ಇಸ್ಲಾಮಾಬಾದ್ ದಾಳಿ ಹಿಂದೆ ಭಾರತದ ಕೈವಾಡವೆಂದು ಪಾಕ್ ಆರೋಪ; ಆಧಾರರಹಿತವೆಂದ ಕೇಂದ್ರ ಸರ್ಕಾರ

Date:

ಮಂಗಳವಾರ (ನ.11), ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಈ ದಾಳಿಯ ಹಿಂದೆ ಭಾರತದ ಬೆಂಬಲವಿದೆ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಆರೋಪಿಸಿದ್ದಾರೆ. ಈ ಆರೋಪವನ್ನು ಭಾರತ ಸರ್ಕಾರ ತಿರಸ್ಕರಿಸಿದೆ. “ಪಾಕಿಸ್ತಾನದ ಭ್ರಮನಿರಸನಗೊಂಡ ನಾಯಕತ್ವವು ತಮ್ಮ ಮನೆಯಲ್ಲಿ ನಡೆಯುತ್ತಿರುವ ಕೃತ್ಯಗಳಲ್ಲಿ ಹೊಣೆಗಾರಿಕೆಯಿಂದ ದೂರವಿರಲು ‘ಆಧಾರಹಿತ, ಸತ್ಯಕ್ಕೆ ದೂರವಾದ’ ಹೇಳಿಕೆಗಳನ್ನು ನೀಡುತ್ತಿದೆ” ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

- Advertisement -

ಪಾಕ್ ರಾಜಧಾನಿ ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯ ಆವರಣದ ಗೇಟ್‌ ಬಳಿ ಭೀಕರ ಸ್ಪೋಟ ಸಂಭವಿಸಿದೆ. ಇದನ್ನು ಆತ್ಮಹತ್ಯಾ ದಾಳಿ ಎಂದು ಹೇಳಲಾಗಿದೆ. ಈ ದಾಳಿಯ ಹಿಂದೆ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಕೈವಾಡವಿದೆ. ಭಾರತ ಸರ್ಕರದ ಪ್ರಾಯೋಜಕತ್ವವಿದೆ ಎಂದು ಪ್ರಧಾನಿ ಷರೀಫ್ ಹೇಳಿಕೆ ನೀಡಿದ್ದಾರೆ. ಆದರೆ, ಟಿಟಿಪಿ ಈ ದಾಳಿಯ ಹೊಣೆಗಾರಿಕೆಯನ್ನು ನಿರಾಕರಿಸಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

 ಷರೀಫ್‌ ಅವರ ಆರೋಪವನ್ನು ಭಾರತದ ವಿದೇಶಾಂಗ ಸಚಿವಾಲಯವು ತಳ್ಳಿಹಾಕಿದೆ. ಸಚಿವಾಲಯದ ವಕ್ತಾರ ವಕ್ತಾರ ರಣಧೀರ್ ಜೈಸ್ವಾಲ್ ಅವರು, “ಸ್ಪಷ್ಟವಾಗಿ ಭ್ರಮನಿರಸನಗೊಂಡ ಪಾಕಿಸ್ತಾನಿ ನಾಯಕತ್ವವು ಮಾಡುತ್ತಿರುವ ಆಧಾರರಹಿತ ಆರೋಪಗಳನ್ನು ಭಾರತ ನಿಸ್ಸಂದಿಗ್ಧವಾಗಿ ತಿರಸ್ಕರಿಸುತ್ತದೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಹರಿಯಾಣದ ಮತದಾರೆ ‘ಬ್ರೆಜಿಲ್ ಮಾಡೆಲ್’ ಯಾರು ಗೊತ್ತೇ?

ಪಾಕ್ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರಿಗೆ ಹೆಚ್ಚಿನ ಅಧಿಕಾರ ಮತ್ತು ಕಾನೂನು ವಿನಾಯಿತಿ ನೀಡುವ ಪ್ರಸ್ತಾಪವನ್ನು ಪಾಕಿಸ್ತಾನದ ಸೆನೆಟ್ ಸೋಮವಾರ ಅಂಗೀಕರಿಸಿದೆ. ಈ ವಿವಾದಾತ್ಮಕ ಸಾಂವಿಧಾನಿಕ ತಿದ್ದುಪಡಿಯನ್ನು ಉಲ್ಲೇಖಿಸಿರುವ ಜೈಸ್ವಾಲ್, “ಪಾಕಿಸ್ತಾನದ ನಾಯಕತ್ವವು ತಮ್ಮ ಮನೆಯಲ್ಲಿ ‘ನಡೆಯುತ್ತಿರುವ ಸಾಂವಿಧಾನಿಕ ಉಲ್ಲಂಘನೆ’ಯಿಂದ ಜನರ ಚಿತ್ತವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ದೇಶದೊಳಗೆ ಮಿಲಿಟರಿ ಪ್ರೇರಿತ ಸಾಂವಿಧಾನಿಕ ವಿಧ್ವಂಸಕತೆ ಮತ್ತು ಅಧಿಕಾರ ದಬ್ಬಾಳಿಕೆ ನಡೆಸಲು ಅಲ್ಲಿನ ಸರ್ಕಾರ ಮುಂದಾಗಿದೆ. ಅದಕ್ಕಾಗಿ, ತಿದ್ದುಪಡಿಗಳನ್ನು ತರುತ್ತಿದೆ. ಈ ಸಾಂವಿಧಾನಿಕ ಉಲ್ಲಂಘನೆಗಳನ್ನು ಜನರು ಪ್ರಶ್ನಿಸದಂತೆ ತಡೆಯಲು, ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಭಾರತದ ವಿರುದ್ಧ ಸುಳ್ಳು ನಿರೂಪಣೆಗಳನ್ನು ರೂಪಿಸುತ್ತಿದೆ. ಆದರೆ, ಪಾಕ್‌ನ ಧೋರಣೆ ಬಗ್ಗೆ ಅಂತರರಾಷ್ಟ್ರೀಯ ಸಮುದಾಯವು ಚೆನ್ನಾಗಿ ತಿಳಿದಿದೆ. ಪಾಕಿಸ್ತಾನದ ಹತಾಶ ದಿಕ್ಕು ತಪ್ಪಿಸುವ ತಂತ್ರಗಳಿಂದ ಜಗತ್ತು ದಾರಿ ತಪ್ಪುವುದಿಲ್ಲ” ಎಂದು ಅವರು ಹೇಳಿದ್ದಾರೆ.

ದೆಹಲಿಯ ಕೆಂಪು ಕೋಟೆಯ ಬಳಿಯೂ ಸೋಮವಾರ ಕಾರೊಂದು ಸ್ಪೋಟಗೊಂಡಿದೆ. ಘಟನೆಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯ ಮರುದಿನವೇ ಇಸ್ಲಾಮಾಬಾದ್‌ನಲ್ಲಿ ಸ್ಪೋಟ ನಡೆದಿದೆ. ದೆಹಲಿಯಲ್ಲಾದ ಘಟನೆಗೆ ಬಿಜೆಪಿಗರು ಮತ್ತು ಹಲವು ಮಾಧ್ಯಮಗಳು ಪಾಕಿಸ್ತಾನ ಮತ್ತು ಮುಸ್ಲಿಮರನ್ನು ದೂಷಿಸುತ್ತಿದ್ದಾರೆ. ಪಾಕಿಸ್ತಾನದಲ್ಲಾದ ಘಟನೆಗೆ ಅಲ್ಲಿನ ನಾಯಕತ್ವವು ಭಾರತ ಸರ್ಕಾರವನ್ನು ಟೀಕಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...