ಮೆಕ್ಕಾದಲ್ಲಿ ಮೃತಪಟ್ಟ 1300 ಹಜ್ ಯಾತ್ರಿಗಳಲ್ಲಿ ಶೇ.83 ಮಂದಿಗೆ ಅಧಿಕೃತ ಅನುಮತಿಯಿರಲಿಲ್ಲ

Date:

ಕಳೆದ ಒಂದು ವರ್ಷದಲ್ಲಿ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಶಾಖಾಘಾತದಿಂದ ಮೃತಪಟ್ಟ 1300 ಹಜ್‌ ಯಾತ್ರಿಗಳಲ್ಲಿ ಶೇ.83 ಮಂದಿ ಅಧಿಕೃತ ಅನುಮತಿ ಹೊಂದಿರಲಿಲ್ಲ ಎಂದು ಸೌದಿ ಅರೇಬಿಯಾ ಸರ್ಕಾರ ತಿಳಿಸಿದೆ.

- Advertisement -

“ವಿಷಾದ ವ್ಯಕ್ತಪಡಿಸುತ್ತ, ಸೂಕ್ತ ಆಶ್ರಯ, ಸೌಲಭ್ಯವಿಲ್ಲದೆ ಬಿಸಿಲಿನ ಶಾಖದ ಪ್ರದೇಶದಲ್ಲಿ ಸಾಗಿಬಂದಿರುವ ಕಾರಣ 1301 ಹಜ್‌ ಯಾತ್ರಿಕರು ಮೃತಪಟ್ಟಿದ್ದಾರೆ. ಇವರಲ್ಲಿ ಶೇ.83 ಮಂದಿ ಅಧಿಕೃತ ಅನುಮತಿಯನ್ನು ಹೊಂದಿರಲಿಲ್ಲ” ಎಂದು ಸೌದಿ ಆಡಳಿತದ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೃತಪಟ್ಟವರಲ್ಲಿ ಇಂಡೋನೇಷ್ಯಾ ಹಾಗೂ ಅಮೆರಿಕದ ಯಾತ್ರಿಕರು ಸೇರಿದಂತೆ 10ಕ್ಕೂ ಹೆಚ್ಚು ದೇಶದ ಹಜ್‌ ಯಾತ್ರಿಕರಿದ್ದರು. ಕೆಲವೊಂದು ದೇಶಗಳು ತಮ್ಮ ದೇಶದ ಮೃತಪಟ್ಟ ಒಟ್ಟಾರೆ ಯಾತ್ರಿಕರನ್ನು ಕಲೆಹಾಕುತ್ತಿವೆ.

ಈಜಿಫ್ಟ್‌ನ 658 ಮಂದಿ ಯಾತ್ರಿಕರು ಮೃತಪಟ್ಟಿದ್ದು,ಇವರಲ್ಲಿ 630 ಮಂದಿ ಅಧಿಕೃತ ನೋಂದಣಿ ಪಡೆದಿರಲಿಲ್ಲ ಎಂದು ಅರಬ್‌ ರಾಯಭಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಇವರಲ್ಲಿ ಬಹುತೇಕರು ಶಾಖಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತಿಗಳ ಸ್ವಾಭಿಮಾನ, ಸ್ವಾಯತ್ತತೆ ಮತ್ತು ಸಂಸ್ಕೃತಿ ಸಚಿವರ ತಿಪ್ಪೆ ಸಾರಿಸುವಿಕೆ

ಸೌದಿ ಅರೇಬಿಯಾದ ರಾಷ್ಟ್ರೀಯ ಹವಾಮಾನ ಕೇಂದ್ರದ ಪ್ರಕಾರ ಮೆಕ್ಕಾದಲ್ಲಿ ಈ ವರ್ಷ 51.8 ಡಿಗ್ರಿವರೆಗೂ ತಾಪಮಾನ ಏರಿಕೆಯಾಗಿತ್ತು. ಮೃತರಲ್ಲಿ 577 ಮಂದಿ ಜೂನ್‌ 15 ಮತ್ತು 16 ರಂದು ಸಾಂಪ್ರಾದಾಯಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಯಾತ್ರಿಕರಾಗಿದ್ದಾರೆ.

ಹಜ್‌ ಯಾತ್ರೆಗೆ ಅಧಿಕೃತ ಅನುಮತಿ ಪಡೆಯದವರಿಗೆ 1,41,000 ಸೇವೆಗಳನ್ನು ಒಳಗೊಂಡು 4,65,000ಕ್ಕೂ ಹೆಚ್ಚು ವಿಶೇಷ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಾಗಿದೆ. ಅಧಿಕೃತ ಅನುಮತಿಯಿಲ್ಲದೆ ಯಾತ್ರೆಗೆ ಆಗಮಿಸಿದ ಯಾತ್ರಿಕರಲ್ಲಿ ಬಹುತೇಕರು ಹವಾ ನಿಯಂತ್ರಿತ ಟೆಂಟ್‌ಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿರಲಿಲ್ಲ ಎಂದು ಸೌದಿ ಆಡಳಿತ ತಿಳಿಸಿದೆ.

ಸೌದಿ ಅಧಿಕಾರಿಗಳ ಪ್ರಕಾರ ಈ ವರ್ಷ ಹಜ್‌ ಯಾತ್ರೆಗೆ ವಿದೇಶದಿಂದ 18 ಲಕ್ಷ ಮಂದಿ ಭೇಟಿ ನೀಡಿದ್ದರೆ, ಕಳೆದ ವರ್ಷ 16 ಲಕ್ಷ ಮಂದಿ ಭೇಟಿ ನೀಡಿದ್ದರು.

ಹಜ್​ ಯಾತ್ರೆಗೆ ತೆರಳಿದ ಭಾರತೀಯರಲ್ಲಿ 98 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಸಾವನ್ನಪ್ಪಿದವರ ಸಂಖ್ಯೆ 187 ಆಗಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣದೀರ್​​ ಜೈಸ್ವಾಲ್​ ತಿಳಿಸಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...