ಇಂಧನ ಬಿಕ್ಕಟ್ಟು: ಪಾಕ್‌ನ ಸರ್ಕಾರಿ ಸ್ವಾಮ್ಯದ ನೌಕರರ ವೇತನದಲ್ಲಿ ಶೇ. 30ರಷ್ಟು ಕಡಿತ

Date:

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ ಎದುರಾಗಿರುವ ಇಂಧನ ಬಿಕ್ಕಟ್ಟನ್ನು ನಿಭಾಯಿಸಲು ಪಾಕಿಸ್ತಾನ ಸರ್ಕಾರವು ಕಠಿಣ ಆರ್ಥಿಕ ಮಿತವ್ಯಯ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಮತ್ತು ಸ್ವಾಯತ್ತ ಸಂಸ್ಥೆಗಳ ನೌಕರರ ವೇತನದಲ್ಲಿ ಶೇಕಡಾ 5 ರಿಂದ 30ರವರೆಗೆ ಕಡಿತಗೊಳಿಸಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಶನಿವಾರ ಅನುಮೋದನೆ ನೀಡಿದ್ದಾರೆ ಎಂದು ಪಿಟಿಐ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

- Advertisement -

​ಪ್ರಧಾನಿ ಕಚೇರಿ ಹೊರಡಿಸಿರುವ ಹೇಳಿಕೆಯ ಪ್ರಕಾರ, ಇಂಧನ ಬೆಲೆಯಲ್ಲಿ ಆಗಿರುವ ತೀವ್ರ ಏರಿಕೆ ಮತ್ತು ಸರ್ಕಾರದ ವೆಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯ ತೀರ್ಮಾನದಂತೆ, ಸರ್ಕಾರಿ ನೌಕರರಂತೆಯೇ, ಸರ್ಕಾರದ ಆಶ್ರಯದಲ್ಲಿರುವ ಸರ್ಕಾರಿ ಸ್ವಾಮ್ಯದ ಉದ್ಯಮಗಳು ಮತ್ತು ಸ್ವಾಯತ್ತ ಸಂಸ್ಥೆಗಳ ನೌಕರರ ವೇತನದಲ್ಲಿ ಶೇ 5ರಿಂದ ಶೇ. 30 ರಷ್ಟು ಕಡಿತ ಇರಲಿದೆ. ಈ ಮಿತವ್ಯಯ ಕ್ರಮಗಳ ಮೂಲಕ ಉಳಿತಾಯವಾಗುವ ಹಣವನ್ನು ಕೇವಲ ‘ಸಾರ್ವಜನಿಕ ಪರಿಹಾರಕ್ಕಾಗಿ’ ಮಾತ್ರ ಬಳಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

​ಮುಂಬರುವ ಎರಡು ತಿಂಗಳ ಕಾಲ ಸರ್ಕಾರಿ ವಾಹನಗಳಿಗೆ ನೀಡುತ್ತಿರುವ ಇಂಧನ ಪ್ರಮಾಣದಲ್ಲಿ ಶೇ. 50ರಷ್ಟು ಕಡಿತ ಮಾಡಲಾಗುವುದು ಮತ್ತು ಈ ಅವಧಿಯಲ್ಲಿ ಶೇ. 60ರಷ್ಟು ಸರ್ಕಾರಿ ವಾಹನಗಳನ್ನು ರಸ್ತೆಗೆ ಇಳಿಸದಿರಲು ನಿರ್ಧರಿಸಲಾಗಿದೆ. ಈ ಕ್ರಮಗಳ ಮೇಲ್ವಿಚಾರಣೆಗಾಗಿ ಥರ್ಡ್-ಪಾರ್ಟಿ ಆಡಿಟ್(ಮೂರನೇ ವ್ಯಕ್ತಿಯ ಲೆಕ್ಕಪರಿಶೋಧನೆ) ನಡೆಸಲಾಗುವುದು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಲಾಗಿದೆ. ಅಲ್ಲದೆ, ನಿಗಮಗಳು ಮತ್ತು ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರತಿನಿಧಿಗಳಿಗೆ ಇನ್ನು ಮುಂದೆ ಸಭೆಯಲ್ಲಿ ಭಾಗವಹಿಸುವ ಶುಲ್ಕ ನೀಡುವುದಿಲ್ಲ;ಬದಲಿಗೆ ಅದನ್ನು ಉಳಿತಾಯದ ಭಾಗವಾಗಿ ಪರಿಗಣಿಸಲಾಗುವುದು. ಸರ್ಕಾರದ ಹೊಸ ವಾಹನಗಳ ಖರೀದಿ ಹಾಗೂ ಇತರ ಎಲ್ಲಾ ಅನಗತ್ಯ ಖರೀದಿಗಳ ಮೇಲಿನ ಸಂಪೂರ್ಣ ನಿಷೇಧದ ಅನುಷ್ಠಾನದ ಕುರಿತೂ ಸಭೆಯಲ್ಲಿ ವಿವರಿಸಲಾಯಿತು ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

