ಭಾರೀ ಉದ್ಯೋಗ ಕಡಿತಕ್ಕೆ ಆಕ್ರೋಶ; ‘ವಾಷಿಂಗ್ಟನ್ ಪೋಸ್ಟ್‌’ ಸಿಇಒ ವಿಲ್‌ ಲೂಯಿಸ್‌ ರಾಜೀನಾಮೆ

Date:

ಪ್ರತಿಷ್ಠಿತ ಸುದ್ದಿ ಸಂಸ್ಥೆಗಳಲ್ಲಿ ಒಂದಾದ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಇತ್ತೀಚಿಗೆ 500ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಈ ತ್ವರಿತ ಮತ್ತು ವ್ಯಾಪಕ ವಜಾಗೊಳಿಸುವಿಕೆಯನ್ನು ಖಂಡಿಸಿರುವ ‘ವಾಷಿಂಗ್ಟನ್‌ ಪೋಸ್ಟ್‌’ನ ಪ್ರಕಾಶಕ, ಸಿಇಒ ವಿಲ್‌ ಲೂಯಿಸ್‌ ರಾಜೀನಾಮೆ ನೀಡಿದ್ದಾರೆ.

- Advertisement -

“ಕಳೆದ ಎರಡು ವರ್ಷಗಳಲ್ಲಿ ವಾಷಿಂಗ್ಟನ್ ಪೋಸ್ಟ್‌ನಲ್ಲಿ ಹಲವಾರು ಬದಲಾವಣೆಗಳು ನಡೆದಿವೆ. ಈಗ, ಬೃಹತ್ ಸಂಖ್ಯೆಯ ಉದ್ಯೋಗ ಕಡಿತವೂ ನಡೆದಿದೆ. ಸಂಸ್ಥೆಯಿಂದ ನಾನು ದೂರ ಸರಿಯಲು ಇದು ಸರಿಯಾದ ಸಮಯ” ಎಂದು ಅವರು ಹೇಳಿಕೊಂಡಿದ್ದಾರೆ. 2023ರಲ್ಲಿ, ಲೂಯಿಸ್ ಅವರನ್ನು ಸಂಸ್ಥೆಯ ಹೊಸ ಪ್ರಕಾಶಕ ಮತ್ತು ಸಿಇಒ ಆಗಿ ನೇಮಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

2013ರಲ್ಲಿ ಪತ್ರಿಕೆಯನ್ನು ಬಿಲಿಯನೇರ್, Amazon.com ಇಂಕ್‌ನ ಸಹ-ಸಂಸ್ಥಾಪಕ ಜೆಫ್‌ ಬೆಜೋಸ್‌ ಅವರು ಖರೀದಿಸಿದರು. ಬಳಿಕ, ನಾನಾ ರೀತಿಯಲ್ಲಿ ನಾಯಕತ್ವ ಬದಲಾವಣೆಗಳು ನಡೆದಿವೆ. ಸಂಸ್ಥೆಯು ಬುಧವಾರ, ತನ್ನ ಸಿಬ್ಬಂದಿಗಳ ಪೈಕಿ ಮೂರನೇ ಒಂದು ಭಾಗ (500) ಉದ್ಯೋಗಿಗಳನ್ನು ವಜಾಗೊಳಿಸಿದೆ. ಅವರಲ್ಲಿ, ವಿದೇಶಿ ವರದಿಗಾರರು ಮತ್ತು ಅಮೆರಿಕ ಮೂಲದ ಪತ್ರಕರ್ತರು ಸೇರಿದ್ದಾರೆ.

ಸಂಸ್ಥೆಯು 2023ರಲ್ಲಿಯೂ ಸುಮಾರು 240 ಉದ್ಯೋಗಗಳನ್ನು ಕಡಿತಗೊಳಿಸಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...