ಪಾಕಿಸ್ತಾನದಲ್ಲಿ ನಾಳೆ(ಫೆ.8)ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣೆಗೂ ಮುನ್ನಾದಿನವಾದ ಇಂದು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಎರಡು ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ.
ಬಲೂಚಿಸ್ತಾನ್ ಪ್ರಾಂತ್ಯದ ಪಿಶಿನ್ ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರ ಪಕ್ಷದ ಕಚೇರಿಯ ಹೊರಗೆ ನಡೆದ ಮೊದಲ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಸುಮಾರು 150 ಕಿ.ಮೀ ದೂರದಲ್ಲಿರುವ ಕಿಲಾ ಸೈಫ್ ಉಲ್ಲಾ ಜಿಲ್ಲೆಯಲ್ಲಿ ನಡೆದ ಎರಡನೇ ಸ್ಫೋಟದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಈ ಎರಡು ಸ್ಫೋಟಗಳಲ್ಲಿ ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಅಫ್ಘಾನ್ ಗಡಿಯ ಆಗ್ನೇಯಕ್ಕೆ 100 ಕಿಮೀ ದೂರದಲ್ಲಿರುವ ಪಿಶಿನ್‌ನಲ್ಲಿ ನಡೆದ ದಾಳಿಯ ಹೊಣೆಯನ್ನು ಯಾವುದೇ ಗುಂಪು ಇನ್ನೂ ಹೊತ್ತುಕೊಂಡಿಲ್ಲ. ಈ ದಾಳಿಯಲ್ಲಿ 25 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದು, ಸ್ವತಂತ್ರ ಅಭ್ಯರ್ಥಿಯ ಚುನಾವಣಾ ಕಚೇರಿಯ ಹೊರಗೆ ಮೊದಲ ಸ್ಫೋಟ ಸಂಭವಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಜೆಯುಐ-ಎಫ್ ಪಕ್ಷದ ಚುನಾವಣಾ ಕಚೇರಿಯನ್ನು ಗುರಿಯಾಗಿಸಿಕೊಂಡು ಫೋರ್ಟ್ ಸೈಫ್ ಉಲ್ಲಾದ ಮುಖ್ಯ ಮಾರುಕಟ್ಟೆಯಲ್ಲಿ ಎರಡನೇ ಸ್ಫೋಟದ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾರ್ವತ್ರಿಕ ಚುನಾವಣೆಯ ಘೋಷಣೆಯ ನಂತರ ಬಲೂಚಿಸ್ತಾನ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯಗಳಲ್ಲಿ ನಂತರ ಕಳೆದ ಒಂದು ವಾರದಲ್ಲಿ ಹಿಂಸಾತ್ಮಕ ಘಟನೆಗಳು ನಿರಂತರವಾಗಿ ನಡೆಯುತ್ತಿವೆ.
– بلوچستان دھماکے ‘حکومت بلوچستان کا3 روزہ سوگ کا اعلان کل ہر صورت الیکشن ہونگے ‘ جان اچکزئی کا اعلان
پشین اور قلعہ سیف اللہ میں دھماکے ‘ نگران وزیر اطلاعات بلوچستان جان اچکزئی کی پریس کانفرنس
Two Blast In Balochistan | Blast in Pashin and Qila Saifullah | Balochistan caretaker… pic.twitter.com/EwmjPUgAUz
— Daily Qudrat ( Pakistan Latest News ) (@DailyQudrat) February 7, 2024
ಈ ಭೀಕ ಬಾಂಬ್ ಸ್ಫೋಟಗಳ ನಂತರವೂ, ಬಲೂಚಿಸ್ತಾನ್ ಸರ್ಕಾರವು ಮತದಾನ ಪ್ರಕ್ರಿಯೆಯು ಯೋಜಿಸಿದಂತೆ ಮುಂದುವರಿಯುತ್ತದೆ ಎಂದು ಹೇಳಿದೆ.
ಬಾಂಬ್ ಸ್ಫೋಟದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಲೂಚಿಸ್ತಾನ್ ಪ್ರಾಂತ್ಯದ ಮಾಹಿತಿ ಸಚಿವ ಜಾನ್ ಅಚಕ್‌ಝಾಯ್, “ಭಯೋತ್ಪಾದಕರಿಗೆ ಈ ಪ್ರಮುಖ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ದುರ್ಬಲಗೊಳಿಸಲು ಅಥವಾ ಬುಡಮೇಲು ಮಾಡಲು ನಾವು ಅನುಮತಿಸುವುದಿಲ್ಲ. ನಾಳೆಯ ಮತದಾನ ಪ್ರಕ್ರಿಯೆಯು ಯೋಜಿಸಿದಂತೆ ಮುಂದುವರಿಯುತ್ತದೆ. ಜನರು ಮತದಾನ ಮಾಡಲಿದ್ದಾರೆ” ಎಂದು ತಿಳಿಸಿದ್ದಾರೆ.