ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧವಾಗಿದ್ದೇವೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಭಾರತವನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಭಾರತದ ಪಂಜಾಬ್ ಪ್ರಾಂತ್ಯದಲ್ಲಿರುವ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ.
ಕಮ್ರಾ ವಾಯುನೆಲೆಯಲ್ಲಿ ಇತ್ತೀಚೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಸೇನಾ ಘರ್ಷಣೆಯಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಮತ್ತು ಸೈನಿಕರೊಂದಿಗೆ ಪಾಕ್ ಪ್ರಧಾನಿ ಸಂವಾದ ನಡೆಸಿದರು. ಬಳಿಕ “ನಾವು ಅದರೊಂದಿಗೆ (ಭಾರತ) ಶಾಂತಿ ಮಾತುಕತೆ ನಡೆಸಲು ಸಿದ್ಧರಿದ್ದೇವೆ” ಎಂದು ಹೇಳಿದರು.
ಇದನ್ನು ಓದಿದ್ದೀರಾ? ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ
ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶವು ನಮ್ಮ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗಗಳಾಗಿವೆ ಎಂದು ಭಾರತ ಹೇಳಿದೆ. ಆದರೆ “ಶಾಂತಿಗಾಗಿ ನಾವು ಮುಂದಿಡುವ ಷರತ್ತುಗಳಲ್ಲಿ ಕಾಶ್ಮೀರ ಸಮಸ್ಯೆಯೂ ಒಳಗೊಂಡಿವೆ” ಪಾಕ್ ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.
ಶೆಹಬಾಜ್ ಜೊತೆ ಉಪ ಪ್ರಧಾನಿ ಇಶಾಕ್ ದಾರ್, ರಕ್ಷಣಾ ಸಚಿವ ಖವಾಜಾ ಆಸಿಫ್, ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ವಾಯುಪಡೆಯ ಮುಖ್ಯಸ್ಥ, ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಜಹೀರ್ ಅಹ್ಮದ್ ಬಾಬರ್ ಸಿಧು ಅವರು ವಾಯುನೆಲೆಗೆ ತೆರಳಿದ್ದರು ಎಂದು ವರದಿಯಾಗಿದೆ.
ಏಪ್ರಿಲ್ 22ರಂದು ಪಾಕಿಸ್ತಾನದ ಉಗ್ರ ಸಂಘಟನೆಯು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದನಾ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಈ ದಾಳಿ ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಪಹಲ್ಗಾಮ್ ದಾಳಿಯ ಹೊಣೆ ಹೊತ್ತುಕೊಂಡಿದೆ.
ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಲ್ಲಿ ದಾಳಿ ನಡೆಸಿವೆ. ಅದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಧಿಕೃತವಾಗಿ ಯುದ್ಧ ಆರಂಭಿಸುವುದಕ್ಕೂ ಮುನ್ನವೇ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದೀಗ ಶಾಂತಿ ಮಾತುಕತೆಯ ಪ್ರಸ್ತಾಪವನ್ನು ಪಾಕ್ ಮುಂದಿಟ್ಟಿದೆ.
