ನಲುಗಿದ ಇರಾನ್‌ | 30 ಗಂಟೆಗಳಲ್ಲಿ 2,000ಕ್ಕೂ ಹೆಚ್ಚು ಬಾಂಬ್‌ ದಾಳಿ

Date:

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಮೇಲೆ ದಾಳಿ ನಡೆಸುತ್ತಲ್ಲಿದ್ದು, ಇರಾನ್ ಕೂಡಾ ಪ್ರತಿದಾಳಿ ಮುಂದುವರೆಸಿದೆ. ಶನಿವಾರ ಬೆಳಿಗ್ಗೆಯಿಂದ 30 ಗಂಟೆಗಳ ಅವಧಿಯಲ್ಲಿ ಇರಾನ್ ಮೇಲೆ ಇಸ್ರೇಲ್ 2,000ಕ್ಕೂ ಅಧಿಕ ಬಾಂಬ್‌ ದಾಳಿಗಳನ್ನು ನಡೆಸಿದೆ ಎಂದು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಭಾನುವಾರ ರಾತ್ರಿ ಹೇಳಿದೆ.

- Advertisement -

ಇರಾನ್ ಮೇಲೆ 2025ರ ಜೂನ್‌ನಲ್ಲಿ ಇಸ್ರೇಲ್ ಆರು ದಿನಗಳ ಕಾಲ ಎಷ್ಟು ಬಾಂಬ್ ದಾಳಿ ನಡೆಸಿದೆಯೋ, ಅಷ್ಟು ಬಾಂಬ್ ದಾಳಿಯನ್ನು ಈ ಬಾರಿ ಒಂದು ದಿನದಲ್ಲೇ ನಡೆಸಿದೆ. ಆದ್ದರಿಂದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2025ರ ಜೂನ್‌ಗಿಂತ ಅತಿ ಶೀಘ್ರವೇ ಕಾರ್ಯಾಚರಣೆಯನ್ನು ನಿಲ್ಲಿಸಬಹುದು ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಇರಾನ್ ಮೇಲೆ ಇಸ್ರೇಲ್-ಅಮೆರಿಕ ಜಂಟಿ ದಾಳಿ: ಒಂದೇ ದಿನ 1,200 ಬಾಂಬ್ ಸುರಿಮಳೆ

ಸಾಮಾನ್ಯ ಕಾರ್ಖಾನೆಗಳು ಮಾತ್ರವಲ್ಲದೆ ಇರಾನ್‌ನ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸುವ ಕೇಂದ್ರಗಳ ಮೇಲೆಯೂ ದಾಳಿ ನಡೆದಿದೆ. ಇರಾನಿನ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದ ತನ್ನ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಐದು ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಇರಾನ್‌ನಲ್ಲಿ ಕನಿಷ್ಠ 201 ಜನರು ಸಾವನ್ನಪ್ಪಿದ್ದಾರೆ.

2025ರ ಜೂನ್‌ನಲ್ಲಿ ನಡೆಸಿದ ದಾಳಿಯಿಂದಾಗಿ ಇರಾನ್‌ನಲ್ಲಿದ್ದ 3,000 ಕ್ಷಿಪಣಿಗಳ ಸಂಖ್ಯೆಯು 1,300ಕ್ಕೆ ಇಳಿದಿತ್ತು. ಆದರೆ ಕೇವಲ ಎಂಟು ತಿಂಗಳಲ್ಲಿ, ಇರಾನ್ ಪುನರ್ ನಿರ್ಮಾಣ ಆರಂಭಿಸಿದ್ದು 2,500 ಕ್ಷಿಪಣಿಗಳನ್ನು ಹೊಂದಿದೆ ಎಂದು ವರದಿಯಾಗಿದೆ.

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಬೃಹತ್ ಸೇನಾ ದಾಳಿ ನಡೆಸಿವೆ. ಈ ಕಾರ್ಯಾಚರಣೆಗೆ ಅಮೆರಿಕ ‘ಆಪರೇಷನ್ ಎಪಿಕ್ ಫ್ಯೂರಿ’ ಮತ್ತು ಇಸ್ರೇಲ್ ‘ರೋರಿಂಗ್ ಲಯನ್’ ಎಂದು ಹೆಸರಿಟ್ಟಿವೆ. ಈ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾಗಿದ್ದಾರೆ. ಜತೆಗೆ ಅವರ ಕುಟುಂಬಸ್ಥರು ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಖಚಿತಪಡಿಸಿವೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್‌ನ ಟೆಲ್ ಅವಿವ್ ಮತ್ತು ಮಧ್ಯಪ್ರಾಚ್ಯ ಕತಾರ್, ಯುಎಇ, ಬಹ್ರೇನ್, ಕುವೈತ್ ಮತ್ತು ಜೋರ್ಡಾನ್‌ನಲ್ಲಿರುವ ಅಮೆರಿಕದ ಮಿಲಿಟರಿ ಬೇಸ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸುತ್ತಿದೆ. ದಾಳಿ ಪ್ರತಿದಾಳಿಗಳು ಮುಂದುವರೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...