​ಮಿತವ್ಯಯ ಯೋಜನೆಯಡಿ, ಸಂಪುಟ ಸದಸ್ಯರು, ಮಂತ್ರಿಗಳು, ಸಲಹೆಗಾರರು ಮತ್ತು ವಿಶೇಷ ಸಹಾಯಕರ ಮುಂದಿನ ಎರಡು ತಿಂಗಳ ವೇತನವನ್ನೂ ‘ಸಾರ್ವಜನಿಕ ಕಲ್ಯಾಣದ ಉಳಿತಾಯವಾಗಿ’ ಬಳಸಲಾಗುವುದು. ಇದರೊಂದಿಗೆ, ಸರ್ಕಾರಿ ಅಧಿಕಾರಿಗಳು, ಸಚಿವರು, ರಾಜ್ಯ ಸಚಿವರು ಹಾಗೂ ವಿಶೇಷ ಸಹಾಯಕರ ವಿದೇಶಿ ಪ್ರವಾಸದ ಮೇಲೆ ಹೇರಿರುವ ಸಂಪೂರ್ಣ ನಿಷೇಧವು ಮುಂದೆಯೂ ಜಾರಿಯಲ್ಲಿರಲಿದೆ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

​ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಆರ್ಥಿಕ ಪರಿಣಾಮಗಳನ್ನು ಪಾಕಿಸ್ತಾನವು ಈಗಾಗಲೇ ಅನುಭವಿಸುತ್ತಿದೆ. ಕಳೆದ ಶುಕ್ರವಾರವಷ್ಟೇ ಪೆಟ್ರೋಲಿಯಂ ಬೆಲೆಯನ್ನು ಪ್ರತಿ ಲೀಟರ್‌ಗೆ 55 ರೂ.ಗಳಷ್ಟು ಹೆಚ್ಚಿಸಲಾಯಿತು, ಇದು ಇಂಧನ ಬಳಕೆಯನ್ನು ನಿಯಂತ್ರಿಸುವ ಕ್ರಮಗಳನ್ನು ಪರಿಚಯಿಸಲು ಸರ್ಕಾರವನ್ನು ಪ್ರೇರೇಪಿಸಿತು. ಇದಕ್ಕೂ ಮೊದಲು, ಅಧಿಕೃತ ವಾಹನಗಳಿಗೆ ಎರಡು ತಿಂಗಳ ಕಾಲ ಇಂಧನ ಹಂಚಿಕೆಯನ್ನು ಶೇ. 50ರಷ್ಟು ಕಡಿಮೆ ಮಾಡುವುದು, ಈ ಅವಧಿಯಲ್ಲಿ ಶೇ. 60ರಷ್ಟು ಸರ್ಕಾರಿ ವಾಹನಗಳನ್ನು ರಸ್ತೆಯಿಂದ ತೆಗೆಯುವುದು ಮತ್ತು ಸರ್ಕಾರಿ ಕಚೇರಿಗಳಿಗೆ ವಾರಕ್ಕೆ ನಾಲ್ಕು ದಿನಗಳ ಕೆಲಸದ ಅವಧಿಯನ್ನು ಪರಿಚಯಿಸುವಂತಹ ಕ್ರಮಗಳನ್ನು ಸರ್ಕಾರ ಜಾರಿ ಮಾಡಿತ್ತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ­| ಫಾರ್ಮ್-7 ದುರ್ಬಳಕೆ: ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ತಾಕೀತು!

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ‘ಫಾರ್ಮ್-7’ ನಮೂನೆಗಳನ್ನು ಅಪಾರ ಪ್ರಮಾಣದಲ್ಲಿ...

ವಿಮಲ್ ಜಾಹೀರಾತು ವಿವಾದ: ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ ನಟ ಅಜಯ್ ದೇವಗನ್! 

'ವಿಮಲ್ ಏಲಕ್ಕಿ' ಜಾಹೀರಾತಿನಲ್ಲಿ ನಟಿಸಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಇಲಾಖೆ...

ಅವಳ ಕಣ್ಣೋಟ | ‘ಅರುವಿ’- ಉಸಿರುಗಟ್ಟುವ ನೋವು, ಉರಿಯುವ ಸಿಟ್ಟು

ಚಿತ್ರದ ಮತ್ತೊಂದು ಮುಖ್ಯ ಚರ್ಚೆ ಕ್ಷಮೆಯ ಕುರಿತದ್ದು. ಅರುವಿ ತನ್ನನ್ನು ಶೋಷಿಸಿದ...

2047ರ ವೇಳೆಗೆ ರಾಜ್ಯದ ನಗರ ಜನಸಂಖ್ಯೆ 70%ಗೆ ಏರಿಕೆ: ಸಿಎಂ ಡಿ.ಕೆ ಶಿವಕುಮಾರ್

ಕರ್ನಾಟಕದ ನಗರ ಪ್ರದೇಶಗಳ ಜನಸಂಖ್ಯೆಯು ಪ್ರಸ್ತುತ 46% ಇದ್ದು, 2047ರ ವೇಳೆಗೆ...