48 ಗಂಟೆಗಳ ಕದನ ವಿರಾಮಕ್ಕೆ ಪಾಕಿಸ್ತಾನ, ಅಪ್ಘಾನಿಸ್ತಾನ ಅಸ್ತು

Date:

ಸುಮಾರು 48 ಗಂಟೆಗಳ ಅಂದರೆ ಎರಡು ದಿನಗಳ ಕದನ ವಿರಾಮಕ್ಕೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಅಸ್ತು ಎಂದಿದೆ. ಪಾಕಿಸ್ತಾನ ಅಫ್ಘಾನಿಸ್ತಾನದ ಮೇಲೆ ನಡೆಸಿದ ದಾಳಿಯಿಂದಾಗಿ 12 ಮಂದಿ ನಾಗರಿಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗುತ್ತಿದ್ದಂತೆ ಕದನ ವಿರಾಮ ಮಾತುಕತೆ ನಡೆದಿದೆ.

- Advertisement -

ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಈ ಕದನ ವಿರಾಮವನ್ನು ಘೋಷಿಸಿದೆ. ಇಸ್ಲಾಮಾಬಾದ್ ಸಂಕೀರ್ಣ ಆದರೆ ಪರಿಹರಿಸಬಹುದಾದ ಸಮಸ್ಯೆ ಎಂದು ಉಲ್ಲೇಖಿಸಿದೆ. ಹಾಗೆಯೇ ಸಕಾರಾತ್ಮಕ ಪರಿಹಾರವನ್ನು ಕಂಡುಕೊಳ್ಳಲು ಎರಡೂ ಕಡೆಯವರು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಗಡಿ ಘರ್ಷಣೆ: 40ಕ್ಕೂ ಅಧಿಕ ಅಘ್ಘಾನ್ ತಾಲಿಬಾನಿಗಳನ್ನು ಹತ್ಯೆಗೈದ ಪಾಕಿಸ್ತಾನ ಸೇನೆ

ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡಲು ಮತ್ತು ಹೆಚ್ಚಿನ ಜೀವಹಾನಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಯುದ್ಧ ವಿರಾಮಕ್ಕೆ ಮುಂದಾಗಿದೆ ಎಂದು ಸಚಿವಾಲಯ ಹೇಳಿದೆ.

ಪಾಕಿಸ್ತಾನ ಮತ್ತು ಅಘ್ಘಾನಿಸ್ತಾನದ ತಾಲಿಬಾನಿಗಳ ನಡುವೆ ಗಡಿ ಘರ್ಷಣೆಯಲ್ಲಿ ಈವರೆಗೆ 40ಕ್ಕೂ ಅಧಿಕ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ. ಈ ಪೈಕಿ 12 ಮಂದಿ ನಾಗರಿಕರು ಎಂದು ಅಪ್ಘಾನಿಸ್ತಾನ ಆಡಳಿತವು ಹೇಳಿಕೊಂಡಿದೆ.

ಕಳೆದ ವಾರ ಪಾಕಿಸ್ತಾನದ ಬೆಹ್ರಾಂಪುರ ಜಿಲ್ಲೆಯ ಡುರಾಂಡ್ ಲೈನ್ ಬಳಿ ದಾಳಿ ನಡೆಸಿ ಕನಿಷ್ಠ 58 ಪಾಕಿಸ್ತಾನಿ ಸೈನಿಕರನ್ನು ಕೊಲ್ಲಲಾಗಿದೆ. 30 ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರ ಝಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...