ಪಾಕಿಸ್ತಾನ |ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 31ಕ್ಕೂ ಜನರು ಸಾವು

Date:

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ದಾಳಿ ನಡೆದಿದ್ದು, ಕನಿಷ್ಠ 31ಕ್ಕೂ ಜನರು ಸಾವನ್ನಪ್ಪಿದ್ದಾರೆ. 169 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

- Advertisement -

ಇಸ್ಲಾಮಾಬಾದ್‌ನ ಶೆಹಜಾದ್ ಟೌನ್ ಪ್ರದೇಶದ ತರ್ಲೈ ಇಮಾಮ್‌ಬರ್ಗಾದಲ್ಲಿ ಸ್ಫೋಟ ಸಂಭವಿಸಿದೆ. ಆತ್ಮಾಹುತಿ ಬಾಂಬರ್‌ನನ್ನು ಇಮಾಮ್‌ಬರ್ಗಾದ ಗೇಟ್‌ನಲ್ಲಿ ತಡೆಯಲಾಗಿತ್ತು. ಆದರೆ, ಆತ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಸ್ಫೋಟದ ಹೊಣೆಗಾರಿಕೆಯನ್ನು ಈವರೆಗೆ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಆದಾಗ್ಯೂ, ದಾಳಿಕೋರ ವಿದೇಶಿ ಪ್ರಜೆಯಾಗಿದ್ದಾನೆ. ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಸಂಘಟನೆ ಜೊತೆ ಸಂಪರ್ಕ ಹೊಂದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಪಡೆಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪಿಐಎಂಎಸ್ ಮತ್ತು ಪಾಲಿಕ್ಲಿನಿಕ್‌ಗೆ ವರ್ಗಾಯಿಸಲಾಗುತ್ತಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯದ ಹೊರಗೆ ಆತ್ಮಹತ್ಯಾ ಬಾಂಬ್ ದಾಳಿ ನಡೆದ ಸುಮಾರು ಮೂರು ತಿಂಗಳ ನಂತರ ಈ ದಾಳಿ ನಡೆದಿದೆ. ನವೆಂಬರ್‌ ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...