ಪಾಕಿಸ್ತಾನ | ವರದಿ ಮಾಡುತ್ತಿದ್ದಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪತ್ರಕರ್ತ: ವಿಡಿಯೋ ವೈರಲ್

Date:

ವರದಿ ಮಾಡುತ್ತಿದ್ದಾಗಲೇ ಪತ್ರಕರ್ತ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಪಾಕಿಸ್ತಾನದ ರಾವಲ್‌ಪಿಂಡಿಯ ಚಾಹನ್ ಅಣೆಕಟ್ಟು ಬಳಿ ನಡೆದಿದೆ. ಪತ್ರಕರ್ತ ಅಣೆಕಟ್ಟು ಬಳಿ ನೇರ ಪ್ರಸಾರದಲ್ಲಿ ವರದಿ ಮಾಡುತ್ತಿದ್ದಾಗ ಪ್ರವಾಹ ಉಂಟಾಗಿ ಕೊಚ್ಚಿ ಹೋಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

- Advertisement -

ಅಲ್ ಅರೇಬಿಯಾ ಇಂಗ್ಲಿಷ್ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ವರದಿಗಾರ ಕುತ್ತಿಗೆಯವರೆಗೂ ಮುಳಿಗಿದ್ದರೂ ಕೈಯಲ್ಲಿ ಮೈಕ್ರೊಫೋನ್ ಹಿಡಿದುಕೊಂಡು ವರದಿಗಾರ ನೇರ ಪ್ರಸಾರದಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಪಿಎನ್‌ಬಿ ವಂಚನೆ ಪ್ರಕರಣ | ಪ್ರಧಾನಿ ಮೋದಿಯವರ ‘ಮೆಹುಲ್ ಭಾಯ್’ ಬಂಧನ; ಹಳೆಯ ವಿಡಿಯೋ ವೈರಲ್

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೆಲವರು ವರದಿಗಾರನ ಧೈರ್ಯವನ್ನು ಪ್ರಶಂಸಿದರೆ ಇನ್ನು ಕೆಲವರು ಇದು ಪತ್ರಕರ್ತರ ಸುರಕ್ಷತೆಗೆ ಎಷ್ಟು ಅಪಾಯವಿದೆ ಎಂಬುದಕ್ಕೆ ಸಾಕ್ಷಿ ಎಂದು ಹೇಳಿಕೊಂಡಿದ್ದಾರೆ. ಪತ್ರಿಕೋದ್ಯಮದ ಅಗತ್ಯ, ಆದರೆ ಈ ಜೀವ ಕಳೆದುಕೊಳ್ಳುವಷ್ಟು ಅಲ್ಲ ಎಂದೂ ನೆಟ್ಟಿಗರು ಹೇಳಿದ್ದಾರೆ. ಇನ್ನು ಕೆಲವರು ಟಿವಿ ಚಾನೆಲ್‌ಗಳ ‘ಟಿಆರ್‌ಪಿ ಹಸಿವು’ ಎಂದು ದೂಷಿಸಿದ್ದಾರೆ.

ಹಲವು ಅಂತಾರಾಷ್ಟ್ರೀಯ ಮಾಧ್ಯಮಗಳು ಈ ಸುದ್ದಿಯನ್ನು ಮಾಡಿದೆ. ಆದರೆ ಇದು ಎಐ ವಿಡಿಯೋ ಆಗಿರಬಹುದು ಎಂಬ ಗುಮಾನಿಯೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಪಾಕಿಸ್ತಾನದಲ್ಲಿ ಜೂನ್ 26ರಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈವರೆಗೆ ಕನಿಷ್ಠ 116 ಮಂದಿ ಸಾವನ್ನಪ್ಪಿದ್ದಾರೆ, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪಂಜಾಬ್ ಪ್ರಾಂತ್ಯದಲ್ಲಿ ಅತಿ ಹೆಚ್ಚು(44) ಸಾವುಗಳ ವರದಿಯಾಗಿದೆ. ಲಕ್ಷಾಂತರ ಮಂದಿ ಸ್ಥಳಾಂತರಗೊಂಡಿದ್ದು, ನೂರಾರು ಮನೆಗಳು ನಾಶವಾಗಿದೆ. ಚಹಾನ್ ಅಣೆಕಟ್ಟು ಕುಸಿತವು ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸಿದೆ. ಅಲ್ಲಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...