ಪಹಲ್ಗಾಮ್ ದಾಳಿ | ಪಾಕಿಸ್ತಾನವನ್ನು ಟೀಕಿಸಿದ ವಿಶ್ವಸಂಸ್ಥೆ ಭದ್ರತಾ ಮಂಡಳಿ

Date:

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಗೌಪ್ಯ ಸಭೆಯಲ್ಲಿ ಪಾಕಿಸ್ತಾನವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ತೀವ್ರವಾಗಿ ಟೀಕಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

- Advertisement -

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸದಸ್ಯರು ಪಾಕಿಸ್ತಾನದ ರಾಜತಾಂತ್ರಿಕರೊಂದಿಗೆ ಇಸ್ಲಾಮಾಬಾದ್‌ನಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ, ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ ಭಾಗಿಯಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇತ್ತೀಚೆಗೆ ಪಾಕ್ ನಡೆಸಿರುವ ಕ್ಷಿಪಣಿ ಪರೀಕ್ಷೆಗಳ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಮಾತುಕತೆಯಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯರು ಪಹಲ್ಗಾಮ್ ದಾಳಿ ಕುರಿತು ಪಾಕಿಸ್ತಾನದ ಸುಳ್ಳು ನಿರೂಪಣೆಯನ್ನು ಪರಿಗಣಿಸಲು ನಿರಾಕರಿಸಿದರು. ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಸೂಚಿಸಿದರು ಎಂದು ವರದಿಯಾಗಿದೆ.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪಾಕಿಸ್ತಾನದ ರಾಯಭಾರಿ ಅಸಿಮ್ ಇಫ್ತಿಕರ್, “ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ತಮ್ಮ (ಪಾಕ್) ಪಾತ್ರವಿದೆ ಎಂಬ ಎಲ್ಲ ಆರೋಪಗಳನ್ನು ತಮ್ಮ ದೇಶ ತಿರಸ್ಕರಿಸಿದೆ. ಸಿಂಧೂ ಜಲ ಒಪ್ಪಂದವನ್ನು ಭಾರತ ಸ್ಥಗಿತಗೊಳಿಸಿರುವುದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ” ಎಂದಿದ್ದಾರೆ.

ಸಭೆಯ ನಂತರ, ಟುನೀಷಿಯಾದ ರಾಜತಾಂತ್ರಿಕ ಖಲೀದ್ ಮೊಹಮ್ಮದ್ ಖಿಯಾರಿ, “ಪರಿಸ್ಥಿತಿ ಅಸ್ಥಿರವಾಗಿದೆ. ಸಭೆ, ಮಾತುಕತೆ ಹಾಗೂ ಶಾಂತಿಯುತವಾಗಿ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳಲು ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

ಸಭೆಗೂ ಮುನ್ನ, ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್, “ಮಿಲಿಟರಿ ಕಾರ್ಯಾಚರಣೆ ಅಥವಾ ಕ್ರಮಗಳು ಸಮಸ್ಯೆಗೆ ಪರಿಹಾರವಲ್ಲ. ಎರಡೂ ದೇಶಗಳು ಗರಿಷ್ಠ ಸಂಯಮದಿಂದ ನಡೆದುಕೊಳ್ಳಬೇಕು. ಗಡಿಯಿಂದ ಹಿಂದೆ ಸರಿಯಬೇಕು. ಸಂಬಂಧಗಳು ಉದ್ವಗ್ನಗೊಳ್ಳುವುದನ್ನು ನೋಡಲು ನನಗೆ ನೋವಾಗುತ್ತದೆ” ಎಂದು ಹೇಳಿದ್ದರು.

ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಗುಟೆರೆಸ್, “ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದು ಸ್ವೀಕಾರಾರ್ಹವಲ್ಲ. ಜವಾಬ್ದಾರಿಯುತ ನಾಯಕರು ವಿಶ್ವಾಸಾರ್ಹ ಮತ್ತು ಕಾನೂನುಬದ್ಧ ವಿಧಾನಗಳ ಮೂಲಕ ನ್ಯಾಯ ಮತ್ತು ಪರಿಹಾರ ಕಂಡುಕೊಳ್ಳಬೇಕು” ಎಂದಿದ್ದರು.

ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿಯು ಇತ್ತೀಚಿನ ವರ್ಷಗಳ ಅತ್ಯಂತ ಭೀಕರ ಮತ್ತು ಆಘಾತಕಾರಿ ದಾಳಿಯಾಗಿದೆ. ದಾಳಿಯಲ್ಲಿ ವಿದೇಶಿಗರು, ಸ್ಥಳೀಯರು ಹಾಗೂ ಪ್ರವಾಸಿಗರು ಸೇರಿ 28 ಮಂದಿ ಸಾವನ್ನಪ್ಪಿದ್ದಾರೆ. ಈ ಹತ್ಯಾಕಾಂಡದ ಹಿಂದೆ ಪಾಕಿಸ್ತಾನದ ಕುಮ್ಮಕ್ಕು ಇದೆ ಎಂದು ಭಾರತ ಅರೋಪಿಸಿದೆ. ಪಾಕ್‌ ಜೊತೆಗಿನ ಸಿಂಧು ನದಿ ನೀರು ಒಪ್ಪಂದವನ್ನು ಭಾರತ ಸ್ಥಗಿತಗೊಳಿಸಿದೆ. ಭಾರತದಲ್ಲಿ ವಾಸಿಸುವ ಪಾಕಿಸ್ತಾನಿಗಳ ವೀಸಾಗಳನ್ನು ರದ್ದುಗೊಳಿಸಿದ್ದು, ಪಾಕಿಸ್ತಾನ್ ಪ್ರಜೆಗಳನ್ನು ವಾಪಸ್‌ ಕಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...