ಪಾಕ್ ಚುನಾವಣೆ : ನವಾಜ್ ಷರೀಫ್ ಗೆಲುವು, ಎಲ್ಇಟಿ ಮುಖ್ಯಸ್ಥ ಹಫೀಜ್ ಸಯೀದ್ ಪುತ್ರ ಸೋಲು

Date:

ಪಾಕಿಸ್ತಾನ ರಾಷ್ಟ್ರೀಯ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು,ಮುಂದಿನ ವಾರ ನೂತನ ಸರ್ಕಾರ ರಚನೆಯಾಗಲಿದೆ. ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್‌ಎನ್) ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಫ್ ಲಾಹೋರ್‌ನಿಂದ 55 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

- Advertisement -

ಸದ್ಯದ ಫಲಿತಾಂಶದ ಪ್ರಕಾರ ನಾಲ್ಕು ಸ್ಥಾನಗಳಲ್ಲಿ ಗೆದ್ದು ಹಲವು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಪಿಎಂಎಲ್‌ಎನ್‌ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲಲಿವೆ ಎಂದು ಸಮೀಕ್ಷೆಗಳು ಹೇಳಿರುವ ಹಿನ್ನೆಲೆ ನವಾಜ್‌ ಷರೀಫ್ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮುಂಬೈ ದಾಳಿಯ ರೂವಾರಿ ಎಲ್‌ಇಟಿ ಭಯೋತ್ಪಾದನೆ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಪುತ್ರ ತಲ್ಹಾ ಸಹೀದ್ ಲಾಹೋರ್‌ ಕ್ಷೇತ್ರದಿಂದ ಪರಾಭವಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಸಿಗೆ ಬೇಗ ಬಂದಿದೆ; ಜೀವಜಲಕ್ಕೆ ತತ್ವಾರ ತಂದಿದೆ

ಫೆ.08 ರಂದು ಪಾಕ್‌ ದೇಶಾದ್ಯಂತ ಚುನಾವಣೆಗಳು ನಡೆದಿದ್ದವು. 12 ಕೋಟಿಗೂ ಹೆಚ್ಚು ಮತದಾರರು ಮತಪತ್ರದ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದರು.

ರಾಷ್ಟ್ರೀಯ ಚುನಾವಣೆಯಲ್ಲಿ 12ಕ್ಕಿಂತ ಹೆಚ್ಚು ಪಕ್ಷಗಳು ಸ್ಪರ್ಧಿಸಿದ್ದರೂ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ನೇತೃತ್ವದ ಪಿಟಿಐ, ನವಾಜ್ ಷರೀಫ್ ನೇತೃತ್ವದ ಪಿಎಂಎಲ್ಎನ್‌, ಬಿಲಾವಾಲ್ ಜರ್ದಾರಿ ಬಟ್ಟೋ ಅವರ ಪಿಪಿಪಿ ಪಕ್ಷಗಳು ಪ್ರಮುಖ ಸ್ಪರ್ಧಿಗಳಾಗಿವೆ.

ಚುನಾವಣೆಯಲ್ಲಿ ಹಲವು ದುರುಪಯೋಗ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆಯಿರುವುದರಿಂದ ಇಂದು ನಡೆಯುತ್ತಿರುವ ಮತ ಎಣಿಕೆ ದಿನದಂದು ದೇಶಾದ್ಯಂತ ಇಂಟರ್‌ನೆಟ್‌ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಒಟ್ಟು 265 ರಾಷ್ಟ್ರೀಯ ಸ್ಥಾನಗಳಲ್ಲಿ ಸರ್ಕಾರ ರಚನೆಗೆ ಗೆಲ್ಲುವ ಪಕ್ಷ 133 ಸ್ಥಾನಗಳನ್ನು ಗಳಿಸಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...