ಆಕ್ರಮಣಕಾರರಿಗೆ ನಮ್ಮ ಮಣ್ಣೇ ಮಸಣ: ಅಮೆರಿಕಕ್ಕೆ ಇರಾನ್ ಎಚ್ಚರಿಕೆ

Date:

ಇರಾನ್ ಅನ್ನು ‘ಶಿಲಾಯುಗ’ಕ್ಕೆ ತಳ್ಳುವುದಾಗಿ ಅಮೆರಿಕದ ಅಧಿಕಾರಿಗಳು ನೀಡಿದ್ದ ಬೆದರಿಕೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಇರಾನ್ ಸೇನಾ ಕಮಾಂಡರ್ ಅಲಿ ಜಹಾನ್‌ಶಾಹಿ ಅವರು ಅಮೆರಿಕಕ್ಕೆ ಕಟು ಎಚ್ಚರಿಕೆ ನೀಡಿದ್ದು, “ಅಮೆರಿಕದ ಪಡೆಗಳನ್ನು ಶಿಲಾಯುಗಕ್ಕಲ್ಲ, ಅದಕ್ಕೂ ಹಿಂದಿನ ಕಾಲಕ್ಕೆ ಕಳುಹಿಸಲಾಗುವುದು. ಇರಾನ್ ಮಣ್ಣು ಆಕ್ರಮಣಕಾರರ ಪಾಲಿಗೆ ಸ್ಮಶಾನವಾಗಿದೆ” ಎಂದು ಗುಡುಗಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

ಯಾವುದೇ ರೀತಿಯ ಸಂಘರ್ಷವನ್ನು ಎದುರಿಸಲು ಇರಾನ್‌ನ ವಿಶೇಷ ಪಡೆಗಳು ಸಂಪೂರ್ಣ ಸಿದ್ಧತೆಯಲ್ಲಿವೆ ಎಂದು ಅವರು ತಿಳಿಸಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

ಇಸ್ರೇಲ್‌ನ ಜಾಫಾ ಮೇಲೆ ಹೌತಿಗಳಿಂದ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಸುರಿಮಳೆ
ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳುವ ಸುಳಿವು ನೀಡಿರುವ ಯೆಮೆನ್‌ನ ಇರಾನ್ ಬೆಂಬಲಿತ ‘ಹೌತಿ’ ಬಂಡುಕೋರರು, ಶುಕ್ರವಾರ ಇಸ್ರೇಲ್‌ನ ಜಾಫಾ ಪ್ರದೇಶವನ್ನು ಗುರಿಯಾಗಿಸಿಕೊಂಡು ಜಂಟಿ ಸೇನಾ ಕಾರ್ಯಾಚರಣೆ ನಡೆಸಿರುವುದಾಗಿ ಪ್ರಕಟಿಸಿದ್ದಾರೆ.

ಇದನ್ನು ಓದಿದ್ದೀರಾ? ಅಧಿಕಾರಕ್ಕಾಗಿ ಹಲವು ಅವತಾರಗಳು: ವೋಟಿಗಾಗಿ ನಾಯಕರು ಹಾಕುವ ‘ಹಗಲುವೇಷ’ಗಳೆಷ್ಟು?

ಇಸ್ರೇಲ್‌ನ ಪ್ರಮುಖ ನೆಲೆಗಳ ಮೇಲೆ ಸರಣಿ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾವಣೆ ಮಾಡಲಾಗಿದೆ ಎಂದು ಹೌತಿ ಸೇನಾ ವಕ್ತಾರ ಯಹ್ಯಾ ಸಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇರಾನ್ ಬೆಂಬಲಿತ ಗುಂಪುಗಳು ಮತ್ತು ಹಿಜ್ಬುಲ್ಲಾ ಸೇರಿದಂತೆ ಈ ವಲಯದ ಮಿತ್ರಪಡೆಗಳೊಂದಿಗೆ ಸಮನ್ವಯ ಸಾಧಿಸಿ ಈ ದಾಳಿ ನಡೆಸಲಾಗಿದ್ದು, ನಿಗದಿತ ಗುರಿ ತಲುಪುವಲ್ಲಿ ಯಶಸ್ವಿಯಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಮುಂಬರುವ ಬೆಳವಣಿಗೆಗಳ ಆಧಾರದ ಮೇಲೆ ಸಂಘರ್ಷದಲ್ಲಿ ತಮ್ಮ ಪಾಲ್ಗೊಳ್ಳುವಿಕೆ ಮತ್ತಷ್ಟು ತೀವ್ರಗೊಳ್ಳಲಿದೆ ಎಂಬ ಮುನ್ಸೂಚನೆಯನ್ನು ಹೌತಿಗಳು ನೀಡಿದ್ದಾರೆ.

ದಾಳಿಯ ಅವಶೇಷಗಳು ಬಿದ್ದು ಅಬುಧಾಬಿಯ ಹಬ್ಶಾನ್ ಅನಿಲ ಘಟಕ ಸ್ಥಗಿತ
ತಡೆಹಿಡಿಯಲಾದ ದಾಳಿಯೊಂದರ ಅವಶೇಷಗಳು ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಅಬುಧಾಬಿಯ ಅನಿಲ ಸಂಸ್ಕರಣಾ ಘಟಕದ ಕಾರ್ಯಾಚರಣೆಯನ್ನು ಶುಕ್ರವಾರ ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರದ ಮಾಧ್ಯಮ ಕಚೇರಿ ತಿಳಿಸಿದೆ.

ವಾಯು ರಕ್ಷಣಾ ವ್ಯವಸ್ಥೆಗಳು ದಾಳಿಯನ್ನು ಯಶಸ್ವಿಯಾಗಿ ವಿಫಲಗೊಳಿಸಿದ ನಂತರ, ಹಬ್ಶಾನ್ ಅನಿಲ ಘಟಕದಲ್ಲಿ ಎದುರಾದ ಪರಿಸ್ಥಿತಿಯನ್ನು ಅಧಿಕಾರಿಗಳು ನಿಭಾಯಿಸುತ್ತಿದ್ದಾರೆ. ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಘಟಕದ ಕಾರ್ಯನಿರ್ವಹಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಮಾಧ್ಯಮ ಕಚೇರಿ ‘ಎಕ್ಸ್’ ಖಾತೆಯಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು ಮಕ್ಕಳ ಜೀವಕ್ಕೆ ಬೆಲೆ ಇಲ್ಲವೇ?

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ...

ಈ ದಿನ ಸಂಪಾದಕೀಯ | ಸಂಸದೀಯ ಸಮಿತಿ ಸಭೆಯಿಂದ ಸುಪ್ರೀಂ ಕೋರ್ಟ್‌ ಹಿಂದೆ ಸರಿದದ್ದು ಸ್ವಾಗತಾರ್ಹ!

ಸಂವಿಧಾನದ 143ನೇ ವಿಧಿಯಡಿ ಸಂಸದೀಯ ಸಮಿತಿಯು ಮಹತ್ವದ ಕಾನೂನು ರೂಪಿಸುವಾಗ, ಸುಪ್ರೀಂ...

ರಾಜೌರಿಯಲ್ಲಿ ಎಲ್‌ಒಸಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಅಪ್ರಾಪ್ತೆ ಬಂಧನ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಗಡಿ ನಿಯಂತ್ರಣ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...