ಪಾಕಿಸ್ತಾನ | ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಸ್ಥಗಿತ

Date:

ಪಾಕಿಸ್ತಾನ ಸರ್ಕಾರವು ಶುಕ್ರವಾರದಂದು ರಾಜಧಾನಿ ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಮೊಬೈಲ್ ಮತ್ತು ಇಂಟರ್‌ನೆಟ್‌ ಸೇವೆಗಳನ್ನು ಸ್ಥಗಿತಗೊಳಿಸಿದೆ. ಇಸ್ಲಾಮಿಕ್ ಪಕ್ಷವಾದ ಟಿಎಲ್‌ಪಿ ಯೋಜಿಸಿರುವ ಪ್ರತಿಭಟನೆಗೆ ಮುನ್ನ ರಾಜಧಾನಿಯ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿದೆ.

- Advertisement -

ಗುರುವಾರದಂದು ಲಾಹೋರ್ ನಗರದಲ್ಲಿ ಕಾನೂನು ಜಾರಿ ಅಧಿಕಾರಿಗಳು ಮತ್ತು ಟಿಎಲ್‌ಪಿ ಸದಸ್ಯರ ನಡುವಿನ ಹಿಂಸಾತ್ಮಕ ಘರ್ಷಣೆಯಿಂದ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಸ್ರೇಲ್ ವಿರೋಧಿ ಪ್ರತಿಭಟನೆಯ ಹಿನ್ನಲೆಯಲ್ಲಿ ಈ ಘರ್ಷಣೆಗಳು ನಡೆದಿವೆ. ಟಿಎಲ್‌ಪಿ ಶುಕ್ರವಾರದಂದು ಇಸ್ಲಾಮಾಬಾದ್‌ನಲ್ಲಿರುವ ಅಮೆರಿಕಾ ರಾಯಭಾರ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಲು ಘೋಷಿಸಿದ ನಂತರ, ಪಂಜಾಬ್ ಪೊಲೀಸರು ಟಿಎಲ್‌ಪಿ ಮುಖ್ಯಸ್ಥ ಸಾದ್ ಹುಸೇನ್ ರಿಜ್ವಿಯನ್ನು ಬಂಧಿಸಲು ಲಾಹೋರ್‌ನಲ್ಲಿರುವ ಟಿಎಲ್‌ಪಿ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇಂಟರ್ನೆಟ್ ಮತ್ತು ರಸ್ತೆಗಳು ಬಂದ್
ಗೃಹ ಸಚಿವಾಲಯವು ಪಾಕಿಸ್ತಾನ ಟೆಲಿಕಾಮ್ಯುನಿಕೇಷನ್ ಅಥಾರಿಟಿ (ಪಿಟಿಎ)ಗೆ ಶುಕ್ರವಾರದ ಮಧ್ಯರಾತ್ರಿಯಿಂದ ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಮೊಬೈಲ್ ಮತ್ತು ಇಂಟರ್‌ನೆಟ್ ಸೇವೆಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸುವಂತೆ ಸೂಚಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಂವಿಧಾನ ಬದಲಿಸುವ ಸನಾತನಿಗಳ ಹುನ್ನಾರಕ್ಕೆ ವಕೀಲರೇ ದಾಳ

ಪಂಜಾಬ್ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, 10 ದಿನಗಳ ಕಾಲ ಎಲ್ಲ ರೀತಿಯ ಪ್ರತಿಭಟನೆಗಳು, ರ‍್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳನ್ನು ನಿಷೇಧಿಸಿದೆ. ಪಂಜಾಬ್ ಗೃಹ ಇಲಾಖೆಯ ಅಧಿಸೂಚನೆಯ ಪ್ರಕಾರ, ಸಾರ್ವಜನಿಕ ಸ್ಥಳಗಳು, ಬೀದಿಗಳು ಮತ್ತು ತೆರೆದ ಪ್ರದೇಶಗಳಲ್ಲಿ ನಾಲ್ಕು ಅಥವಾ ಹೆಚ್ಚಿನ ಜನರ ಸಭೆಗಳನ್ನು ನಿಷೇಧಿಸಲಾಗಿದೆ. ಆದರೆ, ಈ ನಿರ್ಬಂಧವು ಪ್ರಾರ್ಥನೆ, ಮದುವೆ, ಅಂತ್ಯಕ್ರಿಯೆ, ಕಚೇರಿಗಳು ಅಥವಾ ನ್ಯಾಯಾಲಯದ ಆವರಣಕ್ಕೆ ಅನ್ವಯಿಸುವುದಿಲ್ಲ. ಜೊತೆಗೆ, ಆಯುಧಗಳ ಪ್ರದರ್ಶನ ಮತ್ತು ಲೌಡ್‌ಸ್ಪೀಕರ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ರಾವಲ್ಪಿಂಡಿಯಲ್ಲಿ 144 ಸೆಕ್ಷನ್ ಈಗಾಗಲೇ ಅಕ್ಟೋಬರ್ 11 ರವರೆಗೆ ಜಾರಿಯಲ್ಲಿದೆ. ಇಸ್ಲಾಮಾಬಾದ್‌ನಲ್ಲಿ, ಎಲ್ಲ ಪ್ರಮುಖ ಪ್ರವೇಶ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಕೆಂಪು ವಲಯವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಟಿಎಲ್‌ಪಿಯು ದೊಡ್ಡ ಪ್ರಮಾಣದ ಪ್ರತಿಭಟನೆಗೆ ಸಜ್ಜಾಗುತ್ತಿರುವ ಕಾರಣ ಕಾನೂನು ಜಾರಿ ಸಂಸ್ಥೆಗಳು ಕಟ್ಟೆಚ್ಚರ ವಹಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...