೆ. ಚಾಟ್‌ಜಿಪಿಟಿಯಂತಹ ತಂತ್ರಜ್ಞಾನಗಳು ಇಂಟರ್‌ನೆಟ್ ಅನ್ನು ಹಾನಿಗೊಳಿಸುತ್ತಿವೆ ಎಂದು ದೂರಿದ್ದರು. ಹಾಗೆಯೇ ಇದಾದ ಕೆಲವು ದಿನಗಳ ನಂತರ ತಾನಾಗಿಯೇ ನ್ಯೂಯಾರ್ಕ್ ಟೈಮ್ಸ್ ಅನ್ನು ಸಂಪರ್ಕಿಸಿ ಈ ಲೇಖನ ನೀಡಿರುವುದಾಗಿ ತಿಳಿಸಿದ್ದರು.

ಇನ್ನು ಈ ಹಿಂದೆ ಓಪನ್‌ಎಐ ಬಗ್ಗೆ ಕೆಲವು ಆರೋಪಗಳನ್ನು ಮಾಡಿದ್ದ ಉದ್ಯಮಿ ಎಲಾನ್ ಮಸ್ಕ್, ಬಾಲಾಜಿ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬರೀ ‘ಹ್ಮ್‌’ ಎಂದು ಪೋಸ್ಟ್ ಮಾಡುವ ಮೂಲಕ ಮಸ್ಕ್ ಅನುಮಾನ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...