ಅಫ್ಘಾನ್‌ ಮೇಲೆ ಪಾಕ್ ದಾಳಿ; 17 ಮಂದಿ ಸಾವು

Date:

ಅಫ್ಘಾನಿಸ್ತಾನದಲ್ಲಿರುವ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ವಾಯುದಾಳಿ ನಡೆಸಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ. ದಾಳಿಯನ್ನು ಮಕ್ಕಳು ಸೇರಿ ಸುಮಾರು 17 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -

2025ರ ಅಕ್ಟೋಬರ್‌ನಲ್ಲಿ ಅಫ್ಘಾನ್ ಮತ್ತು ಪಾಕಿಸ್ತಾನ ನಡುವೆ ಗಡಿ ಘರ್ಷಣೆ ನಡೆದಿತ್ತು. ಆಗ, ಎರಡೂ ರಾಷ್ಟ್ರಗಳ ಸುಮಾರು 70 ಮಂದಿ ಸಾವನ್ನಪ್ಪಿದ್ದರು. ನೂರಾರು ಜನರು ಗಾಯಗೊಂಡಿದ್ದರು. ಅಂದಿನಿಂದ, ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಇತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇತ್ತೀಚೆಗೆ, ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆತ್ಮಹತ್ಯೆ ಬಾಂಬ್ ದಾಳಿ ಕೂಡ ನಡೆದಿತ್ತು. ಈ ಕೃತ್ಯವನ್ನು, ಅಫ್ಘಾನ್‌ ಮೂಲದ ಉಗ್ರಗಾಮಿ ಗುಂಪು ನಡೆಸಿದೆ ಎಂದು ಆರೋಪಿಸಲಾಗಿತ್ತು. ಹೀಗಾಗಿ, ಅಫ್ಘಾನ್‌ನಲ್ಲಿರುವ ಉಗ್ರರ ಗುಂಪುಗಳನ್ನು ಗುರಿಯಾಗಿಸಿಕೊಂಡು ಪಾಕ್ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಅಫ್ಘಾನಿಸ್ತಾನ ಮೂಲದ ಉಗ್ರಗಾಮಿ ಗುಂಪುಗಳನ್ನು ಗುರಿಯಾಗಿಸಿಕೊಂಡು ಗಡಿ ಪ್ರದೇಶದ ಏಳು ಸ್ಥಳಗಳ ಮೇಲೆ ದಾಳಿ ನಡೆದಿದೆ ಎಂದು ಪಾಕ್ ಹೇಳಿಕೊಂಡಿದೆ.

ಪಾಕ್ ಸೇನೆಯು ಪಾಕಿಸ್ತಾನಿ ತಾಲಿಬಾನ್ ಮತ್ತು ಅದರ ಸಹವರ್ತಿಗಳನ್ನು ಹಾಗೂ ಇಸ್ಲಾಮಿಕ್ ಸ್ಟೇಟ್ ಗುಂಪಿನ ಅಂಗ ಸಂಘಟನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ತಿಳಿಸಿದೆ.

ನಂಗರ್‌ಹಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ದಾಳಿಗಳು ನಡೆದಿವೆ ಎಂದು ಅಫ್ಘಾನಿಸ್ತಾನ ಹೇಳಿದೆ. ದಾಳಿಯಲ್ಲಿ, “12 ಮಕ್ಕಳು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